ರಾಜಕೀಯ

ಒಕ್ಕಲಿಗರ 2ನೇ ಮಠ ಹೇಗಾಯಿತು? ಸ್ವಾಮೀಜಿ ಬೀದಿಗಿಳಿಯದಿದ್ದರೆ ದೇವೇಗೌಡರು ಸಿಎಂ ಆಗುತ್ತಿದ್ದರೇ? ಕುಮಾರಸ್ವಾಮಿ ವಿರುದ್ಧ ಡಿಕೆಶಿ ಕಿಡಿ!

ಪಾಪ, ಕುಮಾರಣ್ಣನಿಗೆ ಒಕ್ಕಲಿಗರ ಎರಡನೇ ಮಠ ಹೇಗಾಯಿತು ಎಂದು ಗೊತ್ತಿಲ್ಲವೇ? ಅದನ್ನು ಕಟ್ಟಿದವರು ಯಾರು? ಒಕ್ಕಲಿಗ ಮಠದ ಹಿರಿಯ ಸ್ವಾಮೀಜಿ ಇಲ್ಲದಿದ್ದರೆ ಆಗುತ್ತಿದ್ದರೇ?

ಒಕ್ಕಲಿಗರ 2ನೇ ಮಠ ಹೇಗಾಯಿತು? ಸ್ವಾಮೀಜಿ ಬೀದಿಗಿಳಿಯದಿದ್ದರೆ ದೇವೇಗೌಡರು ಸಿಎಂ ಆಗುತ್ತಿದ್ದರೇ? ಕುಮಾರಸ್ವಾಮಿ ವಿರುದ್ಧ ಡಿಕೆಶಿ ಕಿಡಿ!
ಕುಮಾರಸ್ವಾಮಿ, ಡಿಕೆ ಶಿವಕುಮಾರ್
Published On :

ಬೆಂಗಳೂರು: ರಾಜಕೀಯದಲ್ಲಿ ಸ್ವಾಮೀಜಿಗಳ ಮಧ್ಯಪ್ರವೇಶ ವಿಚಾರ ಆಗಾಗ್ಗೆ ಚರ್ಚೆಯಾಗುತ್ತಲೇ ಇರುತ್ತದೆ.

ಕಳೆದೊಂದು ವಾರದಿಂದ ರಾಜ್ಯದಲ್ಲಿ ನಡೆಯುತ್ತಿದ್ದ ಸಿಎಂ ಕುರ್ಚಿ ಗುದ್ದಾಟದ ನಡುವೆ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಟ್ಟುಕೊಡಬೇಕು ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ, ನಂಜಾವಧೂತ ಮತ್ತಿತರರು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು.

ಇದಕ್ಕೆ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಕುರಿತ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಪಾಪ, ಕುಮಾರಣ್ಣನಿಗೆ ಒಕ್ಕಲಿಗರ ಎರಡನೇ ಮಠ ಹೇಗಾಯಿತು ಎಂದು ಗೊತ್ತಿಲ್ಲವೇ? ಅದನ್ನು ಕಟ್ಟಿದವರು ಯಾರು? ಒಕ್ಕಲಿಗ ಮಠದ ಹಿರಿಯ ಸ್ವಾಮೀಜಿ ಇಲ್ಲದಿದ್ದರೆ ಆಗುತ್ತಿದ್ದರೇ? ಎಂದು ಪ್ರಶ್ನಿಸಿದರು.

ದೇವೇಗೌಡರ ಪರ ಸ್ವಾಮೀಜಿಗಳು ಬೀದಿಗಳಿದಿರಲಿಲ್ಲವೇ? ಸದಾನಂದ ಗೌಡರಿಗೆ ತೊಂದರೆ ಆದಾಗ ಸ್ವಾಮೀಜಿಗಳು ಸುಮ್ಮನೆ ಕೂತಿದ್ದರಾ? ಎಂದು ಪ್ರಶ್ನಿಸಿದ ಡಿಕೆ ಶಿವಕುಮಾರ್, ಕೆಲವು ಸಂದರ್ಭದಲ್ಲಿ ಸ್ವಾಮೀಜಿಗಳು ಮಾತನಾಡುತ್ತಾರೆ. ಅದರಲ್ಲಿ ತಪ್ಪೇನಿದೆ? ಬೇರೆ ಸಂದರ್ಭದಲ್ಲಿ ಸ್ವಾಮೀಜಿಗಳು ಮಾತನಾಡಿದಾಗ ನಾನು ಬೇಸರ ಮಾಡಿಕೊಂಡಿದ್ದೇನಾ? ಎಂದು ಕಿಡಿಕಾರಿದರು.

ಬಾಳೆಹೊನ್ನೂರು, ಶ್ರೀಶೈಲ ಸ್ವಾಮೀಜಿ ಸೇರಿದಂತೆ ಸಾಕಷ್ಟು ಸ್ವಾಮೀಜಿಗಳು ನನ್ನ ಪರ ಮಾತನಾಡಿದ್ದಾರೆ. ಅದನ್ನು ತಪ್ಪು ಎಂದು ಹೇಳಲು ಸಾಧ್ಯವೇ ಎಂದು ಪ್ರಶ್ನಿಸಿದರು.

ನಾನು ಸ್ವಾಮೀಜಿ ಬೆಂಬಲ ಕೇಳಿಲ್ಲ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ, ನಾನು ಕೇಳಿದ್ದೇನಾ? ನಾನು ಕೂಡಾ ಯಾರ ಬೆಂಬಲ ಕೇಳಿಲ್ಲ. ಅವರು ಪ್ರೀತಿಯಿಂದ ಮಾತನಾಡಿದರೆ ಬೇಡ ಎನ್ನಲು ಸಾಧ್ಯವೇ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.