ಪ್ರಧಾನಿ ಮೋದಿ ನಾಯಕತ್ವದಿಂದ ಸಿದ್ದರಾಮಯ್ಯ ಕಲಿಯಬೇಕು: ಕೇಂದ್ರ ಸಚಿವ ವಿ.ಸೋಮಣ್ಣ
ಸಿದ್ದರಾಮಯ್ಯ ಅವರ ಹೇಳಿಕೆಗಳು ಅಪ್ರಬುದ್ಧವಾಗಿವೆ. ರಾಜ್ಯದ ಜನರು ಸಿಎಂ ಮಾತುಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ.

ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಬದಲು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 8 ದಿನಗಳ ಕಾಲ ನವದೆಹಲಿಗೆ ಭೇಟಿ ನೀಡಿ ಪ್ರಧಾನಿಮಂತ್ರಿಗಳ ಆಡಳಿತ ಶೈಲಿಯನ್ನು ವೀಕ್ಷಿಸಿ, ಕರ್ನಾಟಕದಲ್ಲಿ "ಜನಪರ ವಿಧಾನ" ಅಳವಡಿಸಿಕೊಳ್ಳಬೇಕು ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಅವರು ಸೋಮವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ 11 ವರ್ಷಗಳ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತಕ್ಕೆ ಸಿದ್ದರಾಮಯ್ಯ ಶೂನ್ಯ ಅಂಕ ನೀಡಿದ್ದರ ಕುರಿತು ತಿರುಗೇಟು ನೀಡಿದರು.
ಸಿದ್ದರಾಮಯ್ಯ ಅವರ ಹೇಳಿಕೆಗಳು ಅಪ್ರಬುದ್ಧವಾಗಿವೆ. ರಾಜ್ಯದ ಜನರು ಸಿಎಂ ಮಾತುಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಸಿದ್ದರಾಮಯ್ಯ ಅಂತಹ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಿ ಪ್ರಧಾನಿ ಮೋದಿ ಅವರ ನಾಯಕತ್ವ ನೋಡಿ ಕಲಿಯಬೇಕಿದೆ ಎಂದು ಹೇಳಿದರು.
ನಾನು ಕೂಡ ಮೊದಲು ಕಾಂಗ್ರೆಸ್ ಜೊತೆಗಿದ್ದೆ. ಅಂದಿನ ಸಿದ್ದರಾಮಯ್ಯ ಮತ್ತು ಇಂದಿನ ಸಿದ್ದರಾಮಯ್ಯ ನಡುವೆ ಅಗಾಧ ವ್ಯತ್ಯಾಸವಿದೆ. ಕಾಂಗ್ರೆಸ್ ನಾಯಕರಿಗೆ ನೈತಿಕ ಸಮಗ್ರತೆಯ ಕೊರತೆಯಿದೆ. ಮೋದಿಯವರ ಜನಪರ ಆಡಳಿತವನ್ನು ನೋಡಿ, ಅವರು ತಮ್ಮದೇ ಆದ ನ್ಯೂನತೆಗಳ ಬಗ್ಗೆ ಅರಿತುಕೊಳ್ಳುತ್ತಿದ್ದಾರೆ. ಅದೇ ರೀತಿಯಲ್ಲಿ ಆಡಳಿತ ನಡೆಸಲು ಸಾಧ್ಯವಾಗದ ಕಾರಣ ನಿರಾಶೆಗೊಳ್ಳುತ್ತಿದ್ದಾರೆಂದು ಹೇಳಿದ್ದಾರೆ.
ತುಮಕೂರನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಮರುನಾಮಕರಣ ಮಾಡುವ ಬಗ್ಗೆ ನಡೆಯುತ್ತಿರುವ ಚರ್ಚೆ ಕುರಿತು ಮಾತನಾಡಿ, ಇದು ನರಿ ಮತ್ತು ಕುರಿಮರಿಯ ಕಥೆಯಂತೆ ಎಂದು ವ್ಯಂಗ್ಯವಾಡಿದರು.
ಗೃಹ ಸಚಿವ ಡಾ. ಜಿ. ಪರಮೇಶ್ವರ ಈ ವಿಷಯದಲ್ಲಿ ಆತುರದಿಂದ ವರ್ತಿಸುವುದಿಲ್ಲ ಎಂದು ನಾನು ನಂಬುತ್ತೇನೆ. ನಾನು ಇನ್ನೂ ಯಾವುದೇ ನಿಲುವನ್ನು ತೆಗೆದುಕೊಂಡಿಲ್ಲ. ಅದು ಪ್ರಯೋಜನಕಾರಿ ಎಂದು ತೋರಿದರೆ, ನಾನು ಅದನ್ನು ಬೆಂಬಲಿಸುತ್ತೇನೆ. ಅದು ಹಾನಿಕಾರಕವೆಂದು ತೋರಿದರೆ, ವಿರೋಧಿಸುತ್ತೇನೆಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



