ಡಿ.ಕೆ ಬ್ರದರ್ಸ್ ಕೃಪಾಶಿರ್ವಾದದಿಂದ ನನ್ನ ಕ್ಷೇತ್ರಕ್ಕೆ ಅನುದಾನ ಸಿಕ್ಕಿದೆ: ಉರಿಯೋ ಬೆಂಕಿಗೆ ತುಪ್ಪ ಸುರಿದ ಶಾಸಕ ಬಾಲಕೃಷ್ಣ
ತಮಗೆ ಅನುದಾನ ಸಿಗುತ್ತಿಲ್ಲ ಎಂಬ ಹಲವು ಶಾಸಕರ ದೂರಿನ ನಡುವೆ ಬಾಲಕೃಷ್ಣ ಹೇಳಿಕೆ ಶಾಸಕರ ಕೆಂಗಣ್ಣಿಗೆ ಗುರಿಯಾಗಿದೆ. ಡಿಕೆ ಬ್ರದರ್ಸ್ ಆಶೀರ್ವಾದ ಇದ್ದರೆ ಮಾತ್ರ ಅನುದಾನ ಸಿಗುತ್ತದಾ ಎಂಬ ಪ್ರಶ್ನೆ ಮೂಡಿದೆ.

ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಮತ್ತು ಡಿ.ಕೆ ಸುರೇಶ್ ಅವರ ಕೃಪಾಶೀರ್ವಾದದಿಂದ ನನ್ನ ಕ್ಷೇತ್ರಕ್ಕೆ ಅಗತ್ಯ ಅನುದಾನ ಸಿಗುತ್ತಿದೆ ಎಂದು ಮಾಗಡಿ ಶಾಸಕ ಎಚ್.ಸಿ ಬಾಲಕೃಷ್ಣ ನೀಡಿರುವ ಹೇಳಿಕೆ ಉರಿವ ಬೆಂಕಿಗೆ ತುಪ್ಪ ಸುರಿವಂತೆ ಮಾಡಿದೆ.
ತಮಗೆ ಅನುದಾನ ಸಿಗುತ್ತಿಲ್ಲ ಎಂಬ ಹಲವು ಶಾಸಕರ ದೂರಿನ ನಡುವೆ ಬಾಲಕೃಷ್ಣ ಹೇಳಿಕೆ ಶಾಸಕರ ಕೆಂಗಣ್ಣಿಗೆ ಗುರಿಯಾಗಿದೆ. ಡಿಕೆ ಬ್ರದರ್ಸ್ ಆಶೀರ್ವಾದ ಇದ್ದರೆ ಮಾತ್ರ ಅನುದಾನ ಸಿಗುತ್ತಾ ಎಂದು ಹಲವರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಮ್ಮ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಸಿಎಂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜತೆ ಚರ್ಚಿಸಿ ರಾಜೀನಾಮೆ ನೀಡುತ್ತೇವೆ ಎಂಬುದು ಕೆಲವರ ವೈಯಕ್ತಿಕ ನಿರ್ಧಾರ. ಅದನ್ನು ಸೂಕ್ತ ವೇದಿಕೆಯಲ್ಲಿ ವ್ಯಕ್ತಪಡಿಸಬೇಕು ಎಂದು ಅಭಿಪ್ರಾಯಪಟ್ಟರು. ಸಂಬಂಧಪಟ್ಟ ಸಚಿವರು ಅಥವಾ ಜಿಲ್ಲಾ ಸಚಿವರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಣಕ್ಕಾಗಿ ಮನವಿ ಮಾಡಬೇಕು. "ವಾಸ್ತವವಾಗಿ, ಅಭಿವೃದ್ಧಿ ಕಾರ್ಯಗಳಿಗಾಗಿ ಸಿಎಂ ಪ್ರತಿ ಕ್ಷೇತ್ರಕ್ಕೆ 50 ಕೋಟಿ ರೂ.ಗಳನ್ನು ನಿಗದಿಪಡಿಸಿದ್ದಾರೆ. ಇದನ್ನು ಬಿಡುಗಡೆ ಮಾಡಿದ ನಂತರ ಶಾಸಕರು ಕೆಲಸಗಳನ್ನು ಎಂದು ಅವರು ಹೇಳಿದರು.
ಇನ್ನೂ ಸಿಎಂ ಬಳಿ ಈಗ ಹಣ ಇಲ್ಲ, ಕೇಂದ್ರದ ಬಳಿ ಕೇಳಬೇಕು ಎಂಬ ಪರಮೇಶ್ವರ್ ಹೇಳಿಕೆ ವಿಚಾರ ಕುರಿತು ಮಾತನಾಡಿ, ಕೇಂದ್ರದಿಂದ ನಮಗೆ ಬರಬೇಕಾದ ಹಣ ಬಂದಿಲ್ಲ. ಕೇಂದ್ರದವರು ನಮಗೆ ಹಣ ಕೊಡಬೇಕು. ನಮ್ಮ ಹತ್ತಿರವೂ ಹಣ ಇದೆ, ಅದರ ಜೊತೆ ಅವರೂ ಕೊಟ್ಟರೆ ಹೆಚ್ಚು ಅಭಿವೃದ್ಧಿ ಮಾಡಬಹುದು. ಇದು ಪರಮೇಶ್ವರ್ ಅವರ ಮಾತಿನ ಅರ್ಥ. ಕೇಂದ್ರದ ಹಣಕ್ಕೆ ಹಿಂದೆಯಿಂದಲೂ ಒತ್ತಾಯ ಮಾಡಿದ್ದೇವೆ. ದೆಹಲಿಗೂ ಹೋಗಿ ಹಣ ಕೇಳಿದ್ದೇವೆ, ಅವರು ಹಣ ಕೊಟ್ಟರೆ ಇನ್ನೂ ಹೆಚ್ಚಿನ ಅಭಿವೃದ್ಧಿ ಮಾಡಬಹುದು ಎಂದು ಪರಮೇಶ್ವರ್ ಹೇಳಿಕೆಯನ್ನ ಸಮರ್ಥಿಸಿಕೊಂಡರು.

ಬಿಆರ್ ಪಾಟೀಲ್ ಬೆನ್ನಲ್ಲೇ ಸರ್ಕಾರದ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಶಾಸಕ ರಾಜು ಕಾಗೆ: ರಾಜೀನಾಮೆಯ ಬೆದರಿಕೆ! Video
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


