ಸರ್ಕಾರ ಕುಸಿದಿದೆ, ಕಾಂಗ್ರೆಸ್ ಪಕ್ಷವು ಈಗಾಗಲೇ ಐಸಿಯುನಲ್ಲಿದೆ: ನಿಖಿಲ್ ಕುಮಾರಸ್ವಾಮಿ
ಕರ್ನಾಟಕದ ಜನರು ಕಾಂಗ್ರೆಸ್‌ಗೆ ಬಲವಾದ ಜನಾದೇಶವನ್ನು ನೀಡಿದರು ಕೂಡ ತಮ್ಮದೇ ಆದ ಮುಖ್ಯಮಂತ್ರಿಯನ್ನು ನಂಬಲು ಸಾಧ್ಯವಾಗದ ಪರಿಸ್ಥಿತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಬಂದು ನಿಂತಿದೆ.

ಬೆಂಗಳೂರು: ಶಾಸಕರು ವಿಶ್ವಾಸ ಕಳೆದುಕೊಂಡರೆ ಸಿಎಂ ವಿಫಲರಾಗಿದ್ದಾರೆ, ಸರ್ಕಾರ ಕುಸಿದಿದೆ ಮತ್ತು ಪಕ್ಷವು ಈಗಾಗಲೇ ಐಸಿಯುನಲ್ಲಿದೆ ಎಂದರ್ಥ ಎಂದು ಜೆಡಿಎಸ್ ರಾಜ್ಯ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಬುಧವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಜನರು ಕಾಂಗ್ರೆಸ್‌ಗೆ ಬಲವಾದ ಜನಾದೇಶವನ್ನು ನೀಡಿದರು ಕೂಡ ತಮ್ಮದೇ ಆದ ಮುಖ್ಯಮಂತ್ರಿಯನ್ನು ನಂಬಲು ಸಾಧ್ಯವಾಗದ ಪರಿಸ್ಥಿತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಬಂದು ನಿಂತಿದೆ. ಮುಖ್ಯಮಂತ್ರಿ ಬದಲಾವಣೆಯ ಮಾತುಕತೆ ಪ್ರೀತಿಯಿಂದ ನಡೆಯುವುದಿಲ್ಲ; ಶಾಸಕರು ವಿಶ್ವಾಸ ಕಳೆದುಕೊಂಡಾಗ ಅದು ನೆಡೆಯುತ್ತದೆ. ಶಾಸಕರು ವಿಶ್ವಾಸ ಕಳೆದುಕೊಂಡರೆ, ಸಿಎಂ ವಿಫಲರಾಗಿದ್ದಾರೆ, ಸರ್ಕಾರ ಕುಸಿದಿದೆ ಮತ್ತು ಪಕ್ಷವು ಈಗಾಗಲೇ ಐಸಿಯುನಲ್ಲಿದೆ ಎಂದರ್ಥ ಎಂದು ಹೇಳಿದರು.
ತಮ್ಮದೇ ಮುಖ್ಯಮಂತ್ರಿಯನ್ನು ಬದಲಾಯಿಸಲು ಕಾಂಗ್ರೆಸ್ ಶಾಸಕರು ದೆಹಲಿಯ ಹೋಟೆಲ್‌ಗಳಲ್ಲಿ ಸಾಲುಗಟ್ಟಿ ನಿಂತಿರುವುದು ಯಾವುದೇ ಸರ್ಕಾರ ಪಡೆಯಬಹುದಾದ ದೊಡ್ಡ ವೈಫಲ್ಯದ ಪ್ರಮಾಣ ಪತ್ರವಾಗಿದೆ. ಮುಖ್ಯಮಂತ್ರಿ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ, ಸರ್ಕಾರ ದಿಕ್ಕನ್ನು ಕಳೆದುಕೊಂಡಿದೆ ಮತ್ತು ಕರ್ನಾಟಕವು 2.5 ವರ್ಷಗಳನ್ನು ಕಳೆದುಕೊಂಡಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



