ನನ್ನನ್ನು ಪಕ್ಷದಿಂದ ಉಚ್ಚಾಟಿಸುವ ತಾಕತ್ ನಾಯಕರಿಗೆ ಇಲ್ಲ: ಜಿ.ಟಿ ದೇವೇಗೌಡ
ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅಗತ್ಯವಿಲ್ಲ. ಯಾವ ಪಕ್ಷದ ಯಾವ ನಾಯಕರ ಮೇಲೆ ಎಷ್ಟು ಎಫ್ಐಆರ್ ಗಳಿವೆ ಗೊತ್ತಾ?

ಮೈಸೂರು: ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಶಾಸಕ ಜಿಟಿ ದೇವೇಗೌಡ ಅವರು, ತಮ್ಮನ್ನು ಪಕ್ಷದಿಂದ ಉಚ್ಚಾಟನೆ ಮಾಡುವ ತಾಕತ್ ನಾಯಕರಿಗೆ ಇಲ್ಲ ಎಂದು ಬುಧವಾರ ಪಕ್ಷದ ನಾಯಕರ ವಿರುದ್ಧ ಗುಡುಗಿದ್ದಾರೆ.
ಇಂದು ಮೈಸೂರಿನ ರಾಮಲಲ್ಲಾ ಮೂರ್ತಿ ಕೆತ್ತಲು ಶಿಲೆ ದೊರೆತ ಸ್ಥಳದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಾತಾಡಿದ ದೇವೇಗೌಡ ಅವರು, ಶ್ರೀರಾಮನ ಸನ್ನಿಧಿಯಲ್ಲಿ ಮಾತಾಡುತ್ತಿದ್ದೇನೆ, ಯಾವುದೇ ಪಕ್ಷದ ನಾಯಕರು ಪಕ್ಷ ಸೇರುವ ಆಮಿಶದೊಂದಿಗೆ ನನ್ನನ್ನು ಸಂಪರ್ಕಿಸಿಲ್ಲ ಮತ್ತು ನಾನು ಸಹ ಯಾವುದೇ ಪಕ್ಷ ಸೇರುತ್ತಿಲ್ಲ ಎಂದು ಹೇಳಿದರು.
ಇದೇ ವೇಳೆ ಪಕ್ಷದಿಂದ ಉಚ್ಚಾಟನೆ ವಿಚಾರವಾಗಿ ಮಾತನಾಡಿದ ಜಿಟಿ ದೇವೇಗೌಡ ಅವರು, ನಾನು ಬೇರೆ ಯಾವುದೇ ಪಕ್ಷದ ಸಭೆಗಳಲ್ಲಿ ಭಾಗವಹಿಸಿಲ್ಲ. ನನ್ನ ಮೇಲೆ ಆಗಲಿ ಯತ್ನಾಳ್ ಮೇಲೆ ಆಗಲಿ ಕ್ರಮ ಕೈಗೊಳ್ಳಲು ನಾಯಕರಿಗೆ ಧಂ ಬೇಕು. ಪಕ್ಷದಿಂದ ಸಸ್ಪೆಂಡ್ ಮಾಡೋಕೆ ಅಥವಾ ಉಚ್ಚಾಟನೆ ಮಾಡೋಕೆ ತಾಕತ್ ಇರಬೇಕು ಎಂದರು.
ನನ್ನನ್ನು ಪಕ್ಷದಿಂದ ಉಚ್ಚಾಟನೆ ಮಾಡುವ ತಾಕತ್ ನಾಯಕರಿಗೆ ಇಲ್ಲ. ಪಕ್ಷ ಕಟ್ಟುವ ತಾಕತ್ ಇರೋನು ಸಸ್ಪೆಂಡ್ ಮಾಡುತ್ತಾನೆ. ಆದರೆ ನಾಯಕರಿಗೆ ಈ ತಾಕತ್ ಇಲ್ಲ. ಅದಕ್ಕೆ ಉಚ್ಚಾಟನೆ ಮಾಡುತ್ತಿಲ್ಲ ಎಂದು ಏಕ ವಚನದಲ್ಲೇ ವಾಗ್ದಾಳಿ ನಡೆಸಿದರು.
ಮತ್ತೆ ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಜಿಟಿಡಿ
ಇನ್ನು ಮೂಡಾ ಹಗರಣ ವಿಚಾರವಾಗಿ ಮಾತನಾಡಿದ ದೇವೇಗೌಡ, ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅಗತ್ಯವಿಲ್ಲ. ಯಾವ ಪಕ್ಷದ ಯಾವ ನಾಯಕರ ಮೇಲೆ ಎಷ್ಟು ಎಫ್ಐಆರ್ ಗಳಿವೆ ಗೊತ್ತಾ? ಸಿದ್ದರಾಮಯ್ಯ ರಾಜೀನಾಮೆ ಯಾಕೆ ಕೊಡಬೇಕು. ನ್ಯಾಯಾಲಯದ ತೀರ್ಮಾನ ಬರಲಿ. ಆಮೇಲೆ ನೋಡೋಣಾ, ತಮ್ಮ ಪಕ್ಷದಲ್ಲಿ ಯಾರ ಮೇಲೆ ಎಷ್ಟು ಎಫ್ಐಆರ್ ಗಳಿವೆ ಎಂಬುದನ್ನು ನಾಯಕರುಗಳು ಮೊದಲು ನೋಡಿಕೊಂಡು ನಂತರ ಸಿದ್ದರಾಮಯ್ಯರ ರಾಜೀನಾಮೆ ಕೇಳಲಿ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



