ಕುರ್ಚಿ ಕದನ: ಡಿ.ಕೆ ಶಿವಕುಮಾರ್ CM ಆಗುವುದು 200 ಪರ್ಸೆಂಟ್ ಖಚಿತ; ದೆಹಲಿಯಿಂದ ವಾಪಾಸಾದ ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆ
ಎಲ್ಲ ಸಿಹಿ ಸುದ್ದಿಯೇ ಆಗುತ್ತದೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ. ಈ ವಿಚಾರವು ನಾಲ್ಕೈದು ಜನ ನಾಯಕರ ನಡುವಿನ ಖಾಸಗಿ ವಿಷಯವಾಗಿದ್ದು, ಹೈಕಮಾಂಡ್‌ನ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ.

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವ ಕುರಿತು ತಮಗೆ 200 ಪರ್ಸೆಂಟ್ ಭರವಸೆ ಇದೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗಬೇಕು ಎಂಬ ತಮ್ಮ ಒತ್ತಾಸೆಗೆ ನಾನು ಯಾವತ್ತೂ ಬದ್ಧರಾಗಿದ್ದೇನೆ ಎಂದು ಪುನರುಚ್ಚರಿಸಿದರು.
ನವದೆಹಲಿಯಲ್ಲಿ ಹೈಕಮಾಂಡ್ ಭೇಟಿ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಎಲ್ಲ ಸಿಹಿ ಸುದ್ದಿಯೇ ಆಗುತ್ತದೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ. ಈ ವಿಚಾರವು ನಾಲ್ಕೈದು ಜನ ನಾಯಕರ ನಡುವಿನ ಖಾಸಗಿ ವಿಷಯವಾಗಿದ್ದು, ಹೈಕಮಾಂಡ್‌ನ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ ಎಂದು ಸ್ಪಷ್ಟಪಡಿಸಿದರು.
ಬಿಕೆ ಹರಿಪ್ರಸಾದ್ ಹಾಗೂ ಪ್ರಿಯಾಂಕ್ ಖರ್ಗೆ ಅವರು ರಾಹುಲ್ ಗಾಂಧಿಯನ್ನು ಭೇಟಿ ಮಾಡಿ ಕರ್ನಾಟಕ ಕಾಂಗ್ರೆಸ್ನಲ್ಲಿ ನಡೆಯತ್ತಿರುವ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ತಮ್ಮ ನಾಯಕನನ್ನು ಸಿಎಂ ಮಾಡಬೇಕೆಂದು ಡಿಕೆ ಶಿವಕುಮಾರ್ ಬಣದ ಶಾಸಕರು ದೆಹಲಿ ಪರೇಡ್ ನಡೆಸಿ ಇದೀಗ ವಾಪಸ್ ಬೆಂಗಳೂರಿಗೆ ಆಗಮಿಸಿದ್ದಾರೆ.
ನಾಲ್ಕೈದು ಜನರ ಮಧ್ಯೆ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ಆಗಿದೆ. ಈಗಲೂ ಅವರೆ ಕುಳಿತು ಈ ಬಗ್ಗೆ ನಿರ್ಧಾರ ತೆಗೆದುಕೊಳ್ತಾರೆ ಹೊಸ ಬಾಂಬ್ ಸಿಡಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನದ ಗೊಂದಲವನ್ನು ಆದಷ್ಟು ಬೇಗ ಕೊನೆಗೊಳಿಸುವಂತೆ ಕೆಲವು ಕಾಂಗ್ರೆಸ್ ಶಾಸಕರು ಹೈಕಮಾಂಡ್ ಅನ್ನು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



