ಸುಳ್ಳು ಸುದ್ದಿ ಹರಡಿದ ಸಿಎಂ ಸಿದ್ದರಾಮಯ್ಯನವರ ಮೇಲೆ ಕೇಸು ಹಾಕ್ತೀರಾ?: ಪ್ರಿಯಾಂಕ್ ಖರ್ಗೆಗೆ BJP ಪ್ರಶ್ನೆ
ರಾಜ್ಯದ ಮುಖ್ಯಮಂತ್ರಿಗಳೇ ಸುಳ್ಳು ಸುದ್ದಿ ಹರಡುವ ಬ್ರ್ಯಾಂಡ್ ಅಂಬಾಸಿಡರ್ ಆಗಿರುವುದು ಕರ್ನಾಟಕದ ದುರಂತ ಎಂದು ತಿರುಗೇಟು ನೀಡಿದ್ದಾರೆ.

ಬೆಂಗಳೂರು: ಹಾರ್ಟ್ ಅಟ್ಯಾಕ್ ಗಳಿಗೆ ಕೋವಿಡ್ ಲಸಿಕೆಗೆ ತರಾತುರಿಯಲ್ಲಿ ಅನುಮೋದನೆ ನೀಡಿ ಲಸಿಕೆ ಕೊಟ್ಟಿದ್ದೇ ಕಾರಣ ಎಂದು ಸುಳ್ಳು ಸುದ್ದಿ ಹರಡಿದ ಸಿಎಂ ಸಿದ್ದರಾಮಯ್ಯನವರ ಮೇಲೆ ಸುಳ್ಳು ಸುದ್ದಿ ಕೇಸು ಹಾಕ್ತೀರಾ? ಎಂದು ಸಚಿವ ಪ್ರಿಯಾಂಕ್ ಖರ್ಗೆಗೆ ಬಿಜೆಪಿ ಭಾನುವಾರ ಪ್ರಶ್ನೆ ಮಾಡಿದೆ.
ಸಾಮಾಜಿಕ ಜಾಲತಾಣ ಎಕ್ಸ್ ಪೋಸ್ಟ್ ಮಾಡಿರುವ ಬಿಜೆಪಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಸುಳ್ಳು ಸುದ್ದಿ ಹರಡುವ ಸಿಎಂ ಸಿದ್ದರಾಮಯ್ಯ ಸರ್ಕಾರ ಸುಳ್ಳು ಸುದ್ದಿ ತಡೆಗೆ ಕಾನೂನು ರೂಪಿಸಲು ಹೊರಟಿರುವುದು ಈ ಶತಮಾನದ ಅತ್ಯಂತ ದೊಡ್ಡ ವಿಪರ್ಯಾಸ ಎಂದು ಕಿಡಿಕಾರಿದ್ದಾರೆ.
ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರೇ, ರಾಜ್ಯದಲ್ಲಿ ಸಂಭವಿಸುತ್ತಿರುವ ಹಾರ್ಟ್ ಅಟ್ಯಾಕ್ ಗಳಿಗೆ ಕೋವಿಡ್ ಲಸಿಕೆ ಕಾರಣವಲ್ಲ ಎಂದು ತಜ್ಞರ ವರದಿ ಸ್ಪಷ್ಟಪಡಿಸಿದೆ.ಹಾರ್ಟ್ ಅಟ್ಯಾಕ್ ಗಳಿಗೆ ಕೋವಿಡ್ ಲಸಿಕೆಗೆ ತರಾತುರಿಯಲ್ಲಿ ಅನುಮೋದನೆ ನೀಡಿ ಲಸಿಕೆ ಕೊಟ್ಟಿದ್ದೇ ಕಾರಣ ಎಂದು ಸುಳ್ಳು ಸುದ್ದಿ ಹರಡಿದ ಸಿಎಂ ಸಿದ್ದರಾಮಯ್ಯನವರ ಮೇಲೆ ಸುಳ್ಳು ಸುದ್ದಿ ಕೇಸು ಹಾಕ್ತೀರಾ?
ಬೇಕಾದರೆ ನಿಮ್ಮ ಚೀಫ್ @zoo_bear ಅವರ ಕೈಯಲ್ಲಿ ಫ್ಯಾಕ್ಟ್ ಚೆಕ್ ಮಾಡಿಸಿ ಆಮೇಲೆ ಕೇಸು ಹಾಕಿ. ರಾಜ್ಯದ ಮುಖ್ಯಮಂತ್ರಿಗಳೇ ಸುಳ್ಳು ಸುದ್ದಿ ಹರಡುವ ಬ್ರ್ಯಾಂಡ್ ಅಂಬಾಸಿಡರ್ ಆಗಿರುವುದು ಕರ್ನಾಟಕದ ದುರಂತ ಎಂದು ತಿರುಗೇಟು ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



