ದಸರಾಗೂ ಮುನ್ನ ರಾಜ್ಯದ ಆಡಳಿತ ಬದಲಾವಣೆ: ವಿಪಕ್ಷ ನಾಯಕ ಆರ್.ಅಶೋಕ್ ಭವಿಷ್ಯ
ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ದಸರಾ ಉತ್ಸವ ನಡೆಯುವುದಿಲ್ಲ. ದಸರಾಗೂ ಮುನ್ನ ಹೊಸ ಮುಖ್ಯಮಂತ್ರಿ ಆಯ್ಕೆಯಾಗುತ್ತಾರೆ. ಇದನ್ನು ಈಗಾಗಲೇ ವಿಧಾನಸಭೆಯಲ್ಲಿ ಹೇಳಿದ್ದೇನೆ.

ಮೈಸೂರು: ಈ ವರ್ಷದ ದಸರಾ ಉತ್ಸವಕ್ಕೂ ಮುನ್ನ ರಾಜ್ಯದ ಆಡಳಿತದಲ್ಲಿ ಬದಲಾವಣೆಯಾಗಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಭವಿಷ್ಯ ನುಡಿದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ದಸರಾ ಉತ್ಸವ ನಡೆಯುವುದಿಲ್ಲ. ದಸರಾಗೂ ಮುನ್ನ ಹೊಸ ಮುಖ್ಯಮಂತ್ರಿ ಆಯ್ಕೆಯಾಗುತ್ತಾರೆ. ಇದನ್ನು ಈಗಾಗಲೇ ವಿಧಾನಸಭೆಯಲ್ಲಿ ಹೇಳಿದ್ದೇನೆಂದು ಹೇಳಿದರು.
ಬದಲಾವಣೆ ಅನಿವಾರ್ಯ. ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಹುದ್ದೆಗೆ ಈಗಾಗಲೇ ಆಂತರಿಕ ಹಗ್ಗಜಗ್ಗಾಟ ನಡೆಯುತ್ತಿದೆ. ನೀವೀಗ ನೋಡುತ್ತಿರುವುದು ಕೇವಲ ಟ್ರೇಲರ್ ಮಾತ್ರ, ಪೂರ್ಣ ಚಿತ್ರ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಹೊಸ ಮುಖ್ಯಮಂತ್ರಿ ದಸರಾ ಉತ್ಸವವನ್ನು ಉದ್ಘಾಟಿಸಲಿದ್ದಾರೆ. ಕಾಂಗ್ರೆಸ್ ಶಾಸಕರು ಮತ್ತು ಸಚಿವರು ಸಹ ಇದನ್ನು ಒಪ್ಪಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ಸುಳ್ಳಿನ ರಾಜಕೀಯದಲ್ಲಿ ತೊಡಗಿದ್ದು, ಕಾಂಗ್ರೆಸ್‌ನಲ್ಲಿ ಅಧಿಕಾರ ಹೋರಾಟವು ಉತ್ತುಂಗಕ್ಕೇರಿದೆ ಎಂದು ತಿಳಿಸಿದರು.
ಇದೇ ವೇಳೆ ರಾಜ್ಯ ಬಿಜೆಪಿ ನಾಯಕತ್ವದಲ್ಲಿ ಸಂಭವನೀಯ ಬದಲಾವಣೆ ಕುರಿತ ಊಹಾಪೋಹಗಳನ್ನು ತಳ್ಳಿಹಾಕಿದ ಅವರು, ರಾಜ್ಯ ಅಧ್ಯಕ್ಷರನ್ನು ಅಥವಾ ವಿರೋಧ ಪಕ್ಷದ ನಾಯಕರನ್ನು ಬದಲಾಯಿಸುವ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ. ಪಕ್ಷದ ಹೈಕಮಾಂಡ್‌ಗೆ ವರದಿ ಸಲ್ಲಿಸಲು ನಾನು ಪ್ರತಿ ಮೂರು ತಿಂಗಳಿಗೊಮ್ಮೆ ದೆಹಲಿಗೆ ಭೇಟಿ ನೀಡಬೇಕಾಗುತ್ತದೆ. ಇದರಂತೆ ನಿನ್ನೆ ದೆಹಲಿಗೆ ಹೋಗಿ ವರದಿ ನೀಡಿದ್ದೆ. ಪ್ರಸ್ತುತ ರಾಜ್ಯಾಧ್ಯಕ್ಷರಿಗಾಗಿ ಯಾವುದೇ ಚುನಾವಣೆಗಳೂ ನಡೆಯುವುದಿಲ್ಲ ಎಂದು ಹೇಳಿದರು.
ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಅವರ ನಿವಾಸದಲ್ಲಿ ನಡೆದ ಬಿಜೆಪಿ ನಾಯಕರ ಸಭೆ ಕುರಿತು ಪ್ರತಿಕ್ರಿಯಿಸಿ, ಸಭೆ ನನ್ನ ಮನೆಯಲ್ಲಿ ನಡೆಯಬೇಕಿತ್ತು, ಆದರೆ, ನಾನು ಹೊರಗಿದ್ದರಿಂದ, ಅಲ್ಲಿ ನಡೆಸಲಾಗಿದೆ. ಯಾವುದೇ ಗೊಂದಲವನ್ನು ಬಗೆಹರಿಸಲು ಪ್ರತಿ ಹದಿನೈದು ದಿನಗಳಿಗೊಮ್ಮೆ ಹಿರಿಯ ನಾಯಕರ ಸಭೆಗಳನ್ನು ನಡೆಸುವಂತೆ ಪಕ್ಷವು ನಮಗೆ ಸೂಚನೆ ನೀಡಿದೆ. ಸಭೆ ನಡೆಸಲಾಗುತ್ತದೆ ಎಂದರು.

ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ತಾಂಡವ; ಶೇ.60ರಷ್ಟು ಕಮಿಷನ್ ಇಲ್ಲದೆ ಯಾವುದೇ ಕೆಲಸ ನಡೆಯುತ್ತಿಲ್ಲ: ಅಶೋಕ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


