ರಾಜಕೀಯ

ಅತಿಯಾದ ಓಲೈಕೆ, ತುಷ್ಟೀಕರಣ ಕಾಂಗ್ರೆಸ್ ಪಕ್ಷಕ್ಕೆ ಮುಳುವು; ಕಾಶ್ಮೀರ-ಹರಿಯಾಣ-ಬಿಹಾರದ ಗತಿ ನಿಶ್ಚಿತ: ಆರ್. ಅಶೋಕ್

ಫೆಬ್ರವರಿ 2024ರಲ್ಲಿ ಸದನದಲ್ಲಿ ಮಾತಾನಾಡುವಾಗ ಅತಿಯಾದ ಮುಸ್ಲಿಂ ಓಲೈಕೆ, ವ್ಯಾಮೋಹ, ತುಷ್ಟೀಕರಣವೇ ಕಾಂಗ್ರೆಸ್ ಪಕ್ಷಕ್ಕೆ ಮುಂದೊಂದು ದಿನ ಮುಳುವಾಗುತ್ತೆ ಎಂದು ಭವಿಷ್ಯ ನುಡಿದಿದ್ದೆ ಎಂದಿದ್ದಾರೆ.

ಅತಿಯಾದ ಓಲೈಕೆ, ತುಷ್ಟೀಕರಣ ಕಾಂಗ್ರೆಸ್ ಪಕ್ಷಕ್ಕೆ ಮುಳುವು; ಕಾಶ್ಮೀರ-ಹರಿಯಾಣ-ಬಿಹಾರದ ಗತಿ ನಿಶ್ಚಿತ: ಆರ್. ಅಶೋಕ್
ಆರ್ ಅಶೋಕ್ — online desk
Published On :

ಬೆಂಗಳೂರು: ಎರಡು ವರ್ಷದ ಹಿಂದೆ ನಾನು ನುಡಿದಿದ್ದ ಭವಿಷ್ಯ ನಿಜವಾಗಿದೆ ಎಂದು ವಿಧಾನಸಭೆಯಲ್ಲಿ ವಿಪಕ್ಷದ ನಾಯಕ ಆರ್.ಅಶೋಕ ಹೇಳಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ ತುಷ್ಟೀಕರಣ ಹಿಂದೆ ನಾನು ಮಾತನಾಡಿದ್ದೆ ಅದೀಗ ನಿಜವಾಗುತ್ತಿದೆ ಎಂದು ಅಶೋಕ್ ಹೇಳಿದ್ದಾರೆ.

ಈ ಸಂಬಂದ ಈ ಹಿಂದೆ ತಾವು ವಿಧಾನಸಭೆಯಲ್ಲಿ ಮಾತನಾಡಿದ ವಿಡಿಯೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಟ್ಯಾಗ್ ಮಾಡಿರುವ ಅಶೋಕ್, ಕಾಂಗ್ರೆಸ್ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 2024ರಲ್ಲಿ ಸದನದಲ್ಲಿ ಮಾತಾನಾಡುವಾಗ ಅತಿಯಾದ ಮುಸ್ಲಿಂ ಓಲೈಕೆ, ವ್ಯಾಮೋಹ, ತುಷ್ಟೀಕರಣವೇ ಕಾಂಗ್ರೆಸ್ ಪಕ್ಷಕ್ಕೆ ಮುಂದೊಂದು ದಿನ ಮುಳುವಾಗುತ್ತೆ ಎಂದು ಭವಿಷ್ಯ ನುಡಿದಿದ್ದೆ ಎಂದಿದ್ದಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ ಸುತ್ತ ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸುತ್ತಿದ್ದರೆ, ಎರಡು ವರ್ಷಗಳ ಹಿಂದೆ ನಾನು ಸದನದಲ್ಲಿ ಹೇಳಿದ್ದು ಈಗ ನಿಜವಾಗುತ್ತಿದೆ ಎನ್ನಿಸುತ್ತಿದೆ. ಎಲ್ಲಿಯವರೆಗೂ ಪರ್ಯಾಯ ಆಯ್ಕೆ ಇರುವುದಿಲ್ಲವೋ ಅಲ್ಲಿಯವರೆಗೆ ಮಾತ್ರ ಮುಸ್ಲಿಮರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುತ್ತಾರೆ ಎಂಬ ಕಟು ಸತ್ಯವನ್ನ ಕಾಂಗ್ರೆಸ್ ಪಕ್ಷ ಈಗಲಾದರೂ ಅರ್ಥ ಮಾಡಿಕೊಳ್ಳಬೇಕು.

ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕರು ಈಗಲಾದರೂ ಎಚ್ಚೆತ್ತುಕೊಂಡು, ಓಲೈಕೆ, ತುಷ್ಟೀಕರಣದ ರಾಜಕಾರಣ ಬಿಟ್ಟು ಅಭಿವೃದ್ಧಿಯತ್ತ ಗಮನ ಹರಿಸಲಿ. ಇಲ್ಲವಾದರೆ ಜಮ್ಮು ಕಾಶ್ಮೀರದಲ್ಲಿ, ಹರಿಯಾಣ, ಬಿಹಾರ ಮುಂತಾದ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಂದಿರುವ ಗತಿಯೇ ಕರ್ನಾಟಕದಲ್ಲಿಯೂ ಬರುವುದು ನಿಶ್ಚಿತ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.