ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಮುಸ್ಲಿಮರಿಗೆ ಕೊಡದ ಹಿನ್ನೆಲೆಯಲ್ಲಿ ಶುರುವಾದ ಬಂಡಾಯ ಗೊಂದಲ ನಡುವೆ ಮತದಾನ ಮುಗಿದಿದೆ. ಇದರ ಬೆನ್ನಲ್ಲೇ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ MLC ಆಗಿರುವ ಅಬ್ದುಲ್ ಜಬ್ಬಾರ್ ರಾಜೀನಾಮೆ ಸಲ್ಲಿಸಿದ್ದಾರೆ.

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಮುಸ್ಲಿಮರಿಗೆ ಕೊಡದ ಹಿನ್ನೆಲೆಯಲ್ಲಿ ಶುರುವಾದ ಬಂಡಾಯ ಗೊಂದಲ ನಡುವೆ ಮತದಾನ ಮುಗಿದಿದೆ. ಇದರ ಬೆನ್ನಲ್ಲೇ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ MLC ಆಗಿರುವ ಅಬ್ದುಲ್ ಜಬ್ಬಾರ್ ರಾಜೀನಾಮೆ ಸಲ್ಲಿಸಿದ್ದಾರೆ.
ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಅಭಿಷೇಕ್ ದತ್ ಅವರು, ಉಪಚುನಾವಣಾ ಸಂದರ್ಭದಲ್ಲಿ ಪಕ್ಷದ ಆಂತರಿಕ ಬೆಳವಣಿಗೆಗಳು ಮತ್ತು ನಾಯಕರ ನಡುವಿನ ಮುನಿಸು ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಅಡ್ಡಿಯಾಗಬಹುದು ಎಂದು ವರದಿ ನೀಡಿದ್ದರು. ಈ ವರದಿ ಬಂದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಕಠಿಣ ಕ್ರಮಕ್ಕೆ ಮುಂದಾಗಿದೆ. ತನ್ನನ್ನು ಸಸ್ಪೆಂಡ್ ಮಾಡುತ್ತಾರೆ ಎಂಬ ಸೂಚನೆ ಸಿಗುತ್ತಿದ್ದಂತೆಯೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮತ್ತು ಎಂಎಲ್‌ಸಿ ಅಬ್ದುಲ್ ಜಬ್ಬಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



