ರಾಜಕೀಯ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ; ಮುಂದೇನು?

ಈಗಾಗಲೇ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಸದ್ಯ ಬೆಂಗಳೂರಿನಿಂದ ಹೊರಟ ಅವರ ಕಾರಿನಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಹ ಏರ್​ಪೋರ್ಟ್​ಗೆ ತೆರಳಿರುವುದು ಕುತೂಹಲಕ್ಕೆ ಕಾರಣವಾಗಿದೆ.

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ; ಮುಂದೇನು?
ಸಿಎಂ ಸಿದ್ದರಾಮಯ್ಯ,ಡಿಸಿಎಂ ಡಿಕೆ ಶಿವಕುಮಾರ್ ಸಾಂದರ್ಭಿಕ ಚಿತ್ರ
Published On :

ನವದೆಹಲಿ: ರಾಜ್ಯ ಕಾಂಗ್ರೆಸ್ ನಲ್ಲಿನ ಸಿಎಂ ಗದ್ದುಗೆ ಗುದ್ದಾಟ ಇದೀಗ ಹೈಕಮಾಂಡ್ ಅಂಗಳ ತಲುಪಿದ್ದು, ಎಲ್ಲರ ಚಿತ್ತ ಅತ್ತ ನೆಟ್ಟಿದೆ.

ಬೆಂಗಳೂರಿನಲ್ಲಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದೀಗ ದೆಹಲಿಗೆ ಹೊರಟಿದ್ದಾರೆ. ರಾಜ್ಯ ಕಾಂಗ್ರೆಸ್​​ ಬಿಕ್ಕಟ್ಟಿನ ಬಗ್ಗೆ ಅವರು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಜೊತೆಗೆ ಇಂದು ಚರ್ಚೆ ನಡೆಸುವ ನಿರೀಕ್ಷೆ ಇದೆ.

ಈಗಾಗಲೇ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಸದ್ಯ ಬೆಂಗಳೂರಿನಿಂದ ಹೊರಟ ಅವರ ಕಾರಿನಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಹ ಏರ್​ಪೋರ್ಟ್​ಗೆ ತೆರಳಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಈ ಮಧ್ಯೆ ಡೆಡ್ ಲೈನ್ ಹತ್ತಿರವಾಗುತ್ತಿರುವಂತೆಯೇ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಬಣದ ಶಾಸಕರ ಒತ್ತಡ ಹೆಚ್ಚಾಗುತ್ತಿದೆ. ಹೈಕಮಾಂಡ್ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಹುದ್ದೆಗೆ 2.5 ವರ್ಷಗಳ ಕಾಲ ಕಾಯುವಂತೆ ಮನವೊಲಿಸಲು ಸಾಧ್ಯವಾಗಿರುವುದಾರೆ ಮಾತು ಕೊಟ್ಟಿದ್ದ ಸಿದ್ದರಾಮಯ್ಯ ಅವರನ್ನು ಮನವೊಲಿಸಲು ಏಕೆ ಹೆಣಗಾಡುತ್ತಿದೆ? ಎಂದು ಡಿಕೆ ಶಿವಕುಮಾರ್ ಬಣದ ಕೆಲ ಶಾಸಕರು ಕೇಳುತ್ತಿದ್ದಾರೆ.

ಒಟ್ಟಾರೇ, 2.5 ವರ್ಷಗಳ ಒಪ್ಪಂದ ಕುರಿತು ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆಯೇ ಅಥವಾ ಕ್ಷೀಪ್ರ ರಾಜಕೀಯ ಬೆಳವಣಿಗೆಯಾಗಲಿದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.