ರಾಜಕೀಯ

ಸಿದ್ದರಾಮಯ್ಯನವರು ಪಕ್ಷ ಕಟ್ಟಿ ತೋರಿಸಲಿ ನೋಡೋಣ; ಕಾಂಗ್ರೆಸ್ ಅಧಿಕಾರದಲ್ಲಿರುತ್ತಿದ್ದರೆ LPGಯಂತಹ ಸಮಸ್ಯೆಗೆ ಏನು ಮಾಡುತ್ತಿತ್ತು?: HDK

ಕೇಂದ್ರ ಸರ್ಕಾರ ಜನರ ಸಂಕಷ್ಟಗಳಿಗೆ ಸ್ಪಂದಿಸಲು ನೋಡುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇತರ ದೇಶಗಳೊಂದಿಗೆ ಹೊಂದಿರುವ ಉತ್ತಮ ಸಂಬಂಧದ ಕಾರಣ ದೇಶದಲ್ಲಿ ಎದುರಾಗಲಿದ್ದ ದೊಡ್ಡ ಸಂಕಷ್ಟವನ್ನು ತಪ್ಪಿಸಲಾಗಿದೆ ಎಂದು ಹೇಳಿದರು.

ಸಿದ್ದರಾಮಯ್ಯನವರು ಪಕ್ಷ ಕಟ್ಟಿ ತೋರಿಸಲಿ ನೋಡೋಣ; ಕಾಂಗ್ರೆಸ್ ಅಧಿಕಾರದಲ್ಲಿರುತ್ತಿದ್ದರೆ LPGಯಂತಹ ಸಮಸ್ಯೆಗೆ ಏನು ಮಾಡುತ್ತಿತ್ತು?: HDK
ದಾವಣಗೆರೆಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಪ್ರಚಾರ
Published On :

ದಾವಣಗೆರೆ: ಜೆಡಿಎಸ್​​ ಬಗ್ಗೆ ಟೀಕಿಸುವ ಸಿಎಂ ಸಿದ್ದರಾಮಯ್ಯ ಅವರು ಪ್ರಾದೇಶಿಕ ಪಕ್ಷವೊಂದನ್ನು ಸ್ಥಾಪಿಸಿ ಚುನಾವಣೆಗೆ ಸ್ಫರ್ಧಿಸಲಿ. ಆಗ ಅವರು ಎಷ್ಟು ಕ್ಷೇತ್ರ ಗೆಲ್ಲುತ್ತಾರೆ ನೋಡೋಣ ಎಂದು ಕೇಂದ್ರ ಸಚಿವ ಹೆಚ್​​ ಡಿ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ನಮ್ಮ ಕುಟುಂಬದ ರಾಜಕೀಯ ಪ್ರವೇಶವು ಜನರ ಬೆಂಬಲದಿಂದ ಆದದ್ದು, ಆದರೆ ಸಿದ್ದರಾಮಯ್ಯರ ಮಗನ ರಾಜಕೀಯ ಪ್ರವೇಶವು ರಾಜ್ಯದ ಉದ್ದಾರಕ್ಕಲ್ಲ, ಬದಲಿಗೆ ವಸೂಲಿಗಾಗಿ ಎಂದು ಆರೋಪಿಸಿದ್ದಾರೆ. ಜೆಡಿಎಸ್ 40 ಸೀಟುಗಳನ್ನು ಗೆದ್ದಿದ್ದು ಸ್ವಂತ ಶಕ್ತಿಯಿಂದ. 130-140 ಸೀಟು ಗೆದ್ದಿದ್ದೀವಿ ಎಂಬ ಅಹಂಕಾರ ಶಾಶ್ವತವಲ್ಲ. ತಮಿಳುನಾಡಲ್ಲಿ ಡಿಎಂಕೆ ಬಳಿಯಿಂದ ರಾಷ್ಟ್ರೀಯ ಪಕ್ಷ ಕಾಂಗ್ರೆಸ್​ 28 ಸೀಟುಗಳನ್ನು ಪಡೆದಿದ್ದು, ಆ ಪೈಕಿ ಕೆಲ ಕ್ಷೇತ್ರಗಳಿಗೂ ಅಭ್ಯರ್ಥಿಗಳಿಲ್ಲದೆ ಬೀದಿಯಲ್ಲಿ ಹೋಗುವವರನ್ನು ತಂದು ನಿಲ್ಲಿಸಿದ್ದಾರೆ ಎಂದು ವ್ಯಂಗ್ಯವಾಡಿದರು.

