ದೆಹಲಿಯಲ್ಲಿ ಹೈಕಮಾಂಡ್ ಭೇಟಿ?: ಸ್ವತಃ ಸ್ಪಷ್ಟನೆ ನೀಡಿದ ಡಿ.ಕೆ ಶಿವಕುಮಾರ್
ರಾಜ್ಯ ಸರ್ಕಾರದಲ್ಲಿ ಅಧಿಕಾರ ಹಸ್ತಾಂತರ, ನವೆಂಬರ್ ಕ್ರಾಂತಿಯ ಊಹಾಪೋಹಗಳ ನಡುವೆ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಿನ್ನೆ ಬುಧವಾರ ದೆಹಲಿಗೆ ತೆರಳಿದ್ದರು.

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಅಧಿಕಾರ ಹಸ್ತಾಂತರ, ನವೆಂಬರ್ ಕ್ರಾಂತಿಯ ಊಹಾಪೋಹಗಳ ನಡುವೆ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಿನ್ನೆ ಬುಧವಾರ ದೆಹಲಿಗೆ ತೆರಳಿದ್ದರು. ಹೈಕಮಾಂಡ್ ಭೇಟಿಯಾಗುತ್ತಾರೆ ಎಂದು ಹೇಳಲಾಗುತ್ತಿತ್ತು.
ಆದರೆ, ಈ ಕುರಿತು ಸ್ಪಷ್ಟನೆ ನೀಡಿರುವ ಅವರು, ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿಲ್ಲ, ಮಾಡುತ್ತಲೂ ಇಲ್ಲ ಎಂದು ತಿಳಿಸಿದ್ದಾರೆ. ಎಲ್ಲಾ ಸುಳ್ಳು. ನಾನು ಯಾರನ್ನೂ ಭೇಟಿ ಮಾಡಿಲ್ಲ, ಭೇಟಿ ಮಾಡೋದೂ ಇಲ್ಲ ಎಂದು ಹೇಳಿದ್ದಾರೆ.
ದೆಹಲಿ ಭೇಟಿಯ ಮುಖ್ಯ ಉದ್ದೇಶ ರಾಜ್ಯದ ಪ್ರಮುಖ ಜಲ ವಿವಾದಗಳಾದ ಕಾವೇರಿ, ಮೇಕೆದಾಟು ಮತ್ತು ಕೃಷ್ಣಾ ನದಿ ವಿಚಾರಗಳ ಕುರಿತು ಚರ್ಚೆ ನಡೆಸುವುದಾಗಿತ್ತು. ಮಹದಾಯಿ ವಿಚಾರದಲ್ಲೂ ಕೆಲವು ಅಂಶಗಳಿದ್ದು, ಸದ್ಯಕ್ಕೆ ಆ ಬಗ್ಗೆ ಮಾತನಾಡಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಮಹದಾಯಿ ಯೋಜನೆಗೆ ಸಂಬಂಧಿಸಿದಂತೆ ಕೆಲವು ದಾಖಲೆಗಳನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.
ಡಿ ಕೆ ಶಿವಕುಮಾರ್ ಇಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ನಡುವೆ ಡಿ.ಕೆ ಶಿವಕುಮಾರ್ ದೆಹಲಿಗೆ ಆಗಮನ! ವರಿಷ್ಠರನ್ನು ಭೇಟಿಯಾಗ್ತಾರಾ?
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


