ರಾಜಕೀಯ

ED ತನ್ನ ಹೆಸರನ್ನು ಕಾಂಗ್ರೆಸ್ ವಿರೋಧಿ ನಿರ್ದೇಶನಾಲಯ ಎಂದು ಬದಲಿಸಿಕೊಳ್ಳುವುದು ಸೂಕ್ತ: ದಿನೇಶ್ ಗುಂಡೂರಾವ್

ಜಾರಿ ನಿರ್ದೇಶನಾಲಯದ ಪ್ರೈಮ್ ಟಾರ್ಗೆಟ್ ಕಾಂಗ್ರೆಸ್ ನಾಯಕರೇ ಹೊರತು ಬಿಜೆಪಿಯವರಲ್ಲ, ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ಜಾರಿ ನಿರ್ದೇಶನಾಲಯ ಮತ್ತೆ ದಾಳಿ ನಡೆಸಿದೆ.

ED ತನ್ನ ಹೆಸರನ್ನು ಕಾಂಗ್ರೆಸ್ ವಿರೋಧಿ ನಿರ್ದೇಶನಾಲಯ ಎಂದು ಬದಲಿಸಿಕೊಳ್ಳುವುದು ಸೂಕ್ತ: ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್
Published On :

ಬೆಂಗಳೂರು: ಕಾಂಗ್ರೆಸ್ ನಾಯಕರನ್ನೇ ನಿರ್ದಿಷ್ಟವಾಗಿ ಗುರಿಯಾಗಿಸಿಕೊಂಡು ದಾಳಿ ನಡೆಸುವ ‘ಜಾರಿ ನಿರ್ದೇಶನಾಲಯ’ ತನ್ನ ಹೆಸರನ್ನು ‘ಕಾಂಗ್ರೆಸ್ ವಿರೋಧಿ ನಿರ್ದೇಶನಾಲಯ’ ಎಂದು ಬದಲಾಯಿಸಿಕೊಳ್ಳುವುದು ಸೂಕ್ತ ಎಂದು ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಜಾರಿ ನಿರ್ದೇಶನಾಲಯದ ಪ್ರೈಮ್ ಟಾರ್ಗೆಟ್ ಕಾಂಗ್ರೆಸ್ ನಾಯಕರೇ ಹೊರತು ಬಿಜೆಪಿಯವರಲ್ಲ, ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ಜಾರಿ ನಿರ್ದೇಶನಾಲಯ ಮತ್ತೆ ದಾಳಿ ನಡೆಸಿದೆ. ಜಾರಿ ನಿರ್ದೇಶನಾಲಯದ ವೈಶಿಷ್ಟ್ಯವೇನೆಂದರೆ ಅದು ದಾಳಿ ಮಾಡುವುದು ಬಿಜೆಪಿಯೇತರ ನಾಯಕರ ಮೇಲೆ ಮಾತ್ರ. ಇಲ್ಲಿಯವರೆಗೂ ED ಬಿಜೆಪಿ ನಾಯಕರ ತಂಟೆಗೆ ಹೋಗಿಲ್ಲ. ಹೋಗುವುದು ಇಲ್ಲ. ಇದೊಂದು ವಿಸ್ಮಯ ಎಂದು ಲೇವಡಿ ಮಾಡಿದ್ದಾರೆ.

ಕಾಂಗ್ರೆಸ್ ನಾಯಕರನ್ನೇ ನಿರ್ಧಿಷ್ಟವಾಗಿ ಗುರಿಯಾಗಿಸಿಕೊಂಡು ದಾಳಿ ನಡೆಸುವ 'ಜಾರಿ ನಿರ್ದೇಶನಾಲಯ' ತನ್ನ ಹೆಸರನ್ನು 'ಕಾಂಗ್ರೆಸ್ ವಿರೋಧಿ ನಿರ್ದೇಶನಾಲಯ' ಎಂದು ಬದಲಾಯಿಸಿಕೊಳ್ಳುವುದು ಸೂಕ್ತ. ಇತ್ತೀಚೆಗಷ್ಟೆ ತಮಿಳುನಾಡಿನ TASMAC ಹಗರಣದಲ್ಲಿ ED ನಡೆಯನ್ನು ಸುಪ್ರೀಂ ಕೋರ್ಟ್ ಕಟು ಮಾತುಗಳಲ್ಲಿ ಟೀಕಿಸಿದೆ. ED ಎಲ್ಲಾ‌ ಮಿತಿಗಳನ್ನು ಮೀರುತ್ತಿದೆ ಎಂದು ಸುಪ್ರೀಂ ಎಚ್ಚರಿಕೆ ನೀಡಿದೆ. ಆದರೂ ED ಅಧಿಕಾರಿಗಳು BJP ಕಾರ್ಯಕರ್ತರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಸಾಂವಿಧಾನಿಕ ತನಿಖಾ ಸಂಸ್ಥೆಯಾದ EDಯನ್ನು ಮೋದಿ ಸರ್ಕಾರ ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ. ED ರಾಜಕೀಯ ಪಕ್ಷವೊಂದರ ಆಜ್ಞಾಪಾಲಕರಾದರೆ ಆ ಸಂಸ್ಥೆಗೆ ಸಾಂವಿಧಾನಿಕ ಪಾವಿತ್ರ್ಯತೆ ಇರಲು ಹೇಗೆ ಸಾಧ್ಯ‌.? ಆ ಸಂಸ್ಥೆಯಿಂದ ಪ್ರಜಾಪ್ರಭುತ್ವದ ಮೌಲ್ಯ ಉಳಿಯಲು ಹೇಗೆ ಸಾಧ್ಯ.? ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.