ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನಾನು ಅವತ್ತೇ ಹೇಳಿದ್ದೆ, ಈಗ ನನ್ನ ಮಾತು ನಿಜವಾಗಿದೆ- ಯಡಿಯೂರಪ್ಪ
ಇಂದು ಚಿಕ್ಕಮಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ನಾನು ಅವತ್ತೇ ಹೇಳಿದ್ದೆ. ನಾನು ಆಡಿದ ಮಾತು ಈಗ ಸತ್ಯವಾಗಿದೆ ಎಂದಿದ್ದಾರೆ.

ಚಿಕ್ಕಮಗಳೂರು: ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶುಕ್ರವಾರ ತೀರ್ಪು ನೀಡಿದೆ.
ಇಂದು ಚಿಕ್ಕಮಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ನಾನು ಅವತ್ತೇ ಹೇಳಿದ್ದೆ. ನಾನು ಆಡಿದ ಮಾತು ಈಗ ಸತ್ಯವಾಗಿದೆ ಎಂದಿದ್ದಾರೆ. ಯೋಗೀಶ್ ಗೌಡ ಕುಟುಂಬಕ್ಕೆ ದೇವರು ಶಕ್ತಿ ನೀಡಲಿ ಎಂದು ಹೇಳಿದ್ದಾರೆ.
ಆರಂಭದಲ್ಲಿ ಸ್ಥಳೀಯ ಪೊಲೀಸರು, ಜಮೀನು ವಿವಾದದ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಹೇಳಿದ್ದರು. ನಂತರ ಯೋಗೀಶ್ ಗೌಡ ಕುಟುಂಬದ ಒತ್ತಾಯದ ಮೇರೆಗೆ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಅಂದಿನ ಬಿಜೆಪಿ ಸರ್ಕಾರವು ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿತ್ತು.
ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಮತ್ತು ಇತರರಿಗೆ ಕ್ರಿಮಿನಲ್ ಪಿತೂರಿ ಹಾಗೂ ಕೊಲೆ ಸೇರಿದಂತೆ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ ಯೋಗೇಶ್ ಗೌಡ ಅವರ ಮಕ್ಕಳಿಗೆ ಪರಿಹಾರವಾಗಿ 16 ಲಕ್ಷ ರೂಪಾಯಿ ನೀಡುವಂತೆ ಕೋರ್ಟ್ ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



