ಕಾಂಗ್ರೆಸ್ ಹೆಸರಲ್ಲಿ ರೆಡ್ಡಿ- ರಾಮುಲು ನಾಟಕ; ನನ್ನ ಮೊಮ್ಮಕ್ಕಳ ಮೇಲೆ ಆಣೆ ಮಾಡಿ ಹೇಳುವೆ, ನಾನು ಎಂದೂ ಜಾತಿ ಮಾಡಿಲ್ಲ: ಜಮೀರ್ ಅಹ್ಮದ್
ನಾನು ಎಂದೂ ಜಾತಿ ಮಾಡಿಲ್ಲ. ನನ್ನ ಮಕ್ಕಳು ,ಮೊಮ್ಮಕ್ಕಳ ಮೇಲೆ ಆಣೆ ಮಾಡಿ ಹೇಳುವೆ. ಜಾತಿ ಮಾಡಿದರೆ ನಿರ್ನಾಮವಾಗುತ್ತೇನೆ. ಅದರ ಬಗ್ಗೆ ಯೋಚನೆಯನ್ನೂ ಮಾಡುವುದಿಲ್ಲ.

ಕೊಪ್ಪಳ: ಶಾಸಕ ಜನಾರ್ದನ ರೆಡ್ಡಿ ಮತ್ತು ಬಿ. ಶ್ರೀರಾಮುಲು ನಡುವಿನ ಗುದ್ದಾಟ ಆಂತರಿಕ ವಿಚಾರವಾಗಿದ್ದು, ಇಬ್ಬರೂ ಕಾಂಗ್ರೆಸ್ ಹೆಸರಿನಲ್ಲಿ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂದು ವಸತಿ ಸಚಿವ ಜಮೀರ್ ಅಹ್ಮದ್‌ಖಾನ್ ಆರೋಪಿಸಿದರು.
ಕೊಪ್ಪಳ ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಮುಲು ಕಾಂಗ್ರೆಸ್ ಪಕ್ಷಕ್ಕೆ ಬರುವ ಹಾಗೆ ಕಾಣುತ್ತಿಲ್ಲ. ಆದರೆ ನಮ್ಮ ಪಕ್ಷದ ಹೆಸರಿನಲ್ಲಿ ಬಿಜೆಪಿಯಲ್ಲಿ ತಮ್ಮ ಕೆಲಸ ಮಾಡಿಕೊಳ್ಳುತ್ತಿದ್ದಾರೆ. ಅವರು ನಾಟಕ ಮಾಡುತ್ತಿದ್ದಾರೆ ಎನಿಸುತ್ತಿದೆ ಎಂದರು.
ನಾನು ಎಂದೂ ಜಾತಿ ಮಾಡಿಲ್ಲ. ನನ್ನ ಮಕ್ಕಳು ,ಮೊಮ್ಮಕ್ಕಳ ಮೇಲೆ ಆಣೆ ಮಾಡಿ ಹೇಳುವೆ. ಜಾತಿ ಮಾಡಿದರೆ ನಿರ್ನಾಮವಾಗುತ್ತೇನೆ. ಅದರ ಬಗ್ಗೆ ಯೋಚನೆಯನ್ನೂ ಮಾಡುವುದಿಲ್ಲ. ಬಡವರ ಸೇವೆಗಾಗಿಯೇ ರಾಜಕೀಯದಲ್ಲಿದ್ದೇನೆ. ಜಾತಿ ಮಾಡುವವರು ಯಾರೂ ರಾಜಕೀಯಕ್ಕೆ ಬರಬೇಡಿ ಎಂದು ಸಲಹೆ ನೀಡಿದರು.
ಸಿದ್ದರಾಮಯ್ಯ ಅವರೇ ಪೂರ್ಣ ಐದು ವರ್ಷ ಮುಖ್ಯಮಂತ್ರಿಯಾಗಿರುತ್ತಾರೆ. ಸದ್ಯಕ್ಕೆ ಮುಖ್ಯಮಂತ್ರಿ ಖುರ್ಚಿ ಖಾಲಿ ಇಲ್ಲ. ಹಿಂದಿನ ಬಿಜೆಪಿ ಸರ್ಕಾರ ಬಡವರಿಗೆ ಒಂದೇ ಒಂದು ಮನೆ ಕೊಟ್ಟಿಲ್ಲ. ಮನೆ ಕೊಟ್ಟಿದ್ದೇವೆ ಎಂದು ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುವೆ ಎಂದು ಸವಾಲು ಹಾಕಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


