ರಾಜಕೀಯ

ಗ್ಯಾರಂಟಿ ಯೋಜನೆಗಳಿಗೆ ಅರ್ಥವಿಲ್ಲ: ಬಿ.ಎಸ್ ಯಡಿಯೂರಪ್ಪ

ಮತದಾರರನ್ನು ಆಕರ್ಷಿಸಲು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ, ಇದರಿಂದ ಯಾವುದೇ ಪ್ರಯೋಜನಗಳಾಗಿಲ್ಲ.

ಗ್ಯಾರಂಟಿ ಯೋಜನೆಗಳಿಗೆ ಅರ್ಥವಿಲ್ಲ: ಬಿ.ಎಸ್ ಯಡಿಯೂರಪ್ಪ
ಸಿಎಂ ಬಿ.ಎಸ್.ಯಡಿಯೂರಪ್ಪ
Published On :

ಬೆಂಗಳೂರು: ಗ್ಯಾರಂಟಿ ಯೋಜನೆಗಳು ನಿಷ್ಪರಿಣಾಮಕಾರಿ ಮತ್ತು ಅರ್ಥಹೀನ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಟೀಕಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ತುಘಲಕ್ ದರ್ಬಾರ್‌ ನಡೆದಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಅರ್ಥವಿಲ್ಲ. ಜನರನ್ನು ತೃಪ್ತಿಪಡಿಸಲು ಜಾರಿಗೆ ತಂದ ಯಾವ ಯೋಜನೆಗಳೂ ಕಾರ್ಯರೂಪಕ್ಕೆ ಬರುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಮತದಾರರನ್ನು ಆಕರ್ಷಿಸಲು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ, ಇದರಿಂದ ಯಾವುದೇ ಪ್ರಯೋಜನಗಳಾಗಿಲ್ಲ ಎಂದು ಹೇಳಿದರು.

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ ನೀಡುವಲ್ಲಿ ಸರ್ಕಾರ ವಿಫಲವಾಗಿದೆ. ಅಲ್ಪಸಂಖ್ಯಾತರಿಗೆ ಶೇಕಡಾ 4 ರಷ್ಟು ಮೀಸಲಾತಿ ನೀಡುವ ಸರ್ಕಾರದ ನಿರ್ಧಾರವು ಅನ್ಯಾಯುತವಾದದ್ದು ಎಂದು ಆರೋಪಿಸಿದರು.

ರಾಜ್ಯದಲ್ಲಿ ಬಿಜೆಪಿ ಪರ ಅಲೆ ಹೆಚ್ಚುತ್ತಿದ್ದು, ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಗುರಿ ಸಾಧಿಸಲು ಪಕ್ಷವು ಪ್ರಾಮಾಣಿಕ ಮತ್ತು ಒಗ್ಗಟ್ಟಿನ ಪ್ರಯತ್ನಗಳನ್ನು ಮಾಡುತ್ತದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.