ಶ್ರೀರಾಮುಲು ಕಾಂಗ್ರೆಸ್ಗೆ ಬಂದರೆ ಸ್ವಾಗತ: ಸಚಿವ ರಾಜಣ್ಣ
2011 ರಲ್ಲಿ ತಮ್ಮದೇ ಪಕ್ಷವನ್ನು (ಬಿಎಸ್ಆರ್ ಕಾಂಗ್ರೆಸ್) ಎದುರು ಹಾಕಿಕೊಳ್ಳುವ ಮೂಲಕ, 2013 ರ ವಿಧಾನಸಭಾ ಚುನಾವಣೆಯಲ್ಲಿ ಶ್ರೀರಾಮುಲು 4 ಸ್ಥಾನಗಳಲ್ಲಿ ಗೆದ್ದಿದ್ದರು.

ಬೆಂಗಳೂರು: ಬಿಜೆಪಿ ನಾಯಕ, ಮಾಜಿ ಸಚಿವ ಬಿ.ಶ್ರೀರಾಮುಲು ನಮ್ಮ ಸಮುದಾಯದ (ಎಸ್ಟಿ ನಾಯಕ) ಪ್ರಬಲ ನಾಯಕ. ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಭಾವಿ ನಾಯಕ. ಅವರು ಕಾಂಗ್ರೆಸ್ಗೆ ಬಂದರೆ ಸ್ವಾಗತ ಎಂದು ಎಂದು ಸಚಿವ ಕೆ.ಎನ್.ರಾಜಣ್ಣ ಅವರು ಗುರುವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2011 ರಲ್ಲಿ ತಮ್ಮದೇ ಪಕ್ಷವನ್ನು (ಬಿಎಸ್ಆರ್ ಕಾಂಗ್ರೆಸ್) ಎದುರು ಹಾಕಿಕೊಳ್ಳುವ ಮೂಲಕ, 2013 ರ ವಿಧಾನಸಭಾ ಚುನಾವಣೆಯಲ್ಲಿ ಶ್ರೀರಾಮುಲು 4 ಸ್ಥಾನಗಳಲ್ಲಿ ಗೆದ್ದಿದ್ದರು. ಅವರು ಬಿಜೆಪಿ ನಾಯಕತ್ವದ ವಿರುದ್ಧ ಅಸಮಾಧಾನಗೊಂಡು ಕಾಂಗ್ರೆಸ್ ಸೇರಲು ಬಯಸಿದರೆ ನಾನು ಅವರನ್ನು ಸ್ವಾಗತಿಸುತ್ತೇನೆ ಎಂದು ಹೇಳಿದರು.
ಶ್ರೀರಾಮುಲು ಮತ್ತು ಜನಾರ್ದನ ರೆಡ್ಡಿ ನಡುವೆ ವೈಮನಸ್ಸು ಬಂದಿದೆ. ಶ್ರೀರಾಮುಲು ಒಬ್ಬ ಪವರ್ ಫುಲ್ ನಾಯಕ, ಅವರು ನಮ್ಮ ಸಮಾಜದಲ್ಲಿ ಒಳ್ಳೆ ಹೆಸರು ಮಾಡಿದ್ದಾರೆ. ಬಿಎಸ್ಆರ್ ಪಾರ್ಟಿ ಕಟ್ಟಿ 4 ಸ್ಥಾನ ಪಡೆದವರು. ಎಲ್ಲಾ ಸಮುದಾಯದವರು ಇಷ್ಟ ಪಡುತ್ತಾರೆ, ಸಂಭಾವಿತ ಮನುಷ್ಯ ಕೂಡ. ಅವರಿಗೆ ಬಿಜೆಪಿಯಲ್ಲಿ ಅಸಮಾಧಾನ ಇದ್ದು, ಕಾಂಗ್ರೆಸ್ಗೆ ಬಂದರೆ ನಾನು ಸ್ವಾಗತಿಸುತ್ತೇನೆ ಎಂದು ತಿಳಿಸಿದ್ದಾರೆ.
ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಮಾತನಾಡಿ, 2024ರ ಲೋಕಸಭೆ ಚುನಾವಣೆಯಿಂದಲೂ ಶ್ರೀರಾಮುಲು ಕಾಂಗ್ರೆಸ್ ಸೇರಲು ಪ್ರಯತ್ನಿಸುತ್ತಿದ್ದಾರೆ. ಅದು ಕಾರ್ಯರೂಪಕ್ಕೆ ಬರಲಿಲ್ಲ. ಈಗ, ಅವರು (ಹೈಕಮಾಂಡ್ನಿಂದ) ಒತ್ತಡದಿಂದಾಗಿ ಕಾಂಗ್ರೆಸ್ ಸೇರುವ ಸಾಧ್ಯತೆಗಳಿವೆ. ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಿರ್ಧಾರ ಕೈಗೊಳ್ಳಲಿದ್ದಾರೆ. ಅಂತಿಮ ನಿರ್ಧಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತೆಗೆದುಕೊಳ್ಳಲಿದ್ದಾರೆಂದು ಹೇಳಿದರು.
ಇದೇ ವೇಳೆ ಶ್ರೀರಾಮುಲು ಕಾಂಗ್ರೆಸ್ ಸೇರುವುದರಿಂದ ಎಸ್ಟಿ ನಾಯಕರಾದ ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದೂ ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



