ಮೇ 20ರೊಳಗೆ ಸಚಿವ ಸಂಪುಟ ವಿಸ್ತರಣೆ; ಈಗಿರುವ ಶೇ.50 ಸಚಿವರನ್ನು ಕೈಬಿಡಿ: ಸಲೀಂ ಆಹ್ಮದ್
ಸಿಎಂ ಸಿದ್ದರಾಮಯ್ಯ ಅವರಿಗೆ ಎಲ್ಲರೂ ಆಪ್ತರು. ಅವರು ತಮ್ಮ ಮಂತ್ರಿ ಮಂಡಲದ ಸಭೆ ಮತ್ತು ಶಾಸಕರ ಸಭೆ ಮಾಡುತ್ತಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.

ಹುಬ್ಬಳ್ಳಿ: ಎಲ್ಲ ಹಿರಿಯ ಶಾಸಕರು ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಮಾಡಿದ್ದಾರೆ. ಮೇ 20ರೊಳಗೆ ಸಚಿವ ಸಂಪುಟ ವಿಸ್ತರಣೆಯಾಗುವ ವಿಶ್ವಾಸವಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಈ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಎಲ್ಲರೂ ಆಪ್ತರು. ಅವರು ತಮ್ಮ ಮಂತ್ರಿ ಮಂಡಲದ ಸಭೆ ಮತ್ತು ಶಾಸಕರ ಸಭೆ ಮಾಡುತ್ತಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.
ನಾಯಕತ್ವ ಬದಲಾವಣೆ ಮಾತೇ ಇಲ್ಲ. ಈ ಕುರಿತು ಮಾತನಾಡದಂತೆ ಹೈಕಮಾಂಡ್ ಸೂಚನೆ ನೀಡಿದೆ. ಹೀಗಾಗಿ ಈ ಬಗ್ಗೆ ಯಾವುದೇ ಹೇಳಿಕೆ ನೀಡುವುದಿಲ್ಲ. ವಿವಿಧ ರಾಜ್ಯಗಳು ಹಾಗೂ ರಾಜ್ಯದಲ್ಲಿನ ಉಪ ಚುನಾವಣೆ ಫಲಿತಾಂಶ ಮೇ 4ರಂದು ಬರಲಿದ್ದು, ನಂತರ ಸಂಪುಟ ವಿಸ್ತರಣೆ ವಿಷಯ ಚರ್ಚೆಗೆ ಬರಲಿದೆ.
ಈಗಿರುವ ಶೇ.50 ಸಚಿವರನ್ನು ಪಕ್ಷದ ಕೆಲಸಕ್ಕೆ ನಿಯೋಜನೆ ಮಾಡಬೇಕು. ಉಳಿದವರಿಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದೇವೆ. ಈ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ಧ ಎಂದು ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರ ವಿರುದ್ಧ ಕ್ರಮಕ್ಕೆ ಸಚಿವ ಜಮೀರ್ ಅಹಮದ್ ಖಾನ್ ಒತ್ತಾಯಿಸಿದ್ದಾರೆ. ಇದು ನಾನು ಸೇರಿದಂತೆ ಪ್ರತಿಯೊಬ್ಬ ಕಾರ್ಯಕರ್ತನ ಒತ್ತಾಯವಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



