ಬಸನಗೌಡ ಪಾಟೀಲ್ ಯತ್ನಾಳ್ ಸವಾಲು ಸ್ವೀಕಾರ: ಶಾಸಕ ಸ್ಥಾನಕ್ಕೆ ಸಚಿವ ಶಿವಾನಂದ ಪಾಟೀಲ ರಾಜೀನಾಮೆ
ರಾಜಕೀಯಕ್ಕಾಗಿ ಪಾಟೀಲ’ ಅಂತ ಸರ್‌ನೇಮ್ ಸೇರಿಸಿದ್ದು, ಅಪ್ಪನಿಗೆ ಹುಟ್ಟಿದವ ಆದರೆ ಶುಕ್ರವಾರದೊಳಗೆ ರಾಜೀನಾಮೆ ನೀಡಿ ಚುನಾವಣೆಯಲ್ಲಿ ನನ್ನ ಮುಂದೆ ಸ್ಪರ್ಧಿಸಲಿ ಎಂದು ಸವಾಲು ಹಾಕಿದ್ದರು.

ಬೆಂಗಳೂರು: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಸವಾಲನ್ನು ಸ್ವೀಕರಿಸಿರುವ ಶಿವಾನಂದ ಪಾಟೀಲ ಶುಕ್ರವಾರ ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ.
ಯತ್ನಾಳ್ ಅವರು ಇತ್ತೀಚೆಗೆ ಶಿವಾನಂದ ಪಾಟೀಲ ಅವರನ್ನು ಉದ್ದೇಶಿಸಿ, ಅವರು ಪಾಟೀಲರೇ ಅಲ್ಲ, ‘ರಾಜಕೀಯಕ್ಕಾಗಿ ಪಾಟೀಲ’ ಅಂತ ಸರ್‌ನೇಮ್ ಸೇರಿಸಿದ್ದು, ಅಪ್ಪನಿಗೆ ಹುಟ್ಟಿದವ ಆದರೆ ಶುಕ್ರವಾರದೊಳಗೆ ರಾಜೀನಾಮೆ ನೀಡಿ ಚುನಾವಣೆಯಲ್ಲಿ ನನ್ನ ಮುಂದೆ ಸ್ಪರ್ಧಿಸಲಿ ಎಂದು ಸವಾಲು ಹಾಕಿದ್ದರು. ಆ ಸವಾಲು ಸ್ವೀಕರಿಸಿದ ಶಿವಾನಂದ ಪಾಟೀಲ ರಾಜೀನಾಮೆ ನೀಡಿದ್ದಾರೆ. ಬಸನಗೌಡ ಪಾಟೀಲ ರಾಜೀನಾಮೆ ನೀಡಿದ ನಂತರ ತಮ್ಮ ರಾಜೀನಾಮೆ ಸ್ವೀಕರಿಸಬೇಕು ಎಂದು ಶಿವಾನಂದ ಪಾಟೀಲ್ ಷರತ್ತು ಹಾಕಿದ್ದಾರೆ.
ರಾಜೀನಾಮೆ ಪತ್ರ ನೀಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿ ಶಿವಾನಂದ ಪಾಟೀಲ, ವೈಯಕ್ತಿಕ ಕಾರಣಕ್ಕೆ ರಾಜೀನಾಮೆ ನೀಡಿದ್ದೇನೆ. ಇದಕ್ಕೂ ಪಕ್ಷಕ್ಕೂ ಸಂಬಂಧವಿಲ್ಲ. ಇದು ವೈಯಕ್ತಿಕ ತೀರ್ಮಾನ. ಯತ್ನಾಳ ರಾಜೀನಾಮೆ ನೀಡಿ ನನ್ನ ವಿರುದ್ಧ ಚುನಾವಣೆ ಎದುರಿಸಲಿ ಎಂದು ಸವಾಲು ಹಾಕಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



