ರಾಜಕೀಯ

HDK ಜೊತೆ ರಮೇಶ್ ಜಾರಕಿಹೊಳಿ ಬಣ ಸಭೆ: ಪಕ್ಷದಲ್ಲಿನ ಒಳಜಗಳ ಕುರಿತು ಮಾತುಕತೆ?

ನವದೆಹಲಿಯಲ್ಲಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿರುವ ರಮೇಶ್ ಜಾರಕಿಹೊಳಿ ಬಣ, ರಾಜ್ಯ ಬಿಜೆಪಿ ಭಿನ್ನಮತದ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ.

HDK ಜೊತೆ ರಮೇಶ್ ಜಾರಕಿಹೊಳಿ ಬಣ ಸಭೆ: ಪಕ್ಷದಲ್ಲಿನ ಒಳಜಗಳ ಕುರಿತು ಮಾತುಕತೆ?
ಕುಮಾರಸ್ವಾಮಿ ಹಾಗೂ ರಮೇಶ್ ಜಾರಕಿಹೊಳಿ.
Published On :

ಬೆಂಗಳೂರು; ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ಸದ್ಯಕ್ಕೆ ನಿಲ್ಲುವಂತೆ ಕಾಣಿಸುತ್ತಿಲ್ಲ. ಭಿನ್ನಾಭಿಪ್ರಾಯ ವಿಚಾರ ಈಗಾಗಲೇ ಹೈಕಮಾಂಡ್ ಅಂಗಳ ತಲುಪಿದ್ದು, ಎಲ್ಲವೂ ಸರಿಹೋಗಲಿದೆ ಎನ್ನುತ್ತಿರುವಂತೆ ಶಾಸಕ ರಮೇಶ್ ಜಾರಕಿಹೊಳಿ ಮತ್ತು ಅವರ ತಂಡ ಭೇಟಿ ನವದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದೆ.

ನವದೆಹಲಿಯಲ್ಲಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿರುವ ರಮೇಶ್ ಜಾರಕಿಹೊಳಿ ಬಣ, ರಾಜ್ಯ ಬಿಜೆಪಿ ಭಿನ್ನಮತದ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಭಿನ್ನಮತ ವಿಚಾರದ ಬಗ್ಗೆ ಬಿಜೆಪಿ ಹೈಕಮಾಂಡ್​ ಜೊತೆ ಮಾತಾಡುವಂತೆ ಮನವಿ ಮಾಡಿದ್ದಾರೆ. ಆದರೆ, ರಾಜ್ಯ ಬಿಜೆಪಿ ಭಿನ್ನಮತದ ಚರ್ಚೆ ನಡೆಸಲು ಹೆಚ್​ಡಿ ಕುಮಾರಸ್ವಾಮಿ ನಿರಾಕರಿಸಿದ್ದಾರೆಂದು ತಿಳಿದುಬಂದಿದೆ.

ರಾಜ್ಯ ಬಿಜೆಪಿಯ ಆಂತರಿಕ ವಿಷಯಗಳಲ್ಲಿ ಮಧ್ಯಪ್ರವೇಶಿಸಲು ಇಚ್ಛಿಸುವುದಿಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆಂದು ಮೂಲಗಳು ತಿಳಿಸಿವೆ.

ಆದರೆ, ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವ ಕುರಿತು ವಿಜಯೇಂದ್ರ ಅವರನ್ನು ಭೇಟಿ ಮಾಡಲು ಅಥವಾ ರಾಜ್ಯ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಲು ಸಹಾಯ ಮಾಡಬಹುದೆಂದು ಕುಮಾರಸ್ವಾಮಿ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಸಲಹೆ ನೀಡಬೇಕಿದ್ದರೆ ಪಕ್ಷದ ಅಧ್ಯಕ್ಷ ವಿಜಯೇಂದ್ರ ಅವರ ಬಳಿ ಹೇಳೋಣ. ಇಲ್ಲವೇ ಸರ್ಕಾರದ ವಿರುದ್ಧ ಹೋರಾಟದ ಬಗ್ಗೆ ರಾಜ್ಯ ನಾಯಕರ ಜೊತೆ ಚರ್ಚಿಸೋಣ. ಆದರೆ ಆಂತರಿಕ ಜಗಳದ ಬಗ್ಗೆ ನಾನು ಚರ್ಚಿಸುವುದಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆಂದು ಮೂಲಗಳಉ ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.