'ಅವರು ಪ್ರಶ್ನೆ ಮಾಡುತ್ತಿರುವುದು ನನ್ನನ್ನಲ್ಲ ಖರ್ಗೆಯನ್ನೇ': ಸತೀಶ್ ಜಾರಕಿಹೊಳಿಗೆ ಡಿಕೆಶಿ ತಿರುಗೇಟು
ವಿಮಾನ ನಿಲ್ದಾಣದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಸಿಎಂ, ಅಧ್ಯಕ್ಷ ಸ್ಥಾನದ ವಿಚಾರ ಸ್ಪಷ್ಟಪಡಿಸಬೇಕಾಗಿರುವುದು ನಾನಲ್ಲ ಎಂದರು.

ಬೆಂಗಳೂರು: ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಮತ್ತು ಕೆಪಿಸಿಸಿ ಅಧ್ಯಕ್ಷ ಬದಲಾವಣೆ ವಿಚಾರ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಅಧ್ಯಕ್ಷ ಸ್ಥಾನದ ವಿಚಾರ ಸ್ಪಷ್ಟಪಡಿಸಬೇಕಾಗಿರುವುದು ನಾನಲ್ಲ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೇಳಲಿ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಗುರುವಾರ ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ನೂತನ ಪ್ರಧಾನ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ದೆಹಲಿಗೆ ತೆರಳಿದ್ದ ಡಿಕೆ ಶಿವಕುಮಾರ್ ಇಂದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ.
ವಿಮಾನ ನಿಲ್ದಾಣದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಸಿಎಂ, ಅಧ್ಯಕ್ಷ ಸ್ಥಾನದ ವಿಚಾರ ಸ್ಪಷ್ಟಪಡಿಸಬೇಕಾಗಿರುವುದು ನಾನಲ್ಲ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೇಳಲಿ. ಇವರು(ಅಹಿಂದ ನಾಯಕರು) ಪ್ರಶ್ನೆ ಮಾಡುತ್ತಿರುವುದು ನನ್ನನ್ನಲ್ಲ, ಖರ್ಗೆ ಅವರನ್ನು ಎಂದರು.
ಮೀಡಿಯಾದವರು ಕೊಡ್ತಾರಾ?
ಸ್ಥಾನ ಮೀಡಿಯಾದಲ್ಲೋ, ಅಂಗಡಿಯಲ್ಲೋ ಎಲ್ಲೋ ಸಿಗಲ್ಲ. ಪಕ್ಷದ ನಾಯಕರು ನಾವು ಮಾಡುವ ಕೆಲಸ ಗುರ್ತಿಸಿ ಯಾರ್ಯಾರಿಗೆ ಏನೋ ಕೊಡಬೇಕು ಕೊಡ್ತಾರೆ. ಮಿಡಿಯಾ ಮುಖಾಂತರ ಯಾರಾದರೂ ಪಾರ್ಟಿ ಹುದ್ದೆ ಕೇಳುತ್ತಾರಾ? ಎಂದರು.
ಯಾರಿಗಾದ್ರೂ ಯಾವಾದಾದ್ರೂ ಸ್ಥಾನ ಸಿಗಬೇಕಾದ್ರೆ ಮೀಡಿಯಾದವರು ಕೊಡ್ತಾರಾ? ಎಂದು ಪ್ರಶ್ನೆ ಮಾಡಿದ ಡಿಕೆಶಿ, ಯಾರೂ ಕೂಡ ಬಹಿರಂಗವಾಗಿ ಮಾತನಾಡಬಾರದು ಎಂದಿದ್ದಾರೆ. ರಣದೀಪ್ ಸಿಂಗ್ ಸುರ್ಜೇವಾಲ ಸಹ ಬೆಳಗಾವಿಗೆ ಬರುತ್ತಿದ್ದಾರೆ. ಏನಾದರೂ ಇದ್ದರೆ ರಾಹುಲ್ ಗಾಂಧಿ, ಖರ್ಗೆ ಜತೆ ಮಾತನಾಡಲಿ. ಅವರವರ ಶ್ರಮಕ್ಕೆ ತಕ್ಕ ಸ್ಥಾನವನ್ನು ನಾಯಕರು ಕೊಡುತ್ತಾರೆ ಎಂದರು.
ಶ್ರಮಪಟ್ಟು ನಾನು ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಲ್ಲ, ಕಾರ್ಯಕರ್ತರು ತಂದಿದ್ದು. ನಮ್ರತೆಯಿಂದ ಮನವಿ ಮಾಡ್ತೇನೆ, ಕಾಂಗ್ರೆಸ್ ಎಂಬುದು ಕಾರ್ಯಕರ್ತರ ಪಕ್ಷ ಎಂದು ಡಿಕೆ ಶಿವಕುಮಾರ್ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



