ರಾಜಕೀಯ

ಸಂಪುಟ ಬದಲಾವಣೆಯಾದರೆ ಸಿಎಂ ಬದಲಿಲ್ಲ ಎಂದರ್ಥ: ಕುತೂಹಲ ಕೆರಳಿಸಿದ ಸಚಿವ ಪರಮೇಶ್ವರ್ ಹೇಳಿಕೆ

ಸಂಪುಟ ಪುನಾರಚನೆಗೆ ಹೈಕಮಾಂಡ್ ತಾತ್ವಿಕ ಒಪ್ಪಿಗೆ ನೀಡಿದೆ ಎಂಬುದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಹಾಗಾದರೆ ಸಿಎಂ ಬದಲಾವಣೆ ಆಗಲ್ಲ.

ಸಂಪುಟ ಬದಲಾವಣೆಯಾದರೆ ಸಿಎಂ ಬದಲಿಲ್ಲ ಎಂದರ್ಥ: ಕುತೂಹಲ ಕೆರಳಿಸಿದ ಸಚಿವ ಪರಮೇಶ್ವರ್ ಹೇಳಿಕೆ
ಗೃಹ ಸಚಿವ ಜಿ ಪರಮೇಶ್ವರ್
Published On :

ಬೆಂಗಳೂರು: ಸಂಪುಟ ಪುನಾರಚನಗೆ ಹೈಕಮಾಂಡ್ ಒಪ್ಪಿಗೆ ನೀಡಿದೆ ಎಂದರೆ, ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದರ್ಥ. ಸಂಪುಟ ಪುನಾರಚನೆಯಾದರೆ ಮುಖ್ಯಮಂತ್ರಿ ಬದಲಾವಣೆಯಾಗುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಅವರು ಮಾರ್ಮಿಕವಾಗಿ ಹೇಳಿದ್ದಾರೆ.

ಸಚಿವ ಪುನಾರಚನೆ ಹಾಗೂ ಅಧಿಕಾರ ಹಂಚಿಕೆ ಕುರಿತ ಚರ್ಚೆಗಳ ನಡುವೆ ಗೃಹ ಸಚಿವ ಪರಮೇಶ್ವರ್ ಅವರು ನೀಡಿರುವ ಈ ಹೇಳಿಕೆ ತೀವ್ರ ಕುತೂಹಲ ಮೂಡಿಸಿದೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ಪುನಾರಚನೆಗೆ ಹೈಕಮಾಂಡ್ ತಾತ್ವಿಕ ಒಪ್ಪಿಗೆ ನೀಡಿದೆ ಎಂಬುದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಹಾಗಾದರೆ ಸಿಎಂ ಬದಲಾವಣೆ ಆಗಲ್ಲ ಎಂದು ಹೇಳಿದರು.

ಸಂಪುಟ ಪುನಾರಚನೆಯಾದರೆ ಒಳ್ಳೆಯದು. ಬಹಳ ದಿನಗಳಿಂದ ಶಾಸಕರ ಬೇಡಿಕೆಯೂ ಇದೆ. ಹಲವರಿಗೆ ಸಚಿವರಾಗಬೇಕು ಎಂಬ ಅಪೇಕ್ಷೆಯಿದೆ. ಸಂಪುಟ ಪುನಾರಚನೆಗೆ ಅವಕಾಶ ನೀಡಿದ್ದಾರೆಂದರೆ ಸಿಎಂ ಬದಲಾವಣೆ ಬಗ್ಗೆ ನೀವೇ ಊಹೆ ಮಾಡಿಕೊಳ್ಳಿ ಎಂದು ತಿಳಿಸಿದರು.

ಮುಖ್ಯಮಂತ್ರಿ ದೆಹಲಿಗೆ ಹೋಗುವಾಗ ಭೇಟಿ ಮಾಡಿದ್ದೆ. ಸಂಪುಟ ಪುನಾರಚನೆ ಅಥವಾ ಬೇರಿನ್ಯಾವುದೇ ಆಗಿರಲಿ ಎಲ್ಲವೂ ಮುಖ್ಯಮಂತ್ರಿಗಳು, ಹೈಕಮಾಂಡ್'ಗೆ ಗೊತ್ತಿರುತ್ತದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.