ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಜಿಯನ್ನೇ ಕರೆಯೋದಿಲ್ಲವಲ್ಲ: ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ನನಗೆ ಆಸೆ ಇದೆ ಎಂದು ನಿಮಗೆ ಯಾರು ಹೇಳಿದರು? ನಮ್ಮ ಪಕ್ಷದಲ್ಲಿ ಏನೇ ತೀರ್ಮಾನ ಆಗಬೇಕಾದರೂ, ಅದನ್ನು ಹೈಕಮಾಂಡ್ ತೀರ್ಮಾನಿಸಬೇಕು. ಸಂಪುಟ ಪುನರ್ ರಚನೆ, ಸಿಎಂ ಬದಲಾವಣೆ, ಯಾರಿಗೆ ಅರ್ಹತೆ ಇದೆ, ಯಾರಿಗೆ ಅರ್ಹತೆ ಇಲ್ಲ ಎಂಬುದು ಸೇರಿ ಎಲ್ಲವನ್ನೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ.

ಬೆಳಗಾವಿ: ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಜಿ ಕರೆದರೆ ಹಾಕಬಹುದು. ಆದರೆ, ಅರ್ಜಿಯನ್ನೇ ಕರೆಯೋದಿಲ್ಲವಲ್ಲ ಎನ್ನುವ ಮೂಲಕ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಪರೋಕ್ಷವಾಗಿ ತಾವೂ ಕೂಡ ಸಿಎಂ ಸ್ಥಾನದ ಆಕಾಂಕ್ಷಿ ಎಂಬ ಇಂಗಿತ ವ್ಯಕ್ತಪಡಿಸಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಸಕರಿಗೆ ಮಂತ್ರಿ ಆಗುವ ಆಸೆ ಇದೆ, ಮಂತ್ರಿ ಆಗಿರುವ ಪರಮೇಶ್ವರ್ ಅವರಿಗೆ ಸಿಎಂ ಆಗುವ ಆಸೆ ಇಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದರು.
ನನಗೆ ಆಸೆ ಇದೆ ಎಂದು ನಿಮಗೆ ಯಾರು ಹೇಳಿದರು? ನಮ್ಮ ಪಕ್ಷದಲ್ಲಿ ಏನೇ ತೀರ್ಮಾನ ಆಗಬೇಕಾದರೂ, ಅದನ್ನು ಹೈಕಮಾಂಡ್ ತೀರ್ಮಾನಿಸಬೇಕು. ಸಂಪುಟ ಪುನರ್ ರಚನೆ, ಸಿಎಂ ಬದಲಾವಣೆ, ಯಾರಿಗೆ ಅರ್ಹತೆ ಇದೆ, ಯಾರಿಗೆ ಅರ್ಹತೆ ಇಲ್ಲ ಎಂಬುದು ಸೇರಿ ಎಲ್ಲವನ್ನೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಹೇಳಿದರು.
224 ಶಾಸಕರು ಮಂತ್ರಿ ಆಗಲು ಅರ್ಹರಿದ್ದಾರೆ. ಅದರಲ್ಲಿ ಯಾವುದೇ ಅನುಮಾನ ಇಲ್ಲ. ನಮ್ಮ ಕಾಂಗ್ರೆಸ್ ಪಕ್ಷದಿಂದ ಗೆದ್ದಿರುವ ಎಲ್ಲಾ 136 ಶಾಸಕರಿಗೂ ಸಚಿವರಾಗಲು ಅರ್ಹತೆ ಇದೆ. ಆದರೆ, ಅದರಲ್ಲಿ ಸಚಿವರನ್ನಾಗಿ ಮಾಡುವುದು ಕೇವಲ ಶೇ.15ರಷ್ಟು ಮಾತ್ರ.
ಈಗಿರುವ ಮಂತ್ರಿಗಳನ್ನು ಸಂಪುಟ ಪುನರ್ ರಚನೆಯಲ್ಲಿ ಬದಲಾಯಿಸಿ, ಬೇರೆಯವರಿಗೆ ಮಂತ್ರಿ ಸ್ಥಾನ ನೀಡುವುದು ಎಲ್ಲಾ ಸರ್ಕಾರದಲ್ಲೂ ಆಗುತ್ತದೆ. ಹೀಗಾಗಿ, ಎರಡು, ಮೂರು ಬಾರಿ ಗೆದ್ದ ಶಾಸಕರು ಸಚಿವ ಸ್ಥಾನ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ. ಅವರಿಗೆ ಅರ್ಹತೆ ಇರುವುದರಿಂದ ಕೇಳುತ್ತಿದ್ದಾರೆ. ಅಂತಿಮವಾಗಿ ಹೈಕಮಾಂಡ್ನವರು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



