ರಾಜಕೀಯ

ಸಣ್ಣ ಬುದ್ದಿ, ಮೂರ್ಖತನ: ಏಪ್ರಿಲ್ 4ರಂದೇ ರಾಜಿನಾಮೆ ನೀಡಿದ್ದೇನೆ, ಉಚ್ಛಾಟನೆ ಎಲ್ಲಿಂದ ಬಂತು; ಕಾಂಗ್ರೆಸ್ ವಿರುದ್ದ Afreen Khan ಕಿಡಿ

ದಾವಣೆಗೆರೆ ಉಪಚುನಾವಣೆ ಪಕ್ಷ ವಿರೋಧ ಚಟುವಟಿಕೆ ಕಾಂಗ್ರೆಸ್ ನಲ್ಲಿ ಬಂಡಾಯಕ್ಕೆ ಕಾರಣವಾಗಿದ್ದು, ಈಗಾಗಲೇ ಸಾಕಷ್ಟು ಮುಸ್ಲಿಂ ನಾಯಕರನ್ನು ಅವರ ಸ್ಥಾನಗಳಿಂದ ವಜಾಗೊಳಿಸಲಾಗಿದೆ.

ಸಣ್ಣ ಬುದ್ದಿ, ಮೂರ್ಖತನ: ಏಪ್ರಿಲ್ 4ರಂದೇ ರಾಜಿನಾಮೆ ನೀಡಿದ್ದೇನೆ, ಉಚ್ಛಾಟನೆ ಎಲ್ಲಿಂದ ಬಂತು; ಕಾಂಗ್ರೆಸ್ ವಿರುದ್ದ Afreen Khan ಕಿಡಿ
ಅಫ್ರೀನ್ ಖಾನ್
Published On :

ಬೆಂಗಳೂರು: ಯುವ ಕಾಂಗ್ರೆಸ್ (Youth Congress) ಬೆಂಗಳೂರು ಉತ್ತರದ ಜಿಲ್ಲಾ ಉಪಾಧ್ಯಕ್ಷರ ಸ್ಥಾನದಿಂದ ಉಚ್ಛಾಟಿಸಲಾಗಿದೆ ಎಂಬ ಆದೇಶ ಕಾಂಗ್ರೆಸ್ ಪಕ್ಷದ ಮೂರ್ಖತನದ ಪರಮಾವಧಿ ಎಂದು ಆಫ್ರೀನ್ ಖಾನ್ (Afreen Khan) ಕಿಡಿಕಾರಿದ್ದಾರೆ.

ದಾವಣೆಗೆರೆ ಉಪಚುನಾವಣೆ ಪಕ್ಷ ವಿರೋಧ ಚಟುವಟಿಕೆ ಕಾಂಗ್ರೆಸ್ ನಲ್ಲಿ ಬಂಡಾಯಕ್ಕೆ ಕಾರಣವಾಗಿದ್ದು, ಈಗಾಗಲೇ ಸಾಕಷ್ಟು ಮುಸ್ಲಿಂ ನಾಯಕರನ್ನು ಅವರ ಸ್ಥಾನಗಳಿಂದ ವಜಾಗೊಳಿಸಲಾಗಿದೆ. ಮತ್ತೆ ಕೆಲವು ನಾಯಕರ ಅಮಾನತು ಮಾಡಲಾಗಿದ್ದು, ಹಲವರನ್ನು ಉಚ್ಛಾಟನೆ ಮಾಡಲಾಗಿದೆ. ಅಲ್ಲದೆ ಸಚಿವ ಜಮೀರ್ ಅಹ್ಮದ್ ಸ್ಥಾನಕ್ಕೂ ಕುತ್ತು ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಈ ಬೆಳವಣಿಗೆ ನಡುವೆಯೇ ಯುವ ಕಾಂಗ್ರೆಸ್ (Youth Congress) ಬೆಂಗಳೂರು ಉತ್ತರದ ಜಿಲ್ಲಾ ಉಪಾಧ್ಯಕ್ಷೆಯಾಗಿದ್ದ ಅಫ್ರೀನ್ ಖಾನ್ ಕೂಡ ಕಾಂಗ್ರೆಸ್ ಪಕ್ಷದ ವಿರುದ್ದ ತಿರುಗಿಬಿದ್ದಿದ್ದು, ನಾನಾಗಿಯೇ ರಾಜಿನಾಮೆ ನೀಡಿರುವಾಗ ಉಚ್ಛಾಟನೆ ಎಲ್ಲಿಂದ ಬಂತು ಎಂದು ಪ್ರಶ್ನಿಸಿದ್ದಾರೆ.

ಈ ಕುರಿತು ಫೇಸ್ ಬುಕ್ ನಲ್ಲಿ ಲೈವ್ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಆಫ್ರೀನ್ ಖಾನ್ ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆಗಿದ್ದೇನು?

ದಾವಣಗೆರೆ ಉಪ ಚುನಾವಣೆಗೆ ಸಂಬಂಧಿಸಿದಂತೆ ಬೆಂಗಳೂರಿನ ಶಿವಾಜಿನಗರದ ಶಾಸಕ ರಿಜ್ವಾನ್ ಅರ್ಷದ್ (Rizwan Arshad) ವಿರುದ್ಧ ಆಫ್ರೀನ್ ಖಾನ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಪ್ರಕಟಿಸಿದ್ದರು. ಇಂದು ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಅವರು ಅಫ್ರೀನ್ ಖಾನ್ ಅವರನ್ನು ಉಚ್ಚಾಟನೆ ಮಾಡಿ ಆದೇಶ ಪ್ರಕಟಿಸಿದ್ದಾರೆ.

ಉಚ್ಚಾಟನೆ ಆದೇಶಕ್ಕೆ ಪ್ರತಿಕ್ರಿಯಿಸಿದ ಆಫ್ರೀನ್ ಖಾನ್, ನಾನು ಏಪ್ರಿಲ್ 4 ರಂದೇ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದೇನೆ. ಆದರೆ ಇಂದು ನನ್ನನ್ನು ಹೊರಹಾಕಲಾಗಿದೆ ಎಂದು ಪೋಸ್ಟ್ ಮಾಡಿದ್ದಾರೆ. ಇದೆಂಥಾ ಮೂರ್ಖತನದ ನಿರ್ಧಾರ ಎಂದು ಅಫ್ರೀನ್ ಖಾನ್ ಪ್ರಶ್ನಿಸಿದ್ದಾರೆ.

ಅಲ್ಲದೆ, ಮುಸ್ಲಿಮ್‌ ನಾಯಕರನ್ನು ಯಾಕೆ ಟಾರ್ಗೆಟ್‌ ಮಾಡಲಾಗುತ್ತಿದೆ ಎನ್ನುವುದು ಗೊತ್ತಿಲ್ಲ. ಇದಕ್ಕೆಲ್ಲ 2028 ರ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ತಮ್ಮ ಸಿಟ್ಟು ಹೊರಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.