ರಾಜಕೀಯ

ಬರೀ ಈ 5 ವರ್ಷ ಅಲ್ಲ, ಮುಂದೈದು ವರ್ಷವೂ ನಾನೇ ಸಿಎಂ: ವಿಧಾನಸಭೆಯಲ್ಲೇ ಗುಡುಗಿದ ಸಿದ್ದರಾಮಯ್ಯ

ಮುಖ್ಯಮಂತ್ರಿ ಹುದ್ದೆ ಮತ್ತು ಕೆಪಿಸಿಸಿ ಅಧ್ಯಕ್ಷರು ಸ್ಥಾನ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಆಂತರಿಕ ಕಚ್ಚಾಟದ ನಡುವೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹುದ್ದೆ ಬಿಟ್ಟುಕೊಡುವ ವಿಚಾರಕ್ಕೆ ತೆರೆ ಎಳೆದಂತೆ ಕಾಣುತ್ತಿದೆ.

ಬರೀ ಈ 5 ವರ್ಷ ಅಲ್ಲ, ಮುಂದೈದು ವರ್ಷವೂ ನಾನೇ ಸಿಎಂ: ವಿಧಾನಸಭೆಯಲ್ಲೇ ಗುಡುಗಿದ ಸಿದ್ದರಾಮಯ್ಯ
ಡಿಕೆ ಶಿವಕುಮಾರ್-ಸಿದ್ದರಾಮಯ್ಯ
Published On :

ಬೆಂಗಳೂರು: ಮುಖ್ಯಮಂತ್ರಿ ಹುದ್ದೆ ಮತ್ತು ಕೆಪಿಸಿಸಿ ಅಧ್ಯಕ್ಷರು ಸ್ಥಾನ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಆಂತರಿಕ ಕಚ್ಚಾಟದ ನಡುವೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹುದ್ದೆ ಬಿಟ್ಟುಕೊಡುವ ವಿಚಾರಕ್ಕೆ ತೆರೆ ಎಳೆದಂತೆ ಕಾಣುತ್ತಿದೆ. ಹೌದು... ಇಂದು ಬಿಜೆಪಿ ಶಾಸಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುವಾಗ ವಿರೋಧ ಪಕ್ಷದ ನಾಯಕ ಆರ್ ಅಶೋಕ ಸಿದ್ದರಾಮಯ್ಯ ಇನ್ನು ಎಷ್ಟು ದಿನ ಈ ಹುದ್ದೆಯಲ್ಲಿರುತ್ತಾರೋ ಗೊತ್ತಿಲ್ಲ ಎಂದು ಉದ್ದೇಶಪೂರ್ವಕವಾಗಿ ಕಾಲೆಳೆದರು. ಇಂಥದೊಂದು ಅವಕಾಶಕ್ಕಾಗಿ ಕಾಯುತ್ತಿದ್ದ ಸಿದ್ದರಾಮಯ್ಯ, ಐದು ವರ್ಷ ಅವಧಿಗೂ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ. ಅದಾದ ನಂತರದ ಐದು ವರ್ಷದ ಅವಧಿಗೂ ನಾನೇ ಮುಂದುವರಿಯುತ್ತೇನೆ ಎಂದು ನಿರ್ಭಾವುಕಾರಾಗಿ ಹೇಳಿದ್ದಾರೆ. ಸಿದ್ದರಾಮಯ್ಯರ ಈ ಮಾತುಗಳು ಬಿಜೆಪಿ ಶಾಸಕರು ಬಾಯಿ ಮುಚ್ಚಿಸಿರಬಹುದು. ಅದರೆ ಕಾಂಗ್ರೆಸ್ ಪಾಳೆಯದಲ್ಲಿ ಸಂಚಲನ ಮೂಡಿದೆ. ಇದಕ್ಕೆ ಡಿಕೆ ಶಿವಕುಮಾರ್ ಬಣ ಯಾವ ರೀತಿ ಪ್ರತಿಕ್ರಿಯಿಸಲಿದೆ ಎಂಬುದನ್ನು ಕಾದುನೋಡಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.