ರಾಜಕೀಯ

'ನನ್ನ ಹಣೆಬರಹ ಎಲ್ಲಿದೆಯೋ, ಜನ ಎಲ್ಲಿ ಗೆಲ್ಲಿಸ್ತಾರೊ ನೋಡೋಣ; ನಮ್ಮ ಸಂಖ್ಯೆ ನೋಡಿ ಅಪಹಾಸ್ಯ ಮಾಡಿದ್ದಾರೆ, 2028 ರಲ್ಲಿ ಸರ್ಕಾರ ರಚಿಸ್ತಿವಿ'

ಜನ ಎಲ್ಲಾ ಕಡೆ ನಮ್ಮನ್ನೇ ಪ್ರೀತಿಸ್ತಾರೆ. ಕುಮಾರಸ್ವಾಮಿ ಅನುಪಸ್ಥಿತಿಯಲ್ಲಿ ನನ್ನನ್ನು ಕರೆಯುತ್ತಾರೆ. ಹಾಗಾಗಿ ನಾನು ಎಲ್ಲಾ ಕಡೆ ಹೋಗಬೇಕಾಗುತ್ತೆ. ಇದಕ್ಕೆ ಬೇರೆ ಅರ್ಥ ಕಲ್ಪಿಸೋದು ಬೇಡ.

'ನನ್ನ ಹಣೆಬರಹ ಎಲ್ಲಿದೆಯೋ, ಜನ ಎಲ್ಲಿ ಗೆಲ್ಲಿಸ್ತಾರೊ ನೋಡೋಣ; ನಮ್ಮ ಸಂಖ್ಯೆ ನೋಡಿ ಅಪಹಾಸ್ಯ ಮಾಡಿದ್ದಾರೆ, 2028 ರಲ್ಲಿ ಸರ್ಕಾರ ರಚಿಸ್ತಿವಿ'
ನಿಖಿಲ್ ಕುಮಾರಸ್ವಾಮಿ
Published On :

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕು ಎಂಬುದು ಚುನಾವಣೆ ಸಮಯ ಬಂದಾಗ ನಿರ್ಧಾರ ಆಗಲಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜನ ಎಲ್ಲಾ ಕಡೆ ನಮ್ಮನ್ನೇ ಪ್ರೀತಿಸ್ತಾರೆ. ಕುಮಾರಸ್ವಾಮಿ ಅನುಪಸ್ಥಿತಿಯಲ್ಲಿ ನನ್ನನ್ನು ಕರೆಯುತ್ತಾರೆ. ಹಾಗಾಗಿ ನಾನು ಎಲ್ಲಾ ಕಡೆ ಹೋಗಬೇಕಾಗುತ್ತೆ. ಇದಕ್ಕೆ ಬೇರೆ ಅರ್ಥ ಕಲ್ಪಿಸೋದು ಬೇಡ.

ಸದನದಲ್ಲೂ ನಮ್ಮ ಸಂಖ್ಯೆ ನೋಡಿ ಅಪಹಾಸ್ಯ ಮಾಡಿದ್ದಾರೆ. ಹಾಗಾಗಿ ಪಕ್ಷ ಕಟ್ಟಿ ತೋರಿಸ್ತೀವಿ. NDA ಸರ್ಕಾರ ರಚನೆ ಮಾಡ್ತೀವಿ. ಎಲ್ಲಿ ಸ್ಪರ್ಧೆ ಎನ್ನುವುದು ಮುಂದೆ ತೀರ್ಮಾನ ಮಾಡೋಣ. ನಮ್ಮ ಉದ್ದೇಶ ನಮ್ಮ ಗುರಿ ಈಡೇರಬೇಕು. ಜೆಡಿಎಸ್ ಎಲ್ಲಿದೆ ಅಂತಾರೆ. ವಿಧಾನಸಭೆಯಲ್ಲಿ ಹೇಗೆ ಚರ್ಚೆ ಆಗುತ್ತೆ ನೋಡಿದ್ದೇವೆ. ಪಕ್ಷ ಕಟ್ಟಿ ತೋರಿಸ್ತೇವೆ. ನಮ್ಮ ಗುರಿ ಮೈತ್ರಿ ಅಧಿಕಾರಕ್ಕೆ ಬರಬೇಕು ಎಂದಿದ್ದಾರೆ.

ನಾವು ಯಾವುದೇ ಬೇಡಿಕೆ ಇಟ್ಟು ನಾವು ಮೈತ್ರಿ ಮಾಡಿಕೊಂಡಿಲ್ಲ. ಮೋದಿ, ಅಮಿತ್, ಕೇಂದ್ರದ ನಾಯಕರು ಏನು ನಿರ್ಧಾರ ಮಾಡ್ತಾರೋ ಅದಕ್ಕೆ ನಮ್ಮ ಒಪ್ಪಿಗೆ ಇದೆ ಎಂದು ಸ್ಪಷ್ಟಪಡಿಸಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೈತ್ರಿಕೂಟದಲ್ಲಿ ಸ್ಪರ್ಧಿಸುವ ಬಗ್ಗೆ ಇನ್ನೂ ಯಾವುದೇ ಚರ್ಚೆ ನಡೆದಿಲ್ಲ ಎಂದು ನಿಖಿಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.