ನವೆಂಬರ್ನಲ್ಲಿ ಸಿದ್ದರಾಮಯ್ಯ ಸಂಪುಟಕ್ಕೆ ಮೇಜರ್ ಸರ್ಜರಿ; ಹೊಸಬರಿಗೆ ಅವಕಾಶ: ಸಲೀಂ ಅಹ್ಮದ್
ನವೆಂಬರ್ನಲ್ಲಿ ರಾಜ್ಯ ಕಾಂಗ್ರೆಸ್ ನಲ್ಲಿ ಭಾರೀ ಬದಲಾವಣೆಗಳು ಆಗಲಿದೆ ಎಂದು ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ತಿಳಿಸಿದ್ದಾರೆ.

ಹಾವೇರಿ: ನವೆಂಬರ್ನಲ್ಲಿ ರಾಜ್ಯ ಕಾಂಗ್ರೆಸ್ ನಲ್ಲಿ ಭಾರೀ ಬದಲಾವಣೆಗಳು ಆಗಲಿದೆ ಎಂದು ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ತಿಳಿಸಿದ್ದಾರೆ. ಸಚಿವ ಸಂಪುಟ ವಿಸ್ತರಣೆಯಾಗಲಿದ್ದು ಸಚಿವ ಸ್ಥಾನ ಕಳೆದುಕೊಂಡವರಿಗೆ ಪಕ್ಷದಲ್ಲಿ ಜವಾಬ್ದಾರಿಯುತ ಸ್ಥಾನ ನೀಡಲಾಗುತ್ತದೆ. ಇನ್ನು ಈ ಬಾರಿ ಹೊಸಬರಿಗೆ ಅವಕಾಶ ನೀಡುವ ಸಾಧ್ಯತೆ ಇದೆ. ಅಂತಿಮವಾಗಿ ಹೈಕಮಾಂಡ್ ಮತ್ತು ಸಿಎಂ ನಿರ್ಧರಿಸುತ್ತಾರೆ ಎಂದು ಹೇಳಿದರು.
ಕೆಪಿಸಿಸಿ ಅಧ್ಯಕ್ಷರನ್ನು ಬದಲಾಯಿಸಬೇಕೆಂದು ಕೆಲ ಸಚಿವರು ಕೇಳುತ್ತಿರುವ ಬಗ್ಗೆ ನನಗೆ ಗೊತ್ತಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಮಗೆ ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಮಾತನಾಡದಂತೆ ತಿಳಿಸಿದ್ದಾರೆ. ಈ ವಿಷಯದ ಕುರಿತಂತೆ ನಾವು ಏನೂ ಮಾತನಾಡಲ್ಲ. ಬಿಜೆಪಿ ಥರ ನಮ್ಮದು ನರೇಂದ್ರ ಮೋದಿ ಪಾರ್ಟಿ ಅಲ್ಲ. ಪ್ರಜಾಪ್ರಭುತ್ವ ಇರುವ ಪಾರ್ಟಿ. ನಮ್ಮ ಪಕ್ಷದಲ್ಲಿ ಚರ್ಚೆಗಳು ನಡೆಯುತ್ತವೆ. ಆ ಬಳಿಕವೇ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ ಎಂದರು.

ಕಾಂಗ್ರೆಸ್ ಪಾಳಯದಲ್ಲಿ ಮುಗಿಯದ ರಗಳೆ: ನಾಯಕತ್ವ ಬದಲಾವಣೆ ವಿಚಾರ ಬಳಿಕ KPCC ಅಧ್ಯಕ್ಷ ಬದಲಾವಣೆಗೆ ಶಾಸಕರ ಪಟ್ಟು..?
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


