ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎನ್ನುವುದಕ್ಕೆ ಹೆಚ್ಚುತ್ತಿರುವ ಇಂತಹ ಘಟನೆಗಳೇ ಸಾಕ್ಷಿ ಎಂದು ಹೇಳಿದೆ.

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಆರೋಪಿಸಿ ಜೆಡಿಎಸ್ ಗೃಹ ಸಚಿವ ಪರಮೇಶ್ವರ್ ವಿರುದ್ದ ಕೆಂಡಕಾರಿದೆ.
ಪುಡಿ ರೌಡಿಗಳ ಹಾವಳಿ ಕುರಿತು ಗೃಹ ಸಚಿವ ಡಾ.ಜಿ ಪರಮೇಶ್ವರ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಜೆಡಿಎಸ್, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎನ್ನುವುದಕ್ಕೆ ಹೆಚ್ಚುತ್ತಿರುವ ಇಂತಹ ಘಟನೆಗಳೇ ಸಾಕ್ಷಿ ಎಂದು ಹೇಳಿದೆ.
ಅಲ್ಲದೆ ಪುಡಿ ರೌಡಿಗಳ ಗುಂಪೊಂದು ಮನೆ ಮುಂದೆ ಮಾರಕಾಸ್ತ್ರ ಹಿಡಿದು ದಾಂಧಲೆ ನಡೆಸುತ್ತಿರುವ ವಿಡಿಯೋವೊಂದನ್ನು ಕೂಡ ಪೋಸ್ಟ್ ಮಾಡಿದೆ.
ಪೋಸ್ಟ್ ನಲ್ಲಿ, 'ಮಿಸ್ಟರ್ “ಗೊತ್ತಿಲ್ಲ” ಗೃಹ ಸಚಿವ ಡಾ.ಪರಮೇಶ್ವರ ಅವರೇ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎನ್ನುವುದಕ್ಕೆ ಹೆಚ್ಚುತ್ತಿರುವ ಇಂತಹ ಘಟನೆಗಳೇ ಸಾಕ್ಷಿ.
ಕಾನೂನು, ಪೊಲೀಸರ ಭಯವಿಲ್ಲದೆ, ಬೀದಿ ಬೀದಿಯಲ್ಲಿ ರೌಡಿಗಳು, ಪುಂಡರು ಲಾಂಗು, ಮಚ್ಚು ಹಿಡಿದು ರಾಜಾರೋಷವಾಗಿ ಓಡಾಡುವ ಮಟ್ಟಕ್ಕೆ ಪೊಲೀಸ್ ಇಲಾಖೆಯನ್ನು ನಿಷ್ಕ್ರಿಯ ಮಾಡಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ನಾಚಿಕೆಯಾಗಬೇಕು! ಎಂದು ಹೇಳಿದೆ.
ಅಲ್ಲದೆ ಕಾಂಗ್ರೆಸ್ ದುರಾಡಳಿತದಲ್ಲಿ ಗೃಹ ಇಲಾಖೆಯ ವೈಫಲ್ಯ ಹಾಗೂ ನಿಮ್ಮ ಅಸಮರ್ಥತೆಯಿಂದ ರಾಜ್ಯದ ಜನರಿಗೆ ಸುರಕ್ಷತೆಯ ಭಯ ಇನ್ನಿಲ್ಲದೆ ಕಾಡುತ್ತಿರುವುದಂತು ಸತ್ಯ ಎಂದು ಕಿಡಿಕಾರಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



