ಮುಂದೊಂದು ದಿನ ನಿಖಿಲ್ CM ಆಗೇ ಆಗ್ತಾರೆ; ಮೂರು ಚುನಾವಣೆಯಲ್ಲಿ ಸೋತಿದ್ದರೂ ಅಧಿಕಾರಕ್ಕೆ ಅಂಟಿಕೊಂಡಿಲ್ಲ: G.D ಹರೀಶ್ ಗೌಡ
ಹಿಂದೆ ಮೈಸೂರು ಜಿಲ್ಲೆಯ ಮೂರು ವಿಧಾನಸಭೆ ಕ್ಷೇತ್ರಗಳಲ್ಲಿ ಜೆಡಿಎಸ್ ಶಾಸಕರು ಗೆದ್ದಿದ್ದರು, ಈಗಲೂ ಜಿಲ್ಲೆಯಲ್ಲಿ ಜೆಡಿಎಸ್ ಪ್ರಬಲವಾಗಿದೆ ಎಂದು ಹೇಳಿದರು.

ಮೈಸೂರು: ಮೂರು ಚುನಾವಣೆಯಲ್ಲಿ ಸೋತಿದ್ದರೂ ನಿಖಿಲ್ ಅಧಿಕಾರಕ್ಕೆ ಅಂಟಿಕೊಂಡಿಲ್ಲ, ಪಕ್ಷದ ಬೆಳವಣಿಗೆಗಾಗಿ ಶ್ರಮಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ನಿಖಿಲ್ ಕುಮಾರಸ್ವಾಮಿ ಕೂಡ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ ಎಂಬ ಶಾಸಕೆ ಜಿ.ಡಿ ಹರೀಶ್ ಗೌಡ ವಿಶ್ವಾಸ ವ್ಯಕ್ತಪಡಿಸಿದರು.
ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದೆ ಮೈಸೂರು ಜಿಲ್ಲೆಯ ಮೂರು ವಿಧಾನಸಭೆ ಕ್ಷೇತ್ರಗಳಲ್ಲಿ ಜೆಡಿಎಸ್ ಶಾಸಕರು ಗೆದ್ದಿದ್ದರು, ಈಗಲೂ ಜಿಲ್ಲೆಯಲ್ಲಿ ಜೆಡಿಎಸ್ ಪ್ರಬಲವಾಗಿದೆ ಎಂದು ಹೇಳಿದರು.
ಇಂದಿನ ಕಾರ್ಯಕ್ರಮದ ಮೂಲಕ ಜೆಡಿಎಸ್ ತನ್ನ ಶಕ್ತಿಯನ್ನು ತೋರಿಸಿದೆ. 2028ರ ವೇಳೆಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಬೇಕು ಎಂಬುದು ಜನರ ಆಶಯ ಎಂದು ಹೇಳಿದರು.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದ ಅವರು, ಪಕ್ಷವನ್ನು ಸಂಘಟಿಸಲು ನಿಖಿಲ್ ಕುಮಾರಸ್ವಾಮಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



