ಸಚಿವ ಸ್ಥಾನಕ್ಕಾಗಿ 'ಕೈ' ಪಾಳಯದಲ್ಲಿ ಪೈಪೋಟಿ: ಸಂಪುಟ ಸೇರುವ ಆಸೆ ಬಿಚ್ಚಿಟ್ಟ ಶಾಸಕ ಆಸೀಫ್ ಸೇಠ್
ಮೈಸೂರು, ಬೆಂಗಳೂರು ಮತ್ತು ಮಂಗಳೂರಿನಂತಹ ಪ್ರದೇಶಗಳ ಅಲ್ಪಸಂಖ್ಯಾತ ಸಮುದಾಯದ ಶಾಸಕರನ್ನು ಹಿಂದೆ ಸಂಪುಟದಲ್ಲಿ ಸೇರಿಸಲಾಗಿದ್ದರೂ, ಉತ್ತರ ಕರ್ನಾಟಕವನ್ನು ನಿರಂತರವಾಗಿ ಕಡೆಗಣಿಸಲಾಗುತ್ತಿದೆ.

ಬೆಂಗಳೂರು: ಸಚಿವ ಸ್ಥಾನಕ್ಕಾಗಿ ರಾಜ್ಯ ಕಾಂಗ್ರೆಸ್ ಪೈಪೋಟಿ ಜೋರಾಗಿ ನಡೆಯುತ್ತಿದ್ದು, ಇದರ ನಡುವೆ ಶಾಸಕ ಆಸೀಫ್ ಸೇಠ್ ಅವರೂ ಕೂಡ ಸಚಿವರಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ದೆಹಲಿಯಲ್ಲಿ ನಡೆಸುತ್ತಿರುವ ಲಾಬಿಯನ್ನು ಸಮರ್ಥಿಸಿಕೊಂಡರು.
ಶಾಸಕರು ಸಚಿವ ಸ್ಥಾನಗಳನ್ನು ಪಡೆಯಲು ಹೈಕಮಾಂಡ್ ಅನ್ನು ಭೇಟಿಯಾಗುವುದರಲ್ಲಿ "ಯಾವುದೇ ತಪ್ಪಿಲ್ಲ" ಎಂದು ಹೇಳಿದರು.
ಮೈಸೂರು, ಬೆಂಗಳೂರು ಮತ್ತು ಮಂಗಳೂರಿನಂತಹ ಪ್ರದೇಶಗಳ ಅಲ್ಪಸಂಖ್ಯಾತ ಸಮುದಾಯದ ಶಾಸಕರನ್ನು ಹಿಂದೆ ಸಂಪುಟದಲ್ಲಿ ಸೇರಿಸಲಾಗಿದ್ದರೂ, ಉತ್ತರ ಕರ್ನಾಟಕವನ್ನು ನಿರಂತರವಾಗಿ ಕಡೆಗಣಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬೆಳಗಾವಿ ರಾಜ್ಯದ “ಎರಡನೇ ರಾಜಧಾನಿ” ಎಂಬ ಸ್ಥಾನಮಾನ ಹೊಂದಿರುವುದರಿಂದ, ಇಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಪ್ರತಿನಿಧಿತ್ವ ನೀಡುವುದು ಅಗತ್ಯ ಎಂದು ಒತ್ತಿ ಹೇಳಿದರು.
“ಅವಕಾಶ ನೀಡಿದರೆ ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತೇನೆ” ಎಂದು ಭರವಸೆ ನೀಡಿದರು.
ಇದೇ ವೇಳೆ, ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ನಾಜೀರ್ ಅಹ್ಮದ್ ಅವರನ್ನು ವಜಾಗೊಳಿಸಿರುವ ವಿಚಾರದ ಬಗ್ಗೆ ಮಾತನಾಡಿದ ಅವರು, ಅದರ ಹಿನ್ನೆಲೆ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ತಿಳಿಸಿದರು.
ದಾವಣಗೆರೆಯಲ್ಲಿ ನಡೆದ ಪ್ರಚಾರ ಸಂದರ್ಭದಲ್ಲಿ ನಸೀರ್ ಅಹ್ಮದ್ ತಮ್ಮೊಂದಿಗೆ ಸಕ್ರಿಯವಾಗಿ ಕೆಲಸ ಮಾಡಿದ್ದಾರೆ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



