'ಕರ್ನಾಟಕದ ಸಂಪನ್ಮೂಲಗಳನ್ನು ಹೈಕಮಾಂಡ್ಗೆ ಅರ್ಪಿಸಿದ ಕೀರ್ತಿ ಬಿಜೆಪಿಗೆ ಸಲ್ಲಬೇಕು, ಕಾಂಗ್ರೆಸ್ಗೆ ಅಲ್ಲ': ಪ್ರಿಯಾಂಕ್ ಖರ್ಗೆ
ಸಂಸದ ಬಿವೈ ರಾಘವೇಂದ್ರ ಅವರು ತಮ್ಮ ಪೂಜ್ಯ ತಂದೆಯವರ ಮಾತುಗಳನ್ನು ಒಮ್ಮೆ ಕಿವಿಗೊಟ್ಟು ಕೇಳಿಸಿಕೊಂಡು ನಂತರ ಮಾತನಾಡಿದರೆ ಉತ್ತಮ ಎಂದು ಬರೆದಿದ್ದಾರೆ.

ಬೆಂಗಳೂರು: ಬಿಹಾರ ಚುನಾವಣೆಗಾಗಿ ಕರ್ನಾಟಕದಲ್ಲಿ ಸಚಿವರು ಅಧಿಕಾರಿಗಳಿಂದ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪದ ಬಗ್ಗೆ ಬಿಜೆಪಿಯನ್ನು ಟೀಕಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯದ ಸಂಪನ್ಮೂಲಗಳನ್ನು 'ಹೈಕಮಾಂಡ್ಗೆ ತಿರುಗಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ' ಮತ್ತು 'ಕಾಂಗ್ರೆಸ್ಗೆ ಅಲ್ಲ' ಎಂದು ಮಂಗಳವಾರ ಹೇಳಿದ್ದಾರೆ.
'ಎಕ್ಸ್'ನಲ್ಲಿ ವಿಡಿಯೋ ಪೋಸ್ಟ್ ಹಂಚಿಕೊಂಡಿರುವ ಖರ್ಗೆ, 'ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನು ಯಡಿಯೂರಪ್ಪನವರು ಹಾಗೂ ದಿವಂಗತ ಅನಂತ್ ಕುಮಾರ್ ಅವರ ಸಂಭಾಷಣೆಯಲ್ಲಿ ಬಹಿರಂಗವಾಗಿದ್ದನ್ನು ಬಿಜೆಪಿ ನಾಯಕರು ಮರೆತಿದ್ದಾರೆಯೇ? ಮರೆತಿದ್ದರೆ, ನಾವು ಮತ್ತೊಮ್ಮೆ ನೆನಪಿಸುತ್ತಿದ್ದೇವೆ' ಎಂದಿದ್ದಾರೆ.
ಸಂಸದ ಬಿವೈ ರಾಘವೇಂದ್ರ ಅವರು ತಮ್ಮ ಪೂಜ್ಯ ತಂದೆಯವರ ಮಾತುಗಳನ್ನು ಒಮ್ಮೆ ಕಿವಿಗೊಟ್ಟು ಕೇಳಿಸಿಕೊಂಡು ನಂತರ ಮಾತನಾಡಿದರೆ ಉತ್ತಮ ಎಂದು ಬರೆದಿದ್ದಾರೆ.
ಬಿಜೆಪಿಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ₹2,500 ಕೊಡಬೇಕು ಎಂದಿದ್ದವರೂ ಬಿಜೆಪಿಯವರೇ, ಮಂತ್ರಿಗಿರಿಗೆ 60, 70 ಕೋಟಿ ಕೊಡಬೇಕು ಎಂದಿದ್ದವರೂ ಬಿಜೆಪಿಯವರೇ. ಬಿಜೆಪಿ ಹೈಕಮಾಂಡ್ ಹುದ್ದೆಗಳನ್ನು ಮಾರಾಟಕ್ಕಿಟ್ಟು ವ್ಯಾಪಾರಕ್ಕೆ ಕುಳಿತಿತ್ತು ಎನ್ನುವುದನ್ನು ಬಿಜೆಪಿಯವರೇ ಬಹಿರಂಗಪಡಿಸಿದ್ದರು ಎಂದಿದ್ದಾರೆ.
ಕರ್ನಾಟಕದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾಡಿದ ಕೀರ್ತಿ ಬಿಜೆಪಿಯದ್ದೇ ಹೊರತು ಕಾಂಗ್ರೆಸ್ಸಿನದ್ದಲ್ಲ ಎಂದು ಕಿಡಿಕಾರಿದ್ದಾರೆ.
ಸೋಮವಾರ ಕೇಂದ್ರ ಸರ್ಕಾರವನ್ನು ಟೀಕಿಸಿದ ಖರ್ಗೆ, ಪ್ರವಾಹ ಪರಿಹಾರ ನಿಧಿ ಹಂಚಿಕೆಯಲ್ಲಿ ರಾಜ್ಯಕ್ಕೆ ತಾರತಮ್ಯ ಮಾಡಿದ್ದಾರೆ ಎಂದು ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



