ಕಾಂಗ್ರೆಸ್ ಸರ್ಕಾರ ಪತನಗೊಂಡರೆ, ಡಿಕೆಶಿಗೆ ಬೆಂಬಲ ಕೊಡಲು BJP ಸಿದ್ಧ: ಡಿ.ವಿ ಸದಾನಂದ ಗೌಡ
ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಪಕ್ಷದಿಂದ ಹೊರಬಂದು ಬಿಜೆಪಿಗೆ ಬಾಹ್ಯ ಬೆಂಬಲ ಕೊಟ್ಟರೆ ಒಪ್ಪುತ್ತೇವೆ. ಆದರೆ, ಅವರನ್ನೇ ಮುಖ್ಯಮಂತ್ರಿ ಮಾಡುತ್ತೇವೆ ಎಂದರೆ ಅದು ಕೇಂದ್ರದ ನಿರ್ಧಾರಕ್ಕೆ ಬಿಟ್ಟ ವಿಚಾರ.

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಪತನಗೊಂಡಿದ್ದೇ ಆದರೆ, ಡಿಕೆ.ಶಿವಕುಮಾರ್ ಅವರು ಬಿಜೆಪಿಯನ್ನು ಸಂಪರ್ಕಿಸಿದರೆ ಬೆಂಬಲ ನೀಡಲು ಸಿದ್ಧರಿದ್ದೇವೆಂದು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರು ಬುಧವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಪಕ್ಷದಿಂದ ಹೊರಬಂದು ಬಿಜೆಪಿಗೆ ಬಾಹ್ಯ ಬೆಂಬಲ ಕೊಟ್ಟರೆ ಒಪ್ಪುತ್ತೇವೆ. ಆದರೆ, ಅವರನ್ನೇ ಮುಖ್ಯಮಂತ್ರಿ ಮಾಡುತ್ತೇವೆ ಎಂದರೆ ಅದು ಕೇಂದ್ರದ ನಿರ್ಧಾರಕ್ಕೆ ಬಿಟ್ಟ ವಿಚಾರ. ಅಲ್ಲದೇ ಕೇಂದ್ರದ ವರಿಷ್ಠರು ಅವರನ್ನೇ ಮುಖ್ಯಮಂತ್ರಿ ಮಾಡಲು ಸೂಚಿಸಿದರೆ ಬೆಂಬಲ ಕೊಡುತ್ತೇವೆಂದು ಹೇಳಿದರು.
ಶಿಡ್ಲಘಟ್ಟದಲ್ಲಿ ಸೋಮವಾರ ಸಿದ್ದರಾಮಯ್ಯ ಅವರು 2,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಕುರಿತು ಪ್ರತಿಕ್ರಿಯಿಸಿ, ಇವು ಕೇವಲ ಘೋಷಣೆಗಳಷ್ಟೇ. ಸರ್ಕಾರದ ಬಳಿ ಹಣವಿದ್ದರೆ ಬೆಂಗಳೂರಿನ ಗುಂಡಿಗಳನ್ನು ಮುಚ್ಚುತ್ತಿತ್ತು ಎಂದು ವ್ಯಂಗ್ಯವಾಡಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಆಡಳಿತ ಸತ್ತು ಹೋಗಿದೆ. ರಾಜ್ಯದ ಜನರು ಕಂಗಾಲಾಗಿದ್ದಾರೆ. ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯುವುದು ಸೇರಿದಂತೆ ರೈತರ ಹಲವು ಸಮಸ್ಯೆಗಳಿವೆ. ಅವುಗಳ ಪರಿಹಾರಕ್ಕೆ ಸರ್ಕಾರ ಮುಂದಾಗುತ್ತಿಲ್ಲ. ಆದ್ದರಿಂದ ಈ ಸರ್ಕಾರ ಇರಬಾರದು ಎಂದು ತಿಳಿಸಿದರು.

ಶಾಸಕರ ಖರೀದಿ ಹಾಗೂ 'ಕುದುರೆ ವ್ಯಾಪಾರ' ಬಿಜೆಪಿ ಸಂಸ್ಕೃತಿ; CM ಮಾತು ನಮಗೆ ವೇದ ವಾಕ್ಯ: ಡಿಸಿಎಂ ಡಿ.ಕೆ ಶಿವಕುಮಾರ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


