ರಾಜಕೀಯ

ಹೈಕಮಾಂಡ್ ನಿರ್ಣಯಕ್ಕೆ ಒಪ್ಪಬೇಕು: ಖರ್ಗೆ ಭೇಟಿ ಬಳಿಕ ಸಿದ್ದರಾಮಯ್ಯ ಪ್ರತಿಕ್ರಿಯೆ; ಡಿಕೆಶಿ ಆಪ್ತರ ನಡೆಗೆ CM ತೀವ್ರ ಅಸಮಾಧಾನ

ಹೈಕಮಾಂಡ್‌ ಯಾವಾಗ ಕರೆಯುತ್ತೋ ಆಗ ನಾನು ದೆಹಲಿಗೆ ಹೋಗುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಇದೇ ವೇಳೆ ತಿಳಿಸಿದ್ದಾರೆ.

ಹೈಕಮಾಂಡ್ ನಿರ್ಣಯಕ್ಕೆ ಒಪ್ಪಬೇಕು: ಖರ್ಗೆ ಭೇಟಿ ಬಳಿಕ ಸಿದ್ದರಾಮಯ್ಯ ಪ್ರತಿಕ್ರಿಯೆ; ಡಿಕೆಶಿ ಆಪ್ತರ ನಡೆಗೆ CM ತೀವ್ರ ಅಸಮಾಧಾನ
ಸಿದ್ದರಾಮಯ್ಯ- ಮಲ್ಲಿಕಾರ್ಜುನ ಖರ್ಗೆ — online desk
Published On :

ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಸ್ತಾಂತರ ವಿಷಯ ತೀವ್ರವಾಗಿ ಚರ್ಚೆಯಾಗುತ್ತಿರುವ ನಡುವೆ ಸಿಎಂ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಇಂದು ಸಂಜೆ ಖರ್ಗೆ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ, ರಾಜ್ಯ ರಾಜಕೀಯದ ಕುರಿತು ಸುದೀರ್ಘ ಚರ್ಚೆ ನಡೆಸಿದರು. ಖರ್ಗೆ ನಿವಾಸದಿಂದ ಹೊರಬಂದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ, ಕಾಂಗ್ರೆಸ್ ಹೈಕಮಾಂಡ್ ನಿರ್ಣಯಕ್ಕೆ ನಾನು ಬದ್ಧ, ಹೈಕಮಾಂಡ್ ನಿರ್ಣಯವನ್ನ ನಾನೂ ಒಪ್ಪಬೇಕು, ಡಿಕೆ ಶಿವಕುಮಾರ್ ಸಹ ಒಪ್ಪಬೇಕು ಎಂದು ಸ್ಪಷ್ಟಪಡಿಸಿದ್ದಾರೆ.

ಇದು ಕೇವಲ ಸೌಹಾರ್ದಯುತ ಭೇಟಿ ಅಷ್ಟೇ ನಾಯಕತ್ವ ಬದಲಾವಣೆ ಬರೀ ಊಹಾಪೋಹ. ಮಲ್ಲಿಕಾರ್ಜುನ ಖರ್ಗೆಯವರ ಜೊತೆ ಪಕ್ಷ ಸಂಘಟನೆ ಬಗ್ಗೆ ಮಾತಾಡಿದೆ. ಮುಂದಿನ ಚುನಾವಣೆ ತಯಾರಿ ಬಗ್ಗೆ ಚರ್ಚೆಯೂ ನಡೆಯಿತು. ನಾಯಕತ್ವ ಬದಲಾವಣೆ ಊಹಾಪೋಹ, ಈ ಊಹಾಪೋಹಗಳನ್ನು ನೀವೇ ಸೃಷ್ಟಿಸಿದ್ದು ಎಂದು ಸಿಎಂ ಮಾಧ್ಯಮಗಳಿಗೆ ಹೇಳಿದರು.

ಹೈಕಮಾಂಡ್‌ ಯಾವಾಗ ಕರೆಯುತ್ತೋ ಆಗ ನಾನು ದೆಹಲಿಗೆ ಹೋಗುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಇದೇ ವೇಳೆ ತಿಳಿಸಿದ್ದಾರೆ.

ಡಿಕೆಶಿ ಆಪ್ತರ ನಡೆಗೆ ಸಿಎಂ ಅಸಮಾಧಾನ

ಖರ್ಗೆ ಭೇಟಿ ವೇಳೆ ಡಿ.ಕೆ. ಶಿವಕುಮಾರ್ ಆಪ್ತರ ನಡೆ ವಿರುದ್ದ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಶಿವಕುಮಾರ್ ಆಪ್ತರು ದೆಹಲಿ ಪೆರೇಡ್ ನಡೆಸುತ್ತಿರುವುದನ್ನು ಪ್ರಸ್ತಾಪಿಸಿರುವ ಸಿಎಂ ಸಿದ್ದರಾಮಯ್ಯ, ಸಿಎಂ ಬದಲಾವಣೆ ಆಗಬೇಕೆಂದು ಕೆಲ ಶಾಸಕರು ಮಾತಾಡಿದ್ದಾರಂತೆ. ಅದಕ್ಕಾಗಿಯೇ ದೆಹಲಿಗೆ ಹೋಗಿದ್ದೇವೆ ಎಂದು ಹೇಳಿದ್ದಾರೆ. ಇದರಿಂದ ಸಾಕಷ್ಟು ಗೊಂದಲ ಆಗಿದೆ ಅಂತ ಖರ್ಗೆ ಎದುರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.