ಟನಲ್ ರಸ್ತೆ ಯೋಜನೆ ಸಮಿತಿ ಅಧ್ಯಕ್ಷನಾಗಲು ಸಿದ್ಧ, ಮೊದಲು ನಗರದ ಕಸ-ರಸ್ತೆಗುಂಡಿ ಸಮಸ್ಯೆ ಬಗೆಹರಿಸಿ: ಡಿ.ಕೆ ಶಿವಕುಮಾರ್'ಗೆ ಆರ್.ಅಶೋಕ್ ಸವಾಲು
ನನ್ನನ್ನೇ ಸಮಿತಿ ಅಧ್ಯಕ್ಷರನ್ನಾಗಿ ಮಾಡುತ್ತಾರೆಂದು ಹೇಳಿದ್ದಾರೆ. ಇಂತಹ ಯೋಜನೆ ಮಾಡಲು ಇವರಿಗೆ ನೈಪುಣ್ಯತೆ ಇದೆಯೇ ಎಂದು ಸಾಬೀತುಪಡಿಸಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ರಸ್ತೆಗುಂಡಿಗಳನ್ನು ಮುಚ್ಚಿಸಲಿ. ಗುಂಡಿ ಮುಚ್ಚಲು ಆಗದವರು ಸುರಂಗ ಹೇಗೆ ಮಾಡುತ್ತಾರೆ?

ಬೆಂಗಳೂರು: ಸುರಂಗ ರಸ್ತೆ ಯೋಜನೆ ಸಮಿತಿಯ ಅಧ್ಯಕ್ಷನಾಗಲು ಸಿದ್ಧ. ಆದರೆ, ಮೊದಲು ನಗರದ ಕಸ ಹಾಗೂ ರಸ್ತೆ ಗುಂಡಿ ಸಮಸ್ಯೆಯನ್ನು ಬಗೆಹರಿಸಿ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸೋಮವಾರ ಸವಾಲು ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಸುರಂಗ ರಸ್ತೆ ಯೋಜನೆ ಬಗ್ಗೆ ಜನರಿಗೆ ಮಾಹಿತಿ ನೀಡಿಲ್ಲ. ಜನರ ಪ್ರಶ್ನೆಗಳಿಗೆ ಮೊದಲು ಉತ್ತರ ನೀಡಲಿ ಎಂದು ಆಗ್ರಹಿಸಿದರು.
ಕಾಂಗ್ರೆಸ್ ಸರ್ಕಾರ ಬೆಂಗಳೂರಿನಲ್ಲಿ ನಿರ್ಮಿಸಲಿರುವ ಸುರಂಗ ರಸ್ತೆ ಯೋಜನೆಯ ಬಗ್ಗೆ ನಗರದ ಜನರಿಗೆ ಯಾವುದೇ ಮಾಹಿತಿ ನೀಡಿಲ್ಲ. ನಾನು ಅಧಿಕಾರಿಗಳನ್ನು ಈ ಬಗ್ಗೆ ಕೇಳಿದಾಗ 124 ಇಲಾಖೆಗಳಿಂದ ಅನುಮತಿ ಪಡೆಯಬೇಕಿದೆ ಎಂದು ತಿಳಿದುಬಂದಿತು. ನನ್ನನ್ನೇ ಸಮಿತಿ ಅಧ್ಯಕ್ಷರನ್ನಾಗಿ ಮಾಡುತ್ತಾರೆಂದು ಹೇಳಿದ್ದಾರೆ. ಇಂತಹ ಯೋಜನೆ ಮಾಡಲು ಇವರಿಗೆ ನೈಪುಣ್ಯತೆ ಇದೆಯೇ ಎಂದು ಸಾಬೀತುಪಡಿಸಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ರಸ್ತೆಗುಂಡಿಗಳನ್ನು ಮುಚ್ಚಿಸಲಿ. ಗುಂಡಿ ಮುಚ್ಚಲು ಆಗದವರು ಸುರಂಗ ಹೇಗೆ ಮಾಡುತ್ತಾರೆ? ಇದಕ್ಕೆ ಹಣ ಎಲ್ಲಿದೆ ಎಂದು ಪ್ರಶ್ನಿಸಿದರು.
ಬಿಜೆಪಿ ಅಭಿವೃದ್ಧಿಯ ವಿರೋಧಿಯಲ್ಲ. ಆದರೆ, ಮೊದಲು ರಸ್ತೆಗುಂಡಿ ಮುಚ್ಚಿಸಲಿ, ಕಸ ನಿರ್ವಹಣೆ ಮಾಡಲಿ. ಯೋಜನೆ ಖಂಡಿತ ಮಾಡುತ್ತೇವೆ ಎಂದು ದೌರ್ಜನ್ಯದಂತೆ ಮಾತನಾಡಬಾರದು. ಲಾಲ್‌ಬಾಗ್, ಕೆಂಪೇಗೌಡ ಗೋಪುರ ಹಾಳು ಮಾಡಬಾರದು. ಪರಿಸರ ನಾಶ ಮಾಡಬಾರದು. ನನಗೆ ಉತ್ತರ ಕೊಡುವ ಬದಲು ಜನರಿಗೆ ಸರ್ಕಾರ ಉತ್ತರ ನೀಡಬೇಕು. ನಾನಿಲ್ಲಿ ಜನರ ಧ್ವನಿಯಾಗಿ ಮಾತಾಡುತ್ತಿದ್ದೇನೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