ದಾವಣಗೆರೆ ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಪರ ಪ್ರಚಾರ ನಡೆಸಿದ ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಶ್ಚಿಮ ಏಷ್ಯಾದ ಸಂಘರ್ಷದ ಪರಿಣಾಮವಾಗಿ ಆಟೋ ಎಲ್‌ಪಿಜಿ ಕೊರತೆ ಉಂಟಾಗಿ ಆಟೋ ಚಾಲಕರ ಜೀವನೋಪಾಯಕ್ಕೆ ತೊಂದರೆಯಾಗಿದೆ. ಕೇಂದ್ರ ಸರ್ಕಾರ ಜನರ ಸಂಕಷ್ಟಗಳಿಗೆ ಸ್ಪಂದಿಸಲು ನೋಡುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇತರ ದೇಶಗಳೊಂದಿಗೆ ಹೊಂದಿರುವ ಉತ್ತಮ ಸಂಬಂಧದ ಕಾರಣ ದೇಶದಲ್ಲಿ ಎದುರಾಗಲಿದ್ದ ದೊಡ್ಡ ಸಂಕಷ್ಟವನ್ನು ತಪ್ಪಿಸಲಾಗಿದೆ ಎಂದು ಹೇಳಿದರು.

ಈ ವಿಷಯವನ್ನು ಟೀಕಿಸುತ್ತಿರುವ ಕಾಂಗ್ರೆಸ್ ಸದಸ್ಯರು, ಇಂತಹ ಕಠಿಣ ಸಂದರ್ಭಗಳಲ್ಲಿ ಅವರು ಅಧಿಕಾರದಲ್ಲಿದ್ದರೆ ಏನು ಮಾಡುತ್ತಿದ್ದರು ಎಂಬುದನ್ನು ಹೇಳಬೇಕು ಎಂದರು.

ವಿಧಾನಸಭೆಯಲ್ಲಿ ಐಪಿಎಲ್ ಟಿಕೆಟ್‌ಗಳ ಬೇಡಿಕೆಯನ್ನು ಉಲ್ಲೇಖಿಸಿ, ಈ ವಿಷಯದಲ್ಲಿ ಜನರು ರಾಜ್ಯ ಸರ್ಕಾರವನ್ನು ಹಾಸ್ಯ ಮಾಡುತ್ತಿದ್ದಾರೆ. ವಿಧಾನಸಭೆಯಲ್ಲಿ ಐಪಿಎಲ್ ಟಿಕೆಟ್ ಕುರಿತು ಚರ್ಚೆಯೇ ನಡೆಯಿತು. ಅವರಿಗೆ ಲಜ್ಜೆ ಇಲ್ಲವೇ ಎಂದು ಪ್ರಶ್ನಿಸಿದರು.

ರಾಜ್ಯ ಸರ್ಕಾರವನ್ನು ಟೀಕಿಸಿದ ಕುಮಾರಸ್ವಾಮಿ, ಕಾಂಗ್ರೆಸ್ ಶಾಸಕರ ಜೇಬಿನಿಂದಲೇ ಗ್ಯಾರಂಟಿಗಳ ಹೆಸರಿನಲ್ಲಿ ಜನರಿಗೆ ಹಣ ನೀಡಲಾಗುತ್ತಿದೆಯೇ, ಸರ್ಕಾರ ಹಲವಾರು ವಸ್ತುಗಳ ಮೇಲೆ ತೆರಿಗೆ ಹೆಚ್ಚಿಸುತ್ತಿದೆ. ರಾಜ್ಯದ ತಲಾ ಆದಾಯ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ ಎಂದರು.

ಮುಖ್ಯಮಂತ್ರಿ ರಾಜ್ಯದ ಬಜೆಟ್ ಕೇಂದ್ರಕ್ಕಿಂತ ಉತ್ತಮ ಎಂದು ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಜನರು ಆರ್ಥಿಕವಾಗಿ ಸದೃಢರಾಗಿದ್ದರೆ, ಗ್ಯಾರಂಟಿ ಯೋಜನೆಗಳನ್ನು ಏಕೆ ನೀಡಬೇಕು ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.