ರಾಜಕೀಯ

ಡ್ರಾಮಾ ನಡೆಯುತ್ತಿದೆ, ನನಗೆ ನಾಟಕ ಕಂಪನಿ ಓಪನ್ ಮಾಡೋಕೆ ಇಷ್ಟವಿಲ್ಲ: ಡಾ. ಜಿ.ಪರಮೇಶ್ವರ್; Video

ಆಡಳಿತದಲ್ಲಿ ಯಾವುದೇ ರೀತಿ ತೊಂದರೆ ಇಲ್ಲ. ಮುಖ್ಯಮಂತ್ರಿಗಳು ಉತ್ತಮ ಆಡಳಿತ ಮಾಡುತ್ತಿದ್ದಾರೆ. ಸುಮ್ಮನೆ ಡ್ರಾಮಾ ಕಂಪನಿ ಓಪನ್ ಮಾಡೋಕೆ ನಂಗೆ ಇಷ್ಟವಿಲ್ಲ

ಡ್ರಾಮಾ ನಡೆಯುತ್ತಿದೆ, ನನಗೆ ನಾಟಕ ಕಂಪನಿ ಓಪನ್ ಮಾಡೋಕೆ ಇಷ್ಟವಿಲ್ಲ: ಡಾ. ಜಿ.ಪರಮೇಶ್ವರ್; Video
ಸಿದ್ದರಾಮಯ್ಯ, ಡಾ.ಜಿ.ಪರಮೇಶ್ವರ್ — ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಊಹಾಪೋಹಗಳ ನಡುವೆ ಅಂತಹ ಸಂದರ್ಭ ಬಂದಾಗ ಪಕ್ಷದ ಹೈಕಮಾಂಡ್ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಗುರುವಾರ ಹೇಳಿದ್ದಾರೆ.

ನಾಯಕತ್ವ ಬದಲಾವಣೆ ಚರ್ಚೆ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳು ವಿಶ್ಲೇಷಣೆ ಮಾಡಿದಂತೆ ಇದೊಂದು ಡ್ರಾಮಾ. ನಿಮ್ಮ ಹೇಳಿಕೆಯನ್ನು ನಾನು ಒಪ್ಪಬೇಕಾಗುತ್ತೆ. ಪದೇ ಪದೇ ಇದರ ಬಗ್ಗೆ ಚರ್ಚೆ ಆಗುವುದು, ಅವರೊಂದು ಹೇಳಿಕೆ ಕೊಡುವುದು ನಾನೊಂದು ಹೇಳೋದು, ಮತ್ತೊಬ್ಬರು ಒಂದು ಹೇಳೋದು ಆಗಬಾರದು ಎಂದರು.

ಆಡಳಿತದಲ್ಲಿ ಯಾವುದೇ ರೀತಿ ತೊಂದರೆ ಇಲ್ಲ. ಮುಖ್ಯಮಂತ್ರಿಗಳು ಉತ್ತಮ ಆಡಳಿತ ಮಾಡುತ್ತಿದ್ದಾರೆ. ಸುಮ್ಮನೆ ಡ್ರಾಮಾ ಕಂಪನಿ ಓಪನ್ ಮಾಡೋಕೆ ನಂಗೆ ಇಷ್ಟವಿಲ್ಲ ಎಂದು ಹೇಳಿದರು.

ನಾನು ಸ್ಮೂತ್ ಆಗೇ ಇರೋದು, ಡ್ರಾಮಾ ಕಂಪನಿ ಓಪನ್ ಮಾಡೋಕೆ ಇಷ್ಟ ಇಲ್ಲ. ಅದನ್ನ ಬಿಟ್ಟುಬಿಡೋಣ, ನಮ್ಮ ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಾರೆ. ಸಂದರ್ಭ ಬಂದಾಗ ತೀರ್ಮಾನ ಮಾಡುತ್ತಾರೆ ಎಂದು ಪರಮೇಶ್ವರ್ ಪುನರುಚ್ಚರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.