MLC elections: ಇನ್ನು 8-10 ದಿನದಲ್ಲಿ ಅಭ್ಯರ್ಥಿಗಳ ಆಯ್ಕೆ- ಡಿ.ಕೆ ಶಿವಕುಮಾರ್
ರಾಜ್ಯದ ಶಿಕ್ಷಕರು ಮತ್ತು ಪದವೀಧರ ಕ್ಷೇತ್ರಗಳಿಗೆ ಎಂಎಲ್‌ಸಿ ಚುನಾವಣೆ ಮುಂದಿನ ವರ್ಷ ನಡೆಯಲಿದೆ ಎಂದರು.

ಬೆಂಗಳೂರು: ಕಾಂಗ್ರೆಸ್ ಪಕ್ಷವು ಮುಂಬರುವ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆ ಸೇರಿದಂತೆ ವಿಧಾನ ಪರಿಷತ್ ಸದಸ್ಯ (MLC) ಚುನಾವಣೆಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿ ಕೆ ಶಿವಕುಮಾರ್, ರಾಜ್ಯದ ಶಿಕ್ಷಕರು ಮತ್ತು ಪದವೀಧರ ಕ್ಷೇತ್ರಗಳಿಗೆ ಎಂಎಲ್‌ಸಿ ಚುನಾವಣೆ ಮುಂದಿನ ವರ್ಷ ನಡೆಯಲಿದೆ ಎಂದರು.
ವಿಧಾನ ಪರಿಷತ್ ಸದಸ್ಯರ ಚುನಾವಣೆಗೆ ನಾವು ಸಿದ್ಧತೆ ಆರಂಭಿಸಿದ್ದೇವೆ. ಮುಂದಿನ 8-10 ದಿನಗಳಲ್ಲಿ, ನಾವು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುತ್ತೇವೆ. ಪಟ್ಟಿಯನ್ನು ಪಕ್ಷದ ಹೈಕಮಾಂಡ್‌ಗೆ ಅನುಮೋದನೆಗಾಗಿ ಕಳುಹಿಸುತ್ತೇವೆ ಎಂದು ಹೇಳಿದರು. ಇದಲ್ಲದೆ, ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತದಾರರ ನೋಂದಣಿಯನ್ನು ಪ್ರಾರಂಭಿಸಬೇಕು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



