ವೇದಿಕೆ ಸಜ್ಜಾಗಿದೆ, ಕೆಲವೇ ದಿನಗಳಲ್ಲಿ ಯತ್ನಾಳ್ ಬಿಜೆಪಿಗೆ ವಾಪಸ್: ಸಂಚಲನ ಸೃಷ್ಟಿಸಿದ ರಮೇಶ್ ಜಾರಕಿಹೊಳಿ ಹೇಳಿಕೆ
ಇಂದು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಉಚ್ಚಾಟನೆಯಾದ ದಿನದಿಂದ ನಾನು ಯತ್ನಾಳ್ ಅವರನ್ನು ಮತ್ತೆ ಬಿಜೆಪಿಗೆ ಕರೆತರುವ ಪ್ರಯತ್ನ ಮಾಡುತ್ತಿದ್ದೇನೆ ಎಂದರು.

ಬೆಳಗಾವಿ: ಬಿಜೆಪಿಯಿಂದ ಉಚ್ಚಾಟಿತರಾಗಿರುವ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕೆಲವೇ ದಿನಗಳಲ್ಲಿ ವಾಪಸ್ ಬಿಜೆಪಿಗೆ ಬರುತ್ತಾರೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರು ಮಂಗಳವಾರ ಹೇಳಿದ್ದಾರೆ.
ಇಂದು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಉಚ್ಚಾಟನೆಯಾದ ದಿನದಿಂದ ನಾನು ಯತ್ನಾಳ್ ಅವರನ್ನು ಮತ್ತೆ ಬಿಜೆಪಿಗೆ ಕರೆತರುವ ಪ್ರಯತ್ನ ಮಾಡುತ್ತಿದ್ದೇನೆ. ಈಗಾಗಲೇ ಒಂದು ವೇದಿಕೆ ಸಜ್ಜಾಗಿದೆ ಎಂದರು.
ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಯತ್ನಾಳ್ ಪ್ರಚಾರ ನಡೆಸಿದ್ದು ಒಳ್ಳೆಯ ಬೆಳವಣಿಗೆ. ಯತ್ನಾಳ್ ಪ್ರಚಾರದಿಂದ ನಮ್ಮ ಅಭ್ಯರ್ಥಿಗೆ ಲಾಭವಾಗಬಹುದು ಎಂದರು.
ಯತ್ನಾಳ್ ಬಿಜೆಪಿಗೆ ಬಂದರೆ ಒಳ್ಳೆಯದು. ಹಿಂದೂ ಸಂಘಟನೆ ಮತ್ತು ಬಿಜೆಪಿ ಮತ ಕ್ರೋಢಿಕರಣಕ್ಕೆ ಅನುಕೂಲವಾಗುತ್ತದೆ. ಉಪಚುನಾವಣೆಯಲ್ಲಿ ನಮ್ಮ ಪಕ್ಷದವರು ಒಳ್ಳೆಯ ರೀತಿಯಲ್ಲಿ ಕೆಲಸ ಮಾಡಿದ್ದು ಗೆಲ್ಲುವ ವಿಶ್ವಾಸ ಇದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



