ಯತ್ನಾಳ್ ಇನ್ನೂ ರಾಜೀನಾಮೆ ಕೊಟ್ಟಿಲ್ಲ, ಹೀಗಾಗಿ ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಸಾಧ್ಯವಿಲ್ಲ: ಸ್ಪೀಕರ್
ಇನ್ನೊಬ್ಬ ಶಾಸಕರ ರಾಜೀನಾಮೆ ಅಂಗೀಕರಿಸಿದ ನಂತರ ನನ್ನ ರಾಜೀನಾಮೆ ಅಂಗೀಕರಿಸುವಂತೆ ಮನವಿ ಮಾಡಿದ್ದಾರೆ. ಆದರೆ ಯತ್ನಾಳ್ ಅವರು ಇನ್ನೂ ರಾಜೀನಾಮೆ ನೀಡಿಲ್ಲ. ಹೀಗಾಗಿ ಪಾಟೀಲ್ ಅವರ ರಾಜೀನಾಮೆ ಅಂಗೀಕರಿಸಲು ಸಾಧ್ಯವಿಲ್ಲ ಎಂದು ಸ್ಪೀಕರ್ ಸ್ಪಷ್ಟಪಡಿಸಿದರು.

ಬೆಂಗಳೂರು: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹಾಕಿದ ಸವಾಲನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡು ಶಿವಾನಂದ ಪಾಟೀಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ಸಚಿವ ಶಿವಾನಂದ ಪಾಟೀಲ್ ಅವರು ನೀಡಿದ ರಾಜೀನಾಮೆ ಪತ್ರ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯುಟಿ ಖಾದರ್ ಅವರು, ಶಿವಾನಂದ ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಅವರಿಗೆ ಇನ್ನೊಬ್ಬರು ಶಾಸಕರು ವೈಯಕ್ತಿಕ ಸವಾಲು ಹಾಕಿದ್ದಾರೆ. ಸವಾಲು ಸ್ವೀಕಾರ ಮಾಡಿ ರಾಜೀನಾಮೆ ನೀಡಿದ್ದಾರೆ ಎಂದರು.
ಪಾಟೀಲ್ ಅವರು ಷರತ್ತುಬದ್ಧ ರಾಜೀನಾಮೆ ನೀಡಿದ್ದಾರೆ. ಇನ್ನೊಬ್ಬ ಶಾಸಕರ ರಾಜೀನಾಮೆ ಅಂಗೀಕರಿಸಿದ ನಂತರ ನನ್ನ ರಾಜೀನಾಮೆ ಅಂಗೀಕರಿಸುವಂತೆ ಮನವಿ ಮಾಡಿದ್ದಾರೆ. ಆದರೆ ಯತ್ನಾಳ್ ಅವರು ಇನ್ನೂ ರಾಜೀನಾಮೆ ನೀಡಿಲ್ಲ. ಹೀಗಾಗಿ ಪಾಟೀಲ್ ಅವರ ರಾಜೀನಾಮೆ ಅಂಗೀಕರಿಸಲು ಸಾಧ್ಯವಿಲ್ಲ ಎಂದು ಸ್ಪೀಕರ್ ಸ್ಪಷ್ಟಪಡಿಸಿದರು.
ವೈಯಕ್ತಿಕ ವಿಚಾರಗಳನ್ನು ರಾಜಕಾರಣದಲ್ಲಿ ಬಳಸಬೇಕೋ ಇಲ್ಲವೊ ಅನ್ನೋದು ಅವರವರ ವಿವೇಚನೆ ಬಿಟ್ಟಿರುವ ವಿಚಾರ. ಎಲ್ಲವೂ ಬದಲಾಗುತ್ತಿರುವ ಹಾಗೆ ರಾಜಕಾರಣವೂ ಬದಲಾಗುತ್ತಿದೆ, ಪಾಟೀಲ್ ಸಲ್ಲಿಸಿರುವ ರಾಜೀನಾಮೆ ಪತ್ರವನ್ನು ಪರಿಶೀಲನೆ ಮಾಡುತ್ತೇನೆ ಎಂದು ಖಾದರ್ ಹೇಳಿದರು.
ಯತ್ನಾಳ್ ಅವರು ಇತ್ತೀಚೆಗೆ ಶಿವಾನಂದ ಪಾಟೀಲ್ ಅವರನ್ನು ಉದ್ದೇಶಿಸಿ, ಅವರು ಪಾಟೀಲರೇ ಅಲ್ಲ, ‘ರಾಜಕೀಯಕ್ಕಾಗಿ ಪಾಟೀಲ್’ ಅಂತ ಸರ್‌ನೇಮ್ ಸೇರಿಸಿದ್ದು, ಅಪ್ಪನಿಗೆ ಹುಟ್ಟಿದವ ಆದರೆ ಶುಕ್ರವಾರದೊಳಗೆ ರಾಜೀನಾಮೆ ನೀಡಿ ಚುನಾವಣೆಯಲ್ಲಿ ನನ್ನ ಮುಂದೆ ಸ್ಪರ್ಧಿಸಲಿ ಎಂದು ಸವಾಲು ಹಾಕಿದ್ದರು. ಆ ಸವಾಲು ಸ್ವೀಕರಿಸಿದ ಶಿವಾನಂದ ಪಾಟೀಲ್ ಅವರು ಇಂದು ರಾಜೀನಾಮೆ ನೀಡಿದ್ದಾರೆ. ಬಸನಗೌಡ ಪಾಟೀಲ್ ಯಾತ್ನಾಳ್ ರಾಜೀನಾಮೆ ನೀಡಿದ ನಂತರ ತಮ್ಮ ರಾಜೀನಾಮೆ ಅಂಗೀಕರಿಸಬೇಕು ಎಂದು ಶಿವಾನಂದ ಪಾಟೀಲ್ ಷರತ್ತು ಹಾಕಿದ್ದಾರೆ.
ರಾಜೀನಾಮೆ ಪತ್ರ ನೀಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿ ಶಿವಾನಂದ ಪಾಟೀಲ್ ಅವರು, ವೈಯಕ್ತಿಕ ಕಾರಣಕ್ಕೆ ರಾಜೀನಾಮೆ ನೀಡಿದ್ದೇನೆ. ಇದಕ್ಕೂ ಪಕ್ಷಕ್ಕೂ ಸಂಬಂಧವಿಲ್ಲ. ಇದು ವೈಯಕ್ತಿಕ ತೀರ್ಮಾನ. ಯತ್ನಾಳ್ ರಾಜೀನಾಮೆ ನೀಡಿ ನನ್ನ ವಿರುದ್ಧ ಚುನಾವಣೆ ಎದುರಿಸಲಿ ಎಂದು ಸವಾಲು ಹಾಕಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



