ಡಿಕೆಶಿ ಸಿಎಂ ಆಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: MLC ವಿಶ್ವನಾಥ್
ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರ ಸದಾಶಿವನಗರದ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಬೆಂಗಳೂರು: ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಮಾಜಿ ನಾಯಕ, ಬಿಜೆಪಿ ಎಂಎಲ್ ಸಿ ಎ.ಎಚ್.ವಿಶ್ವನಾಥ್ ಅವರು ಬುಧವಾರ ಭವಿಷ್ಯ ನುಡಿದಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರ ಸದಾಶಿವನಗರದ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಸಿದ್ದರಾಮಯ್ಯನವರೇ 5 ವರ್ಷ ಮುಖ್ಯಮಂತ್ರಿ ಎಂದು ಹೇಳಲಾಗುತ್ತಿದೆ. ಇದೆಲ್ಲಾ ಬಾಲಿಶತನ, ಮೂರ್ಖತನ ಎಂದು ಕಿಡಿಕಾರಿದರು.
ರಾಜ್ಯದಲ್ಲಿ ಕಾಂಗ್ರೆಸ್ 136 ಸ್ಥಾನ ಗೆಲ್ಲಲು ಡಿ.ಕೆ.ಶಿವಕುಮಾರ್ ಅವರ ಕೊಡುಗೆ ಬಹಳಷ್ಟಿದೆ. ಅವರದು ಸಾಕಷ್ಟು ಖರ್ಚಾಗಿದೆ. ಚುನಾವಣಾ ಸಂದರ್ಭದಲ್ಲಿ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಮಾತುಕತೆಯಾಗಿತ್ತು. ಹೀಗಾಗಿ ಮುಂದೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವುದನ್ನು ಯಾರೂ ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಸಿದ್ದರಾಮಯ್ಯನವರು ಕಾಂಗ್ರೆಸ್ ಪಕ್ಷವನ್ನು ಕಟ್ಟಿದವರಲ್ಲ. ಅವರಿಗೆ ಏನು ಆಗಬೇಕೊ ಅದು ಆಗಿ ಆಗಿದೆ. ಕಾಂಗ್ರೆಸ್ ಪಕ್ಷದ ಘನತೆ ಹಾಗೂ ಖ್ಯಾತಿಯನ್ನು ಕಟ್ಟಿಕೊಂಡು ಅವರಿಗೇನು ಆಗಬೇಕು. ಈ ಕಾರಣಕ್ಕಾಗಿಯೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಎಂದು ಸುದ್ದಿ ಹಬ್ಬಿಸುತ್ತಿದ್ದಾರೆ. ಇದರ ಹಿಂದೆ ಸಿದ್ದರಾಮಯ್ಯನವರಿರುವುದು ಖಚಿತ. ಮಂತ್ರಿಗಳು ನೆಪಮಾತ್ರ ಎಂದು ತಿಳಿಸಿದರು.
ಸಿದ್ದರಾಮಯ್ಯನವರು ಮುಡಾ ಪ್ರಕರಣದಲ್ಲಿ ಮರ್ಯಾದೆ ಕಳೆದುಕೊಂಡಿದ್ದಾರೆ. ಮೈಸೂರು ಜನರಿಗೆ ಮನೆ ಕಟ್ಟಿಕೊಳ್ಳಲು ಒಂದು ಸೈಟ್ ಕೊಡುವುದಿಲ್ಲ. ಬದಲಾಗಿ ಮುಖ್ಯಮಂತ್ರಿ ಹಾಗೂ ಸಚಿವರು ತಮಷ್ಟಕ್ಕೆ ತಾವೇ ನಿವೇಶನಗಳನ್ನು ಬರೆಸಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯನವರ ಕಾಲದಲ್ಲಿ ಮೈಸೂರು ವಿಜಯನಗರ ಸಾಮ್ರಾಜ್ಯವಾಗಿದೆ. 1200 ರೂ.ಗೆ 50×80 ಅಡಿ ನಿವೇಶನವನ್ನು ಮಾರಾಟ ಮಾಡಿದ್ದಾರೆ. ವಿಜಯನಗರದ ಸಾಮ್ರಾಜ್ಯದ ಕಾಲದಲ್ಲಿ ಚಿನ್ನ, ಬೆಳ್ಳಿಯನ್ನು ಮಾರಾಟ ಮಾಡುತ್ತಿದ್ದರು. ಈಗ ನಿವೇಶನಗಳ ಮಾರಾಟವಾಗುತ್ತಿದೆ ಎಂದು ಲೇವಡಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



