'ಉಂಡ ಮನೆಗೆ ಕನ್ನ, ಸ್ವಪಕ್ಷೀಯರಿಗೇ ಗುನ್ನ; ಇದೂ ಒಂದು ಬದುಕೇ? ಆಕಾಶಕ್ಕೆ ಉಗಿದರೆ ಮುಖದ ಮೇಲೆ ಬೀಳುತ್ತದೆ ಮಂಕೆ'!
ಮರ್ಯಾದೆಗೇಡಿ, ಕಿಡಿಗೇಡಿ ನನ್ನ ಮೇಲೆ ಮತ್ತೆ ವಿಷ ಕಕ್ಕಿರುವುದು ಹತಾಶೆ ಅಷ್ಟೇ. ಆಕಾಶಕ್ಕೆ ಉಗಿದರೆ ಮುಖದ ಮೇಲೆಯೇ ಬೀಳುತ್ತದೆ ಮಂಕೆ. ಇಷ್ಟೂ ಸಾಮಾನ್ಯಜ್ಞಾನವೂ ಇಲ್ಲವೇ?

ಬೆಂಗಳೂರು: ಅಹೋರಾತ್ರಿಯೂ ದ್ರೋಹ ಚಿಂತನೆ, ವಿಶ್ವಾಸದ್ರೋಹ, ಉಂಡ ಮನೆಗೆ ಕನ್ನ, ಸ್ವಪಕ್ಷೀಯರಿಗೇ ಗುನ್ನ, ಇದೂ ಒಂದು ಬದುಕೇ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಪರೋಕ್ಷಕವಾಗಿ ಕಿಡಿಕಾರಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಹನಿಟ್ರ‍್ಯಾಪ್ ವಿಷಯವಾಗಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮರ್ಯಾದೆಗೇಡಿ, ಕಿಡಿಗೇಡಿ ನನ್ನ ಮೇಲೆ ಮತ್ತೆ ವಿಷ ಕಕ್ಕಿರುವುದು ಹತಾಶೆ ಅಷ್ಟೇ. ಆಕಾಶಕ್ಕೆ ಉಗಿದರೆ ಮುಖದ ಮೇಲೆಯೇ ಬೀಳುತ್ತದೆ ಮಂಕೆ. ಇಷ್ಟೂ ಸಾಮಾನ್ಯಜ್ಞಾನವೂ ಇಲ್ಲವೇ? ಕುಂಬಳಕಾಯಿ ಕಳ್ಳನಿಗೆ ಕೋಪ ಬಂದಿದೆ.
ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಕ್ರಿಮಿನಲ್ ಕೃತ್ಯಗಳಲ್ಲಿ ತೊಡಗಿರುವ ವಿಷಸರ್ಪ ನನ್ನಡೆಗೆ ನಾಲಿಗೆ ಚಾಚಿದೆ. ಇಂಥ ಕ್ರಿಮಿನಲ್ ಒಬ್ಬ ಕೆಟ್ಟ ಅಲೋಚನೆಗಳಲ್ಲಿ ದಿನಪೂರ್ತಿ ಮುಳುಗಿರುವುದು ಸಹಜ. ಕ್ರಿಮಿನಲ್‌ನ ಚಾಳಿಯೇ ಧಮ್ಕಿ ಹಾಕುವುದು. ವಿಷಕ್ರಿಮಿಯ ಕೆಲಸ ಎಲ್ಲರನ್ನೂ ಕಚ್ಚುವುದು. ಇದರಲ್ಲಿ ನನಗೇನೂ ಅಚ್ಚರಿ ಇಲ್ಲ.
ನಾನು ಭೂ ಒತ್ತುವರಿ ಮಾಡಿದ್ದೇನೋ ಇಲ್ಲವೋ ಕಾನೂನು ವ್ಯಾಪ್ತಿಯಲ್ಲಿ ತೀರ್ಮಾನವಾಗುತ್ತದೆ. ಈಗ ನನ್ನ ಮರ್ಯಾದೆ ವಿಷಯ ಇರಲಿ, ಇವತ್ತು ಸ್ವಪಕ್ಷೀಯರೇ ಈ ಮರ್ಯಾದೆಗೇಡಿಯ ಮಾನವನ್ನು ವಿಧಾನಸೌಧದಲ್ಲಿಯೇ ಹರಾಜು ಹಾಕಿದ್ದಾರೆ. ಅದಕ್ಕೆ ಉತ್ತರವೇನು ಎಂದು ಪ್ರಶ್ನಿಸಿದ್ದಾರೆ.

ಎಚ್.ಡಿ ಕುಮಾರಸ್ವಾಮಿ ಭೂಮಿ ಒತ್ತುವರಿ ತೆರವು: ಅಧಿಕಾರಿಗಳು ನ್ಯಾಯಾಲಯದ ಆದೇಶ ಪಾಲಿಸಿದ್ದಾರೆ- ಡಿ.ಕೆ ಶಿವಕುಮಾರ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


