'ನಮಗೆ ನಮ್ಮ ಪಕ್ಷದ ಮೇಲೆ ವಿಶ್ವಾಸ ಇದೆ, ಯಾವ ಸಮಯದಲ್ಲಿ ಏನು ಮಾಡಬೇಕೋ ಅದನ್ನು ಮಾಡ್ತಾರೆ': ಡಿ.ಕೆ ಶಿವಕುಮಾರ್
ಈ ಕುರಿತು ಇಂದು ಮಾತನಾಡಿದ ಡಿ.ಕೆ. ಶಿವಕುಮಾರ್, ತಮ್ಮ ಹುಟ್ಟುಹಬ್ಬದಂದು ಯಾವುದೇ ಕಾರ್ಯಕರ್ತರು ಅಥವಾ ಅಭಿಮಾನಿಗಳು ಫ್ಲೆಕ್ಸ್, ಬ್ಯಾನರ್‌ಗಳನ್ನು ಹಾಕದಂತೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೇ 15 ರಂದು ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ದೆಹಲಿಗೆ ಹೋಗಿ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿ ಬಂದಿದ್ದರು, ಮೇ ತಿಂಗಳಲ್ಲಿ ರಾಜಕೀಯ ಕ್ರಾಂತಿ ಕರ್ನಾಟಕದಲ್ಲಿ ಆಗುತ್ತಾ ಎಂಬ ಮಾತುಗಳು ಕೇಳಿಬರುತ್ತಿದೆ.
ಈ ಕುರಿತು ಇಂದು ಮಾತನಾಡಿದ ಡಿ.ಕೆ. ಶಿವಕುಮಾರ್, ತಮ್ಮ ಹುಟ್ಟುಹಬ್ಬದಂದು ಯಾವುದೇ ಕಾರ್ಯಕರ್ತರು ಅಥವಾ ಅಭಿಮಾನಿಗಳು ಫ್ಲೆಕ್ಸ್, ಬ್ಯಾನರ್‌ಗಳನ್ನು ಹಾಕದಂತೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಜಾಹೀರಾತು ಬೇಕಿದ್ದರೆ ಹಣ ಕಟ್ಟಿ ಮಾಡಿಕೊಳ್ಳಿ, ಆದರೆ ರಸ್ತೆಯಲ್ಲಿ ಹಾಕಬಾರದು ಎಂದು ಮನವಿ ಮಾಡಿದ್ದಾರೆ
ಪಕ್ಷದಲ್ಲಿನ ಸಿಎಂ ಕುರ್ಚಿ ಕಾದಾಟ ಮತ್ತು ಸಚಿವ ಸಂಪುಟ ಪುನಾರಚನೆ ಕುರಿತ ಗೊಂದಲಗಳ ನಡುವೆ, ಸಚಿವ ಸತೀಶ್ ಜಾರಕಿಹೊಳಿ ಪಕ್ಷದಲ್ಲಿ ಗೊಂದಲವಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ, ನಮಗೆ ನಮ್ಮ ಪಕ್ಷದ ಮೇಲೆ ವಿಶ್ವಾಸ ಇದೆ. ಯಾವ ಸಮಯದಲ್ಲಿ ಏನು ಮಾಡಬೇಕೋ ಅದನ್ನು ಮಾಡ್ತಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



