ಸಚಿವರಾಗುವ ಅರ್ಹತೆ ಬಹಳಷ್ಟು ಜನರಿಗಿದೆ; ಆದರೆ 34 ಜನಕ್ಕಷ್ಟೇ ಮಂತ್ರಿಯಾಗಲು ಅವಕಾಶ: ಸತೀಶ್ ಜಾರಕಿಹೊಳಿ
ಸಚಿವ ಕೃಷ್ಣಭೈರೇಗೌಡ ಸಚಿವ ಸ್ಥಾನ ತ್ಯಾಗದ ಬಗ್ಗೆ ಹೇಳಿಕೆ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಹೈಕಮಾಂಡ್ ಹೇಳಿದರೆ ನಾವು ಕೂಡ ಪಾಲನೆ ಮಾಡಬೇಕಾಗುತ್ತದೆ ಎಂದು ಹೇಳಿದರು.

ಬೆಳಗಾವಿ: ಸಂಪುಟ ಪುನರ ರಚನೆ ಆಗಬೇಕೆಂಬುದು ಚರ್ಚೆಯಲ್ಲಿದೆ. ಆದರೆ ಸಂಪುಟ ಪುನರ್ರಚನೆ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಸಚಿವರಾಗುವ ಅರ್ಹತೆ ಬಹಳಷ್ಟು ಜನರಿಗಿದೆ. ಆದರೆ ಕೇವಲ 34 ಮಂದಿಗೆ ಮಾತ್ರ ಮಂತ್ರಿಯಾಗಲು ಅವಕಾಶವಿದೆ. ಇನ್ನು ಯಾರನ್ನು ಮಂತ್ರಿ ಸ್ಥಾನದಿಂದ ಕೆಳಗಿಳಿಸಬೇಕು. ಯಾರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಈ ಸಂಬಂಧ ನನ್ನ ಬಳಿ ಕೇಳಿದರೆ ನಾನೇನು ಹೇಳಲು ಸಾಧ್ಯವಿಲ್ಲ, ಅಧಿಕಾರವೂ ಇಲ್ಲ ಎಂದರು.
ದೆಹಲಿ ಮಟ್ಟದಲ್ಲಿ ಚರ್ಚೆ ಆಗಿದ್ದರೂ ಆಗಿರಬಹುದು. ಎಲ್ಲವೂ ಹೈಕಮಾಂಡ್ ತೀರ್ಮಾನದಂತೆ ನಡೆಯುತ್ತದೆ. ನಿನ್ನೆ ಸಿಎಂ ಸಿದ್ದರಾಮಯ್ಯ ಮೊದಲ ಬಾರಿ ಬಹಿರಂಗವಾಗಿ ಸಚಿವ ಸಂಪುಟ ಪುನಾರಚನೆ ಕುರಿತು ಹೇಳಿದ್ದಾರೆ ಎಂದರು, ಇನ್ನು ಸಚಿವ ಕೃಷ್ಣಭೈರೇಗೌಡ ಸಚಿವ ಸ್ಥಾನ ತ್ಯಾಗದ ಬಗ್ಗೆ ಹೇಳಿಕೆ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಹೈಕಮಾಂಡ್ ಹೇಳಿದರೆ ನಾವು ಕೂಡ ಪಾಲನೆ ಮಾಡಬೇಕಾಗುತ್ತದೆ ಎಂದು ಹೇಳಿದರು.
ಎಂಎಲ್ ಸಿ ಯತಿಂದ್ರ ಸಿದ್ದರಾಮಯ್ಯ ಹೇಳಿಕೆ ಕುರಿತು ಮಾತನಾಡಿ, ಯತಿಂದ್ರ ಅವರು ಸಿಎಂ ಸಿದ್ದರಾಮಯ್ಯ ನಂತರ ನಾನು ಅಹಿಂದ ಸಂಘಟನೆಯನ್ನು ಮುನ್ನಡೆಸುತ್ತೇನೆಂದು ಹೇಳಿದ್ದಾರೆ ಅಷ್ಟೇ, ಅದು ನಿಜವೂ ಇದೆ. ಆದರೆ ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಮಾಧ್ಯಮದವರಿಗೆ ತಿಳಿಸಿದರು.

ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ; ಸಂಪುಟ ಪುನಾರಚನೆ, ಸಿಎಂ ಬದಲಾವಣೆ ಮಾಡುವುದು ಹೈಕಮಾಂಡ್: ಕೆ.ಎಚ್ ಮುನಿಯಪ್ಪ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


