ರಾಜಕೀಯ

ಆರು ವರ್ಷ ಬಿಜೆಪಿಯಿಂದ ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಛಾಟನೆ

ಯತ್ನಾಳ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಬುಧವಾರ ಆದೇಶ ಹೊರಡಿಸಿದೆ.

ಆರು ವರ್ಷ ಬಿಜೆಪಿಯಿಂದ ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಛಾಟನೆ
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
Published On :

ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸುತ್ತಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​ ವಿರುದ್ಧ ಕೊನೆಗೂ ಹೈಕಮಾಂಡ್ ಕ್ರಮ ಕೈಗೊಂಡಿದೆ.

ಯತ್ನಾಳ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಬುಧವಾರ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಬಿಜೆಪಿಯಲ್ಲಿನ ಬಣಬಡಿದಾಟಕ್ಕೆ ಕೊನೆಗೂ ಹೈಕಮಾಂಡ್​ ಬ್ರೇಕ್ ಹಾಕಿದೆ.

ಪಕ್ಷದ ಕೇಂದ್ರ ಶಿಸ್ತು ಸಮಿತಿಯು 2025 ಫೆಬ್ರವರಿ 10 ರಂದು ನೀಡಿದ್ದ ಶೋಕಾಸ್ ನೋಟಿಸ್‌ಗೆ ನಿಮ್ಮ ಪ್ರತಿಕ್ರಿಯೆಯನ್ನು ಪರಿಗಣಿಸಿದೆ ಮತ್ತು ಹಿಂದಿನ ಶೋಕಾಸ್ ನೋಟಿಸ್‌ಗಳಿಗೆ ಪ್ರತಿಕ್ರಿಯೆಯಾಗಿ ಉತ್ತಮ ನಡವಳಿಕೆಯ ಭರವಸೆಗಳನ್ನು ನೀಡಿದ್ದರೂ ಸಹ, ನೀವು ಪಕ್ಷದ ಶಿಸ್ತನ್ನು ಪದೇ ಪದೇ ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದೆ. ಆದ್ದರಿಂದ, ನಿಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷಗಳ ಅವಧಿಗೆ ಉಚ್ಚಾಟಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಶಿಸ್ತು ಸಮಿತಿ ಆದೇಶದಲ್ಲಿ ತಿಳಿಸಲಾಗಿದೆ.

ನೀವು ಇಲ್ಲಿಯವರೆಗೆ ಹೊಂದಿದ್ದ ಯಾವುದೇ ಪಕ್ಷದ ಹುದ್ದೆಯಿಂದ ನಿಮ್ಮನ್ನು ತೆಗೆದುಹಾಕಲಾಗಿದೆ ಎಂದು ಬಿಜೆಪಿ ಕೇಂದ್ರ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂ ಪಾಠಕ್‌ ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.