ರಾಜಕೀಯ

ಶಿಕ್ಷಕರನ್ನು ಸಮೀಕ್ಷೆಗೆ ಕಳುಹಿಸಿದರೆ ಮಕ್ಕಳಿಗೆ ಕಲಿಸುವವರು ಯಾರು?: ಸರ್ಕಾರಕ್ಕೆ ಆರ್.ಅಶೋಕ್ ಪ್ರಶ್ನೆ

ಸರ್ಕಾರವು ದಸರಾ ಜಾತಿ ಗಣತಿಗಾಗಿ ಶಾಲೆಗಳ ರಜೆಯನ್ನು ವಿಸ್ತರಿಸಿದೆ. ಇದರಿಂದಾಗಿ ಶಿಕ್ಷಕರು ಗೊಂದಲಮದಿಂದಿರುವ ಜಾತಿ ಗಣತಿಯನ್ನು ನಿಭಾಯಿಸುವಂತಾಗಿದೆ. ಆದರೆ, ಜನರ ಬಳಿ ಏನು ಕೇಳಬೇಕೆಂಬುದೇ ಗಣತಿದಾರರಿಗೆ ತಿಳಿಯುತ್ತಿಲ್ಲ.

ಶಿಕ್ಷಕರನ್ನು ಸಮೀಕ್ಷೆಗೆ ಕಳುಹಿಸಿದರೆ ಮಕ್ಕಳಿಗೆ ಕಲಿಸುವವರು ಯಾರು?: ಸರ್ಕಾರಕ್ಕೆ ಆರ್.ಅಶೋಕ್ ಪ್ರಶ್ನೆ
ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ
Published On :

ಬೆಂಗಳೂರು: ದಸರಾ ಹಬ್ಬದ ರಜೆಯನ್ನು ವಿಸ್ತರಿಸಿ, ಶಾಲಾ ಶಿಕ್ಷಕರನ್ನು ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕರ್ತವ್ಯಕ್ಕೆ ನಿಯೋಜಿಸಿ ರಾಜ್ಯ ಸರ್ಕಾರದ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಜಾತಿಗಣತಿಗೆ ಸರ್ಕಾರ ಯಾವುದೇ ರೀತಿಯ ಸಿದ್ಧತೆ ಮಾಡಿಕೊಂಡಿಲ್ಲ. ಸ್ಪಷ್ಟವಾದ ಉದ್ದೇಶ ಕೂಡ ಇಲ್ಲ. ಅದು ಕೂಡ ರಾಹುಲ್ ಗಾಂಧಿಯಂತೆಯೇ ಎಂದು ವ್ಯಂಗ್ಯವಾಡಿದ್ದಾರೆ.

ಸರ್ಕಾರವು ದಸರಾ ಜಾತಿ ಗಣತಿಗಾಗಿ ಶಾಲೆಗಳ ರಜೆಯನ್ನು ವಿಸ್ತರಿಸಿದೆ. ಇದರಿಂದಾಗಿ ಶಿಕ್ಷಕರು ಗೊಂದಲಮದಿಂದಿರುವ ಜಾತಿ ಗಣತಿಯನ್ನು ನಿಭಾಯಿಸುವಂತಾಗಿದೆ. ಆದರೆ, ಜನರ ಬಳಿ ಏನು ಕೇಳಬೇಕೆಂಬುದೇ ಗಣತಿದಾರರಿಗೆ ತಿಳಿಯುತ್ತಿಲ್ಲ. ಶಿಕ್ಷಕರನ್ನು ತರಗತಿಗಳಿಂದ ಹೊರಗೆಳೆದು ವಿದ್ಯಾರ್ಥಿಗಳ ಬಾಳಿನಲ್ಲಿ ಕತ್ತಲೆ ಆವರಿಸುವಂತೆ ಮಾಡಲಾಗುತ್ತಿದೆ. ಕಾಂಗ್ರೆಸ್ಸಿನ ವಿಭಜನೆಯ ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ಇವುಗಳನ್ನೆಲ್ಲ ಮಾಡಲಾಗುತ್ತಿದೆ ಎಂದು ಟೀಕಿಸಿದ್ದಾರೆ.

ಇದು ಸಮೀಕ್ಷೆ ಅಲ್ಲ, ಇದು ದೋಷಗಳಿಂದ ಕೂಡಿದ ಸರ್ಕಸ್. ಅಧಿಕಾರಕ್ಕೆ ಅಂಟಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ತನೆಗೆ ಕರ್ನಾಟಕದ ಮಕ್ಕಳು ಬೆಲೆ ತೆರುವಂತಾಗಿದೆ ಎಂದು ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.