Honeytrap row: ಸಿಬಿಐ, ನ್ಯಾಯಾಂಗ ನೇತೃತ್ವದಲ್ಲಿ ತನಿಖೆಗೆ BJP ಆಗ್ರಹ
ಈ ಹನಿಟ್ರ್ಯಾಪ್ ಹಿಂದೆ ಯಾರ್ಯಾರಿದ್ದಾರೆ? ಯಾರ್ಯಾರನ್ನು ಬಲಿ ತೆಗೆದುಕೊಳ್ಳುವ ವಿಚಾರ ಇದೆ ಎಂಬುದು ಬಹಿರಂಗ ಆಗಬೇಕಿದೆ. ರಾಜಣ್ಣ ಇರಬಹುದು, ಅವರ ಮಗ ರಾಜೇಂದ್ರರ ಕೊಲೆ ಯತ್ನದ ಹೇಳಿಕೆ ಏನಿದೆಯೋ ಅದು ಗಂಭೀರ ವಿಚಾರ.

ಬೆಂಗಳೂರು: ರಾಜ್ಯದಲ್ಲಿ ಹನಿಟ್ರ್ಯಾಪ್ ಪ್ರಕರಣ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದ್ದು, ಇದರ ಸಮಗ್ರ ತನಿಖೆಗೆ ಸಿಬಿಐ ಅಥವಾ ನ್ಯಾಯಾಂಗ ತನಿಖೆಯಾಗಬೇಕೆಂದು ವಿರೋಧ ಪಕ್ಷ ಬಿಜೆಪಿ ಗುರುವಾರ ಆಗ್ರಹಿಸಿದೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು, ಈ ಹನಿಟ್ರ್ಯಾಪ್ ಹಿಂದೆ ಯಾರ್ಯಾರಿದ್ದಾರೆ? ಯಾರ್ಯಾರನ್ನು ಬಲಿ ತೆಗೆದುಕೊಳ್ಳುವ ವಿಚಾರ ಇದೆ ಎಂಬುದು ಬಹಿರಂಗ ಆಗಬೇಕಿದೆ. ರಾಜಣ್ಣ ಇರಬಹುದು, ಅವರ ಮಗ ರಾಜೇಂದ್ರರ ಕೊಲೆ ಯತ್ನದ ಹೇಳಿಕೆ ಏನಿದೆಯೋ ಅದು ಗಂಭೀರ ವಿಚಾರ ಎಂದು ಹೇಳಿದರು.
ಸರ್ಕಾರ ಕೂಡಲೇ ರಾಜೇಂದ್ರ ಅವರಿಗೆ ಭದ್ರತೆ ಒದಗಿಸಬೇಕು. ಸರ್ಕಾರದ ಒಳಗೆ ಏನು ನಡೆಯುತ್ತಿದೆ ಎಂದು ಪ್ರಶ್ನಿಸಿ, ಕಾಂಗ್ರೆಸ್ಸಿನ ಒಳಗೇ ಈ ಸ್ಥಿತಿ ಬಂದರೆ, ಬೇರೆ ಪಕ್ಷದ ನಾಯಕರ ಪರಿಸ್ಥಿತಿ ಏನು ಎಂಬುದನ್ನು ಕೂಡ ನಾವು ಗಂಭೀರವಾಗಿ ಯೋಚಿಸಬೇಕಿದೆ. ಹನಿಟ್ರ್ಯಾಪ್ ವಿಚಾರವನ್ನು ಸಿಬಿಐ ಅಥವಾ ಹಾಲಿ ಜಡ್ಜ್ ನೇತೃತ್ವದಲ್ಲಿ ತನಿಖೆ ಮಾಡಿಸಲು ಸರ್ಕಾರ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು,
ಒಳ ಮೀಸಲಾತಿ ಕುರಿತು ಮಾತನಾಡಿ, ಎಸ್‍ಸಿ, ಎಸ್‍ಟಿ ಸಮುದಾಯಕ್ಕೆ ಕೊಟ್ಟಿದ್ದ ಪ್ರಮಾಣಕ್ಕಿಂತ ಕಡಿಮೆ ಪ್ರಮಾಣದ ಮೀಸಲಾತಿಯನ್ನು ಕಾಂಗ್ರೆಸ್ ಸರಕಾರ ನಿಗದಿಪಡಿಸಿದರೆ ಅದರ ವಿರುದ್ಧ ಬಿಜೆಪಿ ಹೋರಾಟ ಮಾಡಲಿದೆ ಎಂದು ಎಚ್ಚರಿಸಿದರು.
ಜಸ್ಟಿಸ್ ನಾಗಮೋಹನ್‍ದಾಸ್ ಅವರು ನೀಡಿದ ವರದಿಯನ್ನು ಗಮನಿಸಿ ನಾವು ನಿರ್ಧಾರ ಮಾಡುತ್ತೇವೆ. ಪಕ್ಷವು ನಿನ್ನೆ ಕೈಗೊಂಡ ತೀರ್ಮಾನದಂತೆ ಪಕ್ಷದ ಕಾರ್ಯಕರ್ತರು ಕಾರ್ಯಪ್ರವೃತ್ತರಾಗಬೇಕು ಎಂದು ಮನವಿ ಮಾಡಿದರು.
ಹಾಲಿನ ಬೆಲೆ ಏರಿಕೆಯ ಕುರಿತು ಮಾತನಾಡಿದ, ಈ ಸರ್ಕಾರ ಮನೆ ಮುರುಕ ಸರ್ಕಾರ.. ಹಾಲಿನ ದರ ಲೀಟರ್ಗೆ 4 ರೂಪಾಯಿ ಏರಿಸಲು ನಿರ್ಧಾರ ಮಾಡಿದ್ದಾರೆ. ಜನರಿಗೆ ದರ ಏರಿಕೆ ಬರೆ ಹಾಕಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ, ಮೂರು ಬಾರಿ ಹಾಲಿನ ಬೆಲೆಗಳನ್ನು ಏರಿಕೆ ಮಾಡಿದೆ. ಸರ್ಕಾರ ಕೂಡಲೇ ಹಾಲಿನ ದರ ಏರಿಕೆಯನ್ನ ವಾಪಸ್ ಪಡೆಯಬೇಕು, ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



