CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ ಜಾರ್ಜ್ ಸ್ಪಷ್ಟನೆ
ಸರ್ಕಾರ ರಚನೆಯ ಸಮಯದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷ (ಸಿಎಲ್‌ಪಿ) ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ಸರ್ವಾನುಮತದಿಂದ ಆಯ್ಕೆ ಮಾಡಿತ್ತು. ಯಾವುದೇ ಷರತ್ತನ್ನೂ ವಿಧಿಸಲಾಗಿರಲಿಲ್ಲ.

ಹೊಸಪೇಟೆ: ಸರ್ಕಾರ ರಚನೆಯ ಸಮಯದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷ (ಸಿಎಲ್‌ಪಿ) ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ಸರ್ವಾನುಮತದಿಂದ ಆಯ್ಕೆ ಮಾಡಿತ್ತು. ಆ ಹುದ್ದೆಗೆ ಯಾವುದೇ ಕಾಲಮಿತಿಯ ಷರತ್ತನ್ನು ವಿಧಿಸಲಾಗಿರಲಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ರಚನೆಯ ಸಮಯದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷ (ಸಿಎಲ್‌ಪಿ) ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ಸರ್ವಾನುಮತದಿಂದ ಆಯ್ಕೆ ಮಾಡಿತ್ತು. ಯಾವುದೇ ಷರತ್ತನ್ನೂ ವಿಧಿಸಲಾಗಿರಲಿಲ್ಲ. ಹೀಗಾಗಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಸಿಎಲ್‌ಪಿ ಸಭೆಯಲ್ಲಿ, ನಾವೆಲ್ಲರೂ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿದ್ದೇವೆಂದು ಹೇಳಿದರು.
ಅಧಿಕಾರ ಒಪ್ಪಂದ ಕುರಿತ ಊಹಾಪೋಹಗಳಿಗೆ ಉತ್ತರಿಸಿರುವ ಅವರು, ಸಿಎಲ್‌ಪಿ ಸಭೆಯ ಹೊರಗೆ ಚರ್ಚಿಸಲಾದ ಅಂತಹ ಯಾವುದೇ ಒಪ್ಪಂದಗಳ ಬಗ್ಗೆ ನನಗೆ ತಿಳಿದಿಲ್ಲ. ಹಿರಿಯ ನಾಯಕರು ಇದರ ಬಗ್ಗೆ ಮಾತನಾಡಿದ್ದರೆ, ಅವರು ಸ್ಪಷ್ಟಪಡಿಸುತ್ತಾರೆ. ನಮಗೆ ತಿಳಿದಂತೆ ಸಿಎಂ ಮತ್ತು ಉಪ ಮುಖ್ಯಮಂತ್ರಿ ಇಬ್ಬರಲ್ಲೂ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಈ ಮಾತನ್ನು ಅವರೂ ಹೇಳಿದ್ದಾರೆಂದು ಹೇಳಿದರು.
ಇದೇ ವೇಳೆ ಬಿಜೆಪಿಯ ಆರೋಪಗಳು ಆಧಾರರಹಿತವೆಂದು ಕರೆದ ಅವರು, ನಮ್ಮಲ್ಲಿ ಯಾವುದೇ ಕಾಂಗ್ರೆಸ್ ಶಾಸಕರು ಮಾರಾಟಕ್ಕಿಲ್ಲ. ಬಿಜೆಪಿಯ ಏಕೈಕ ಕೆಲಸ ವದಂತಿಗಳನ್ನು ಹರಡುವುದು ಮತ್ತು ತೊಂದರೆ ಉಂಟುಮಾಡುವುದು ಎಂದು ಟೀಕಿಸಿದರು.
ಸೋನಿಯಾ ಗಾಂಧಿ ಅವರು ಪಕ್ಷದ ಚುಕ್ಕಾಣಿ ಹಿಡಿಯದೆ ಇದ್ದಿದ್ದರೆ ಬಿಜೆಪಿಯವರು ಹೇಳುತ್ತಿರುವಂತೆ ದೇಶ ಎಂದೋ ಕಾಂಗ್ರೆಸ್ ಮುಕ್ತ ಆಗಿಬಿಟ್ಟಿರುತ್ತಿತ್ತು ಎಂದು ಕೆ.ಜೆ.ಜಾರ್ಜ್ ಅವರು ಇದಕ್ಕೂ ಮೊದಲು ನಡೆದ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



