ರಾಜಕೀಯ

ತಮಿಳುನಾಡು ಚುನಾವಣೆ: ರಾಹುಲ್ ಗಾಂಧಿ ಪ್ರಚಾರ ಕಾರ್ಯಕ್ರಮದ ಉಸ್ತುವಾರಿ ಡಿ.ಕೆ ಸುರೇಶ್ ಹೆಗಲಿಗೆ!

ರಾಹುಲ್ ಗಾಂಧಿ ಅವರು ಏಪ್ರಿಲ್ 18ರಂದು ತಮಿಳುನಾಡಿಗೆ ತೆರಳಲಿದ್ದು, ಪೊನ್ನೇರಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದ ಪೂರ್ವಸಿದ್ಧತೆಯಲ್ಲಿ ತೊಡಗಿರುವ ಡಿ.ಕೆ. ಸುರೇಶ್ ಅವರು ಸಮಾವೇಶ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು

ತಮಿಳುನಾಡು ಚುನಾವಣೆ: ರಾಹುಲ್ ಗಾಂಧಿ ಪ್ರಚಾರ ಕಾರ್ಯಕ್ರಮದ ಉಸ್ತುವಾರಿ ಡಿ.ಕೆ ಸುರೇಶ್ ಹೆಗಲಿಗೆ!
ಡಿ.ಕೆ ಸುರೇಶ್
Published On :

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಪ್ರಚಾರ ಕಾರ್ಯಕ್ರಮದ ಉಸ್ತುವಾರಿಯನ್ನು ಮಾಜಿ ಸಂಸದರು ಹಾಗೂ ಬಮೂಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ ಅವರ ಹೆಗಲಿಗೆ ವಹಿಸಲಾಗಿದೆ.

ರಾಹುಲ್ ಗಾಂಧಿ ಅವರು ಏಪ್ರಿಲ್ 18ರಂದು ತಮಿಳುನಾಡಿಗೆ ತೆರಳಲಿದ್ದು, ಪೊನ್ನೇರಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದ ಪೂರ್ವಸಿದ್ಧತೆಯಲ್ಲಿ ತೊಡಗಿರುವ ಡಿ.ಕೆ. ಸುರೇಶ್ ಅವರು ಸಮಾವೇಶ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.

ರಾಹುಲ್ ಗಾಂಧಿ ಅವರ ಪ್ರಚಾರ ಕಾರ್ಯಕ್ರಮಗಳ ಸಿದ್ಧತೆ ಕುರಿತಂತೆ ಕೇಂದ್ರ ವೀಕ್ಷಕರ ಜತೆ ಸಭೆ ನಡೆಸಿದರು. ಡಿ.ಕೆ. ಸುರೇಶ್ ಅವರು ಪಕ್ಷದ ನಿರ್ದೇಶನದಂತೆ ಕಳೆದ ಕೆಲವು ದಿನಗಳಿಂದ ತಮಿಳುನಾಡು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.