ಸಚಿವ ಸಂಪುಟ ಪುನಾರಚನೆ ವಿಚಾರ ನನಗೆ ಗೊತ್ತಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್; Video
ಈ ವಿಚಾರದಲ್ಲಿ ನಾನು ಮಾತನಾಡುವುದಿಲ್ಲ. ನನ್ನ ಜೊತೆ ಈ ವಿಚಾರ ಚರ್ಚೆ ಮಾಡಿದರೆ ನಾನು ನನ್ನ ಸಲಹೆ ನೀಡುತ್ತೇನೆ. ಈ ವಿಚಾರವಾಗಿ ಅನಗತ್ಯ ಚರ್ಚೆ ಮಾಡಿ ಗೊಂದಲ ಸೃಷ್ಟಿಸಬೇಡಿ ಎಂದು ನಿಮ್ಮಲ್ಲಿ (ಮಾಧ್ಯಮ) ಮನವಿ ಮಾಡುತ್ತೇನೆ” ಎಂದು ತಿಳಿಸಿದರು.

ಬೆಂಗಳೂರು: ಸಚಿವ ಸಂಪುಟದಲ್ಲಿ ಬದಲಾವಣೆ ವಿಚಾರವಾಗಿ ನನಗೆ ಯಾವುದೇ ಮಾಹಿತಿ ಇಲ್ಲ. ಇದು ಪಕ್ಷ ಹಾಗೂ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಅವರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ಈ ವಿಚಾರದಲ್ಲಿ ನಾನು ಮಾತನಾಡುವುದಿಲ್ಲ. ನನ್ನ ಜೊತೆ ಈ ವಿಚಾರ ಚರ್ಚೆ ಮಾಡಿದರೆ ನಾನು ನನ್ನ ಸಲಹೆ ನೀಡುತ್ತೇನೆ. ಈ ವಿಚಾರವಾಗಿ ಅನಗತ್ಯ ಚರ್ಚೆ ಮಾಡಿ ಗೊಂದಲ ಸೃಷ್ಟಿಸಬೇಡಿ ಎಂದು ನಿಮ್ಮಲ್ಲಿ (ಮಾಧ್ಯಮ) ಮನವಿ ಮಾಡುತ್ತೇನೆ” ಎಂದು ತಿಳಿಸಿದರು.
ಮುಖ್ಯಮಂತ್ರಿಗಳು ಔತಣಕೂಟ ಆಯೋಜಿಸಿರುವ ಬಗ್ಗೆ ಕೇಳಿದಾಗ, “ಇದರಲ್ಲಿ ತಪ್ಪೇನಿದೆ? ಒಟ್ಟಿಗೆ ಸೇರಿ ಊಟ ಮಾಡಿ, ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ಮಾಡುವುದು ಸಹಜ” ಎಂದು ತಿಳಿಸಿದರು.
ಬಿಗ್ ಬಾಸ್ ವಿಚಾರವಾಗಿ ಕೇಳಿದಾಗ, “ಬುಧವಾರ ರಾತ್ರಿ ಡಿಸಿಗೆ ಕರೆ ಮಾಡಿ ಜಾಲಿವುಡ್ ಸ್ಟುಡಿಯೋದವರು ತಮ್ಮ ತಪ್ಪನ್ನು ಸರಿಪಡಿಸಿಕೊಳ್ಳಲು ಒಂದು ಅವಕಾಶ ಕಲ್ಪಿಸಿ ಎಂದು ಸೂಚಿಸಿದ್ದೇನೆ. ನಮ್ಮ ಉದ್ಯಮ ಬೆಳೆಯಬೇಕು. ಇದು ಹೆಚ್ಚಿನ ಮಾಲಿನ್ಯ ಉಂಟು ಮಾಡಲು ದೊಡ್ಡ ಕಾರ್ಖಾನೆಯಲ್ಲ. ಸಣ್ಣಪುಟ್ಟ ನಿಯಮ ಉಲ್ಲಂಘನೆಯಾಗಿದ್ದರೆ ಸರಿಪಡಿಸಿಕೊಳ್ಳಿ, ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಾವಳಿಯನ್ನು ಪಾಲನೆ ಮಾಡಿ ಎಂದು ಸ್ಟುಡಿಯೋದವರಿಗೂ ಹೇಳಿ ಕಳುಹಿಸಿದ್ದೇನೆ” ಎಂದು ತಿಳಿಸಿದರು.

OC, CC ಇಲ್ಲದ ಕಟ್ಟಡಗಳಿಗೆ ವಿದ್ಯುತ್-ನೀರು ಸಂಪರ್ಕ: ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ; ಡಿ.ಕೆ ಶಿವಕುಮಾರ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


