ಡಿಕೆಶಿ ಔತಣಕೂಟದಲ್ಲಿ ಎಲ್ಲರೂ ಭಾಗಿಯಾಗಿದ್ದರು; ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ: ಎಂ.ಬಿ ಪಾಟೀಲ್
ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಐದು ವರ್ಷ ಪೂರೈಸಿದ ಕಾರಣ ಕಾಂಗ್ರೆಸ್ ಪಕ್ಷದ ಸಚಿವರು, ಶಾಸಕರಿಗೆ ಔತಣಕೂಟ ಏರ್ಪಡಿಸಿದ್ದರು.

ಬೆಳಗಾವಿ: ರಾಜ್ಯ ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕರೆದಿದ್ದ ಔತಣಕೂಟದಲ್ಲಿ ಪಕ್ಷದ ಎಲ್ಲಾ ಶಾಸಕರು ಭಾಗವಹಿಸಿದ್ದರು ಎಂದು ಸಚಿವ ಎಂಬಿ ಪಾಟೀಲ್ ಅವರು ಶನಿವಾರ ಹೇಳಿದರು.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಐದು ವರ್ಷ ಪೂರೈಸಿದ ಕಾರಣ ಕಾಂಗ್ರೆಸ್ ಪಕ್ಷದ ಸಚಿವರು, ಶಾಸಕರಿಗೆ ಔತಣಕೂಟ ಏರ್ಪಡಿಸಿದ್ದರು. ಇದಕ್ಕೆ ಪರಮೇಶ್ವರ್ ಭಾಗವಹಿಸಿರಲಿಲ್ಲ. ಏಕೆಂದರೆ, ಅವರ ಆಪ್ತರೊಬ್ಬರು ನಿಧನರಾಗಿದ್ದ ಕಾರಣ ಅವರ ಬರಲು ಸಾಧ್ಯವಾಗಲಿಲ್ಲ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ವಿಪಕ್ಷದವರು ಸುಮ್ಮನೇ ವಿವಾದಗಳನನ್ನೆಬ್ಬಿಸುತ್ತಾರೆ. ಈ ಭೋಜನಾಕೂಟದಲ್ಲಿ ಮುಖ್ಯಮಂತ್ರಿ ಸೇರಿದಂತೆ, ಸಚಿವ ಸತೀಶ್ ಜಾರಕಿಹೊಳಿ, ಸಹಕಾರ ಸಚಿವ ಕೆ.ಎನ್.ರಾಜಣ್ಣ ಭಾಗವಹಿಸುವ ಮೂಲಕ ಈ ವಿವಾದಗಳಿಗೆ ತೆರೆ ಎಳೆದಿದ್ದಾರೆ ಎಂದು ತಿಳಿಸಿದರು.
ಅಧಿವೇಶನ ನಡೆದಾಗ ಸಾಮಾನ್ಯವಾಗಿ ಸಚಿವರು, ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಔತಣಕೂಟ ಆಯೋಜಿಸುತ್ತಾರೆ. ಇದರಲ್ಲಿ ವಿಶೇಷವೇನೂ ಇಲ್ಲ ಎಂದರು.
ಕೆಪಿಸಿಸಿಯ ಮುಖ್ಯಸ್ಥರು ಯಾರು ಎಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ರಾಜ್ಯ ಮಟ್ಟದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಯಾವುದೇ ಚರ್ಚೆ ನಡೆಯುವುದಿಲ್ಲ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



